ರಾಜ್ಯ

ರಾಯಚೂರು: ಬಿಸಿಯೂಟ ಸೇವಿಸಿ 20ಕ್ಕೂ ಹೆಚ್ಚು ಮಕ್ಕಳಿಗೆ ವಾಂತಿ, ಭೇದಿ; ಹೊಟ್ಟೆ ನೋವಿನಿಂದ ವಿದ್ಯಾರ್ಥಿಗಳ ನರಳಾಟ!

ಬಿಸಿಯೂಟ ಸೇವಿಸಿ 20ಕ್ಕೂ ಹೆಚ್ಚು ಶಾಲಾ ಮಕ್ಕಳಿಗೆ ವಾಂತಿ, ಭೇದಿಯಾಗಿರುವ ಘಟನೆ ರಾಯಚೂರು ಜಿಲ್ಲೆ ಮಸ್ಕಿ ತಾಲೂಕಿನ ಅಮೀನಗಡ ಗ್ರಾಮದ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ.

ರಾಯಚೂರು: ಬಿಸಿಯೂಟ ಸೇವಿಸಿ 20ಕ್ಕೂ ಹೆಚ್ಚು ಮಕ್ಕಳಿಗೆ ವಾಂತಿ, ಭೇದಿ; ಹೊಟ್ಟೆ ನೋವಿನಿಂದ ವಿದ್ಯಾರ್ಥಿಗಳ ನರಳಾಟ!
ಸಂಗ್ರಹ ಚಿತ್ರ
Published On :

ರಾಯಚೂರು: ಬಿಸಿಯೂಟ ಸೇವಿಸಿ 20ಕ್ಕೂ ಹೆಚ್ಚು ಶಾಲಾ ಮಕ್ಕಳಿಗೆ ವಾಂತಿ, ಭೇದಿಯಾಗಿರುವ ಘಟನೆ ರಾಯಚೂರು ಜಿಲ್ಲೆ ಮಸ್ಕಿ ತಾಲೂಕಿನ ಅಮೀನಗಡ ಗ್ರಾಮದ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ.

ಇಂದು ಮಧ್ಯಾಹ್ನ ಬಿಸಿಯೂಟ ಸೇವಿಸಿದ ಬಳಿಕ ವಿದ್ಯಾರ್ಥಿಗಳು ಹೊಟ್ಟೆ ನೋವಿನಿಂದ ನರಳಾಡಿದರು. ಇದರಿಂದ ಎಚ್ಚೆತ್ತ ಶಿಕ್ಷಕರು ತಕ್ಷಣ ಅಸ್ವಸ್ಥ ಮಕ್ಕಳನ್ನು ಕವಿತಾಳ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. 

ಬಿಸಿಯೂಟ ಸೇವಿಸಿ ಅಸ್ವಸ್ಥರಾಗಿರುವ ತಮ್ಮ ಮಕ್ಕಳ ಬಗ್ಗೆ ಪೋಷಕರು ಆತಂಕಗೊಂಡಿದ್ದಾರೆ. ಸದ್ಯ ಮಕ್ಕಳ ಪರಿಸ್ಥಿತಿ ಸುಧಾರಿಸುತ್ತಿದೆ ಎಂದು ವೈದ್ಯರು ತಿಳಿಸಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.