ರಾಜ್ಯದಲ್ಲಿ ಗಣೇಶೋತ್ಸವ ನಿರ್ಬಂಧ ರದ್ದು: ಕಂದಾಯ ಸಚಿವ ಆರ್ ಅಶೋಕ್
ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಸಂಬಂಧಿಸಿದಂತೆ ಕೋವಿಡ್ ಸಮಯದಲ್ಲಿದ್ದ ನಿರ್ಬಂಧಗಳನ್ನು ತೆಗೆದು ಹಾಕಲಾಗಿದೆ ಎಂದು ಕಂದಾಯ ಸಚಿವ ಆರ್ ಅಶೋಕ್ ಹೇಳಿದ್ದಾರೆ.

ಬೆಂಗಳೂರು: ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಸಂಬಂಧಿಸಿದಂತೆ ಕೋವಿಡ್ ಸಮಯದಲ್ಲಿದ್ದ ನಿರ್ಬಂಧಗಳನ್ನು ತೆಗೆದು ಹಾಕಲಾಗಿದೆ ಎಂದು ಕಂದಾಯ ಸಚಿವ ಆರ್ ಅಶೋಕ್ ಹೇಳಿದ್ದಾರೆ.
ವಿಧಾನಸೌಧದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಂದಾಯ ಸಚಿವರು, ಗಣೇಶೋತ್ಸವ ಆಚರಣೆಗೆ ಯಾವುದೇ ಇತಿ ಮಿತಿಯಾಗಲೀ, ನಿರ್ಬಂಧವಾಗಲೀ ಇರುವುದಿಲ್ಲ. ಬೆಂಗಳೂರು ನಗರದಲ್ಲಿ ವಾರ್ಡ್‌ಗೆ ಒಂದು ಗಣೇಶ ಕೂರಿಸಬೇಕು ಎಂಬ ಮಹಾನಗರ ಪಾಲಿಕೆ ನಿಯಮಗಳ ಬಗ್ಗೆ ಸ್ಪಷ್ಟನೆ ನೀಡಿ, ಈ ಹಿಂದೆ ಕೋವಿಡ್ ಇದ್ದ ಕಾರಣ ಗಣೇಶೋತ್ಸವ ಆಚರಣೆಗೆ ಮಿತಿ ಹೇರಲಾಗಿತ್ತು. ಈಗ ಆ ರೀತಿಯ ಯಾವುದೇ ನಿಯಮಗಳು ಇಲ್ಲ. ಈ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿದ್ದೇನೆ ಎಂದರು.
ಈ ಬಾರಿ ಸಾರ್ವಜನಿಕ ಗಣೇಶೋತ್ಸವವನ್ನು ಕೋವಿಡ್ ಪೂರ್ವದಲ್ಲಿ ಯಾವ ರೀತಿ ಬೀದಿಗಳಲ್ಲಿ ಆಚರಿಸುತ್ತಿದ್ದರೋ ಆ ರೀತಿ ಆಚರಿಸಬಹುದು. ರಸ್ತೆಗೊಂದು, ವಾರ್ಡ್‌ಗೊಂದು, ಬೀದಿಗೊಂದು ಎಂಬ ನಿಯಮಗಳು ಇರುವುದಿಲ್ಲ ಎಂದರು.
ಗಣೇಶೋತ್ಸವ ಸಂದರ್ಭದಲ್ಲಿ ಪ್ಲಾಸ್ಟಿಕ್ ಮತ್ತು ಪ್ಲಾಸ್ಟರ್ ಆಫ್ ಪ್ಯಾರೀಸ್ ಗಣೇಶಮೂರ್ತಿ ಕೂರಿಸಲು ಆವಕಾಶವಿಲ್ಲ. ಪರಿಸರ ಪ್ರೇಮಿ ಮಣ್ಣಿನ ಗಣೇಶ ಮೂರ್ತಿಗಳನ್ನು ಕೂರಿಸುವಂತೆ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


