ರಾಜ್ಯ

ಕಂಠೀರವ ಸ್ಟುಡಿಯೊದಲ್ಲಿ ಡಾ ರಾಜ್ ಕುಮಾರ್, ಪಾರ್ವತಮ್ಮ, ಪುನೀತ್ ಸಮಾಧಿ ಸ್ಥಳ ಅಭಿವೃದ್ಧಿ: ಕುಟುಂಬ ಸದಸ್ಯರಿಂದ ಸಿಎಂ ಭೇಟಿ

ಕಂಠೀರವ ಸ್ಟೂಡಿಯೋದಲ್ಲಿರುವ ವರನಟ ಡಾ. ರಾಜ್‌ಕುಮಾರ್, ಪಾರ್ವತಮ್ಮ, ಪುನೀತ್ ರಾಜ್ ಕುಮಾರ್ ಸಮಾಧಿ ಸ್ಥಳವನ್ನು ಅಭಿವೃದ್ಧಿಪಡಿಸುವ ವಿಚಾರವಾಗಿ ಡಾ. ರಾಜ್ ಕುಟುಂಬದ ಸದಸ್ಯರು ಸಿಎಂ ಬಸವರಾಜ ಬೊಮ್ಮಾಯಿ‌ ಅವರನ್ನು ಬುಧವಾರ ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ.

ಕಂಠೀರವ ಸ್ಟುಡಿಯೊದಲ್ಲಿ ಡಾ ರಾಜ್ ಕುಮಾರ್, ಪಾರ್ವತಮ್ಮ, ಪುನೀತ್ ಸಮಾಧಿ ಸ್ಥಳ ಅಭಿವೃದ್ಧಿ: ಕುಟುಂಬ ಸದಸ್ಯರಿಂದ ಸಿಎಂ ಭೇಟಿ
ಸಿಎಂ ಬೊಮ್ಮಾಯಿಯವರನ್ನು ಭೇಟಿ ಮಾಡಿದ ರಾಘವೇಂದ್ರ ರಾಜ್ ಕುಮಾರ್, ಅಶ್ವಿನಿ ಪುನೀತ್ ರಾಜ್ ಕುಮಾರ್
Published On :

ಬೆಂಗಳೂರು : ಕಂಠೀರವ ಸ್ಟೂಡಿಯೋದಲ್ಲಿರುವ ವರನಟ ಡಾ. ರಾಜ್‌ಕುಮಾರ್, ಪಾರ್ವತಮ್ಮ, ಪುನೀತ್ ರಾಜ್ ಕುಮಾರ್ ಸಮಾಧಿ ಸ್ಥಳವನ್ನು ಅಭಿವೃದ್ಧಿಪಡಿಸುವ ವಿಚಾರವಾಗಿ ಡಾ. ರಾಜ್ ಕುಟುಂಬದ ಸದಸ್ಯರು ಸಿಎಂ ಬಸವರಾಜ ಬೊಮ್ಮಾಯಿ‌ ಅವರನ್ನು  ಬುಧವಾರ ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ.

Story image

ನಟ ರಾಘವೇಂದ್ರ ರಾಜಕುಮಾರ್, ಅಶ್ವಿನಿ ಪುನಿತ್ ರಾಜಕುಮಾರ್, ಯುವ ರಾಜಕುಮಾರ್ ಈ ಸಂದರ್ಭದಲ್ಲಿ ಸಿಎಂ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ಕಂಠೀರವ ಸ್ಟುಡಿಯೊದಲ್ಲಿ ಒಂದೇ ಸ್ಥಳದಲ್ಲಿ ಮೂವರ ಸಮಾಧಿ ಅಭಿವೃದ್ಧಿ ವಿಚಾರವಾಗಿ ಚರ್ಚೆ ನಡೆಸಿದ್ಧಾರೆ. ರಾಜ್ ಕುಟುಂಬದವರು ಸಿದ್ದಪಡಿಸಿದ ಪಿಪಿಟಿಯನ್ನು ಸಿಎಂ ಬೊಮ್ಮಾಯಿ ವೀಕ್ಷಿಸಿದರು.

Story image

ಯೋಜನೆಗೆ ಆಗಬಹುದಾದ ಖರ್ಚುವೆಚ್ಚಗಳ ಬಗ್ಗೆ ಲೆಕ್ಕಾಚಾರಗಳನ್ನು ಲೋಕೋಪಯೋಗಿ ಇಲಾಖೆಯಿಂದ ತರಿಸಲು ಸಿಎಂ ಸೂಚನೆ ನೀಡಿದರು. ಇಲಾಖೆಯಿಂದ ಯೋಜನೆಯ ರೂಪರೇಷೆ ತಯಾರದ ಬಳಿಕ ಮತ್ತೊಂದು ಸುತ್ತಿನ ಸಭೆ ನಡೆಸೋಣ ಎಂದು ಇದೇ ಸಂದರ್ಭದಲ್ಲಿ ರಾಜ್ ಕುಮಾರ್ ಕುಟುಂಬ ಸದಸ್ಯರಿಗೆ ಸಿಎಂ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.