ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶ ಹಬ್ಬ ಆಚರಣೆಗೆ ಅವಕಾಶ ಇಲ್ಲ: ಜಮೀರ್ ಅಹ್ಮದ್ ಖಾನ್
ಚಾಮರಾಜ ಪೇಟೆಯಲ್ಲಿ ಇರುವ ಈದ್ಗಾ ಮೈದಾನದಲ್ಲಿ ಗಣೇಶನ ಹಬ್ಬ ಆಚರಣೆಗೆ ಅವಕಾಶ ಇಲ್ಲ ಎಂದು ಶಾಸಕ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ.

ಬೆಂಗಳೂರು: ಚಾಮರಾಜ ಪೇಟೆಯಲ್ಲಿ ಇರುವ ಈದ್ಗಾ ಮೈದಾನದಲ್ಲಿ ಗಣೇಶನ ಹಬ್ಬ ಆಚರಣೆಗೆ ಅವಕಾಶ ಇಲ್ಲ ಎಂದು ಶಾಸಕ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ.
ಈದ್ಗಾ ಮೈದಾನದಲ್ಲಿ ಸ್ವಾತಂತ್ರ್ಯೋತ್ಸವ ಧ್ವಜಾರೋಹಣಕ್ಕೆ ಸ್ಥಳ ಪರಿಶೀಲನೆಗೆ ಆಗಮಿಸಿದ್ದ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಈದ್ಗಾ ಮೈದಾನದಲ್ಲಿ ಆಗಸ್ಟ್ 15 ರಂದು ಸ್ವಾತಂತ್ರ್ಯೋತ್ಸವದ ತ್ರಿವರ್ಣ ಧ್ವಜಾರೋಹಣ, ಜನವರಿ 26ರಂದು ಗಣರಾಜ್ಯೋತ್ಸವ ವೇಳೆ ತ್ರಿವರ್ಣ ಧ್ವಜಾರೋಹಣ ಹಾಗೂ ಕನ್ನಡ ರಾಜ್ಯೋತ್ಸವದ ವೇಳೆ ಕನ್ನಡ ಧ್ವಜಾರೋಹಣಕ್ಕೆ ಮಾತ್ರ ಅವಕಾಶ ಇದೆ ಎನ್ನುವ ಮೂಲಕ ವಿವಾದ ಸೃಷ್ಟಿಸಿದ್ದಾರೆ.
ಈದ್ಗಾ ಮೈದಾನ ಕಂದಾಯ ಇಲಾಖೆ ಸ್ವತ್ತು ಎಂದು ಈಗಾಗಲೇ ಬಿಬಿಎಂಪಿ ಹೇಳಿದೆ. ಆದ್ರೆ, ಇದು ನಮ್ಮ ಸ್ವತ್ತು ಎಂದು ರಾಜ್ಯ ವಕ್ಫ್ ಬೋರ್ಡ್ ವಾದಿಸುತ್ತಿದೆ. ಇಷ್ಟಾದ್ರೂ ಇದು ಕಾನೂನು ವಿಚಾರವಾಗಿದ್ದು, ಅದನ್ನು ವಕ್ಫ್ ಬೋರ್ಡ್ ತೀರ್ಮಾನಿಸುತ್ತದೆ ಎಂದು ಜಮೀರ್ ಹೇಳಿದ್ದಾರೆ. ಸಾಮಾನ್ಯವಾಗಿ ರಾಜ್ಯಾದ್ಯಂತ ವಕ್ಫ್ ಹಾಗೂ ಮುಜರಾಯಿ ಆಸ್ತಿಗಳೆಲ್ಲವೂ 1999ಕ್ಕೆ ಮುನ್ನ ಕಂದಾಯ ಇಲಾಖೆ ವ್ಯಾಪ್ತಿಯಲ್ಲೇ ಇತ್ತು. ನಂತರ ಎಸ್. ಎಂ. ಕೃಷ್ಣ ಅವರು ಸಿಎಂ ಆಗಿದ್ದ ವೇಳೆ ಇದರ ವಿಂಗಡಣೆ ಆಗಿತ್ತು ಎಂದು ಜಮೀರ್ ಮಾಹಿತಿ ನೀಡಿದರು.
ಇನ್ನು 75ನೇ ವರ್ಷದ ಸ್ವಾತಂತ್ರ್ಯೋತ್ಸವದ ಹಿನ್ನೆಲೆಯಲ್ಲಿ ಇದೇ ಮೊದಲ ಬಾರಿಗೆ ಈದ್ಗಾ ಮೈದಾನದಲ್ಲಿ ತ್ರಿವರ್ಣ ಧ್ವಜಾರೋಹಣ ಮಾಡಲಾಗುತ್ತಿತ್ತು. ಈ ಪರಿಪಾಠವನ್ನು ಪ್ರತಿ ವರ್ಷ ಮುಂದುವರೆಸಲಾಗುವುದು ಎಂದು ಜಮೀರ್ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


