ಸ್ವಾತಂತ್ರ್ಯದ ಅಮೃತಮಹೋತ್ಸವ: ಆಗಸ್ಟ್ 15ರಂದು ವೊಲ್ವೊ ಸೇರಿ ಎಲ್ಲಾ ಬಿಎಂಟಿಸಿ ಬಸ್‌ಗಳಲ್ಲಿ ಉಚಿತ ಪ್ರಯಾಣ
ಭಾರತದ ಸ್ವಾತಂತ್ರ್ಯದ 75ನೇ ವರ್ಷದ ಸ್ಮರಣಾರ್ಥ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಆಗಸ್ಟ್ 15 ರಂದು ನಗರದ ಎಲ್ಲಾ ಬಸ್‌ಗಳಲ್ಲಿ ಉಚಿತ ಪ್ರಯಾಣವನ್ನು ಘೋಷಿಸಿದೆ.

ಬೆಂಗಳೂರು: ಭಾರತದ ಸ್ವಾತಂತ್ರ್ಯದ 75ನೇ ವರ್ಷದ ಸ್ಮರಣಾರ್ಥ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಆಗಸ್ಟ್ 15 ರಂದು ನಗರದ ಎಲ್ಲಾ ಬಸ್‌ಗಳಲ್ಲಿ ಉಚಿತ ಪ್ರಯಾಣವನ್ನು ಘೋಷಿಸಿದೆ.
ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಸರ್ಕಾರ ಒಪ್ಪಿಗೆ ಕೊಟ್ಟ ಹಿನ್ನೆಲೆಯಲ್ಲಿ ಉಚಿತ ಪ್ರಯಾಣದ ಘೋಷಣೆ ಮಾಡಿದ್ದು, ಇದರಿಂದ ಬಿಎಂಟಿಸಿಗೆ 3 ಕೋಟಿ ಲಾಸ್ ಆಗಲಿದೆ. ವೊಲ್ವೋ ಸೇರಿ ಎಲ್ಲಾ ಬಸ್‌ಗಳಲ್ಲಿ ನಗರದಾದ್ಯಂತ ಉಚಿತ ಪ್ರಯಾಣವನ್ನು ಘೋಷಿಸಿದೆ.
ಇನ್ನೊಂಡೆದೆ ಈಗಾಗಲೇ ಬೆಂಗಳೂರಿನಲ್ಲಿ 90 ಎಲೆಕ್ಟ್ರಿಕ್ ಬಸ್‌ಗಳು ಸಂಚಾರ ನಡೆಸುತ್ತಿದ್ದು, ಇದರ ಜೊತೆಗೆ ಆಗಸ್ಟ್ 14ರಂದು ಮತ್ತೆ 75 ಎಲೆಕ್ಟ್ರಿಕ್ ಬಸ್‌ಗಳನ್ನು ಸಂಚಾರಕ್ಕೆ ಬಿಡಲಾಗುತ್ತದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸಲಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


