ರಾಜ್ಯ

ಕೋವಿಡ್-19: ರಾಜ್ಯದಲ್ಲಿ ಸಾವಿನ ಸಂಖ್ಯೆಯಲ್ಲಿ ಏರಿಕೆ; 1,680 ಹೊಸ ಪ್ರಕರಣ ಪತ್ತೆ, ಸೋಂಕಿಗೆ ಐವರು ಬಲಿ

ರಾಜ್ಯದಲ್ಲಿ ಕೆಲ ದಿನಗಳಿಂದ ಕಡಿಮೆ ಸಂಖ್ಯೆಯಲ್ಲಿದ್ದ ಕೋವಿಡ್-19 ಸಾವಿನ ಪ್ರಕರಣದಲ್ಲಿ ಮತ್ತೆ ಏರಿಕೆಯಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ ಐವರು ಸೋಂಕಿತರು ಬಲಿಯಾಗಿದ್ದಾರೆ.

ಕೋವಿಡ್-19: ರಾಜ್ಯದಲ್ಲಿ ಸಾವಿನ ಸಂಖ್ಯೆಯಲ್ಲಿ ಏರಿಕೆ; 1,680 ಹೊಸ ಪ್ರಕರಣ ಪತ್ತೆ, ಸೋಂಕಿಗೆ ಐವರು ಬಲಿ
ಸಾಂದರ್ಭಿಕ ಚಿತ್ರ
Published On :

ಬೆಂಗಳೂರು: ರಾಜ್ಯದಲ್ಲಿ ಕೆಲ ದಿನಗಳಿಂದ ಕಡಿಮೆ ಸಂಖ್ಯೆಯಲ್ಲಿದ್ದ ಕೋವಿಡ್-19 ಸಾವಿನ ಪ್ರಕರಣದಲ್ಲಿ ಮತ್ತೆ ಏರಿಕೆಯಾಗುತ್ತಿದೆ.  ಕಳೆದ 24 ಗಂಟೆಗಳಲ್ಲಿ  ಐವರು ಸೋಂಕಿತರು ಬಲಿಯಾಗಿದ್ದಾರೆ.

ರಾಯಚೂರಿನಲ್ಲಿ ಇಬ್ಬರು, ದಕ್ಷಿಣ ಹಾಗೂ ಉತ್ತರ ಕನ್ನಡ ಹಾಗೂ ಚಿಕ್ಕಬಳ್ಳಾಪುರದಲ್ಲಿ ತಲಾ ಒಬ್ಬರು ಸೋಂಕಿತರು ಮೃತಪಟ್ಟಿದ್ದಾರೆ. ಇದರೊಂದಿಗೆ ಸೋಂಕಿನಿಂದ ರಾಜ್ಯದಲ್ಲಿ ಒಟ್ಟಾರೇ ಮೃತಪಟ್ಟವರ ಸಂಖ್ಯೆ 40,128ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿಂದು 1,680 ಹೊಸ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 40,24,394ಕ್ಕೆ ಏರಿಕೆಯಾಗಿದೆ. ಒಟ್ಟು 10,351 ಸಕ್ರಿಯ ಪ್ರಕರಣಗಳಿರುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಸೋಂಕಿನಿಂದ 2,114 ಮಂದಿ ಗುಣಮುಖರಾಗಿದ್ದು, ವಿವಿಧ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. 24,504 ಟೆಸ್ಟ್ ನಡೆಸಲಾಗಿದ್ದು, ಪಾಸಿಟಿವಿಟಿ ಪ್ರಮಾಣ ಶೇ.6.85ಕ್ಕೆ ಏರಿಕೆಯಾಗಿದೆ. ಮರಣ ಪ್ರಮಾಣ ಶೇ. 0.29 ರಷ್ಟಿದೆ.

ಬೆಂಗಳೂರಿನಲ್ಲಿ 1,058 ಹೊಸ ಪ್ರಕರಣ ಪತ್ತೆಯಾಗಿದ್ದು, 1,342 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ಮರಳಿದ್ದಾರೆ. ಸದ್ಯ 7,049 ಸಕ್ರಿಯ ಪ್ರಕರಣಗಳಿರುವುದಾಗಿ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.