ರಾಜ್ಯ

ಬೆಂಗಳೂರು: ನೇಣು ಬಿಗಿದ ಸ್ಥಿತಿಯಲ್ಲಿ ದಂತ ವೈದ್ಯೆ ಮತ್ತು ಮಗಳ ಶವ ಪತ್ತೆ!

ದಂತ ವೈದ್ಯೆ ಮತ್ತು ಆಕೆಯ ಮಗಳ ಮೃತದೇಹ ನೇಣು ಬಿಗಿದು ಸ್ಥಿತಿಯಲ್ಲಿ ಪತ್ತೆಯಾಗಿದೆ. ಕಳೆದ ಎರಡು ದಿನಗಳ ಹಿಂದೆ ಈ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.

ಬೆಂಗಳೂರು: ನೇಣು ಬಿಗಿದ ಸ್ಥಿತಿಯಲ್ಲಿ ದಂತ ವೈದ್ಯೆ ಮತ್ತು ಮಗಳ ಶವ ಪತ್ತೆ!
ಸಂಗ್ರಹ ಚಿತ್ರ
Published On :

ಬೆಂಗಳೂರು: ದಂತ ವೈದ್ಯೆ ಮತ್ತು ಆಕೆಯ ಮಗಳ ಮೃತದೇಹ ನೇಣು ಬಿಗಿದು ಸ್ಥಿತಿಯಲ್ಲಿ ಪತ್ತೆಯಾಗಿದೆ. ಕಳೆದ ಎರಡು ದಿನಗಳ ಹಿಂದೆ ಈ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. 

ಮೃತ ದಂತ ವೈದ್ಯೆಯನ್ನು 39 ವರ್ಷದ ಶೈಮಾ ಹಾಗೂ ಮಗಳು 10 ವರ್ಷದ ಆರಾಧನ ಎಂದು ಗುರುತಿಸಲಾಗಿದೆ. ಬನಶಂಕರಿಯ ಕಾವೇರಿನಗರದ ಮನೆಯೊಂದರಲ್ಲಿ ಘಟನೆ ನಡೆದಿದೆ. ಇನ್ನು ಘಟನಾ ಸ್ಥಳಕ್ಕೆ ಬನಶಂಕರಿ ಪೊಲೀಸರು ದೌಡಾಯಿಸಿದ್ದು ಪರಿಶೀಲನೆ ನಡೆಸಿದ್ದಾರೆ. 

ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದ್ದು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಸ್ಥಳದಲ್ಲಿ ಯಾವುದೇ ಡೆತ್ ನೋಟ್ ಸಿಕ್ಕಿಲ್ಲ. ಹೀಗಾಗಿ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತ ಶೈಮಾ ಕೊಡಗಿನ ಮೂಲದವರಾಗಿದ್ದು 10 ವರ್ಷಗಳ ಹಿಂದೆ ಕೋಲಾರ ಮೂಲದ ವೈದ್ಯ ನಾರಾಯಣ್ ಎಂಬುವರನ್ನು ಪ್ರೀತಿಸಿ ಮದುವೆಯಾಗಿದ್ದರು. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.