ಬೆಂಗಳೂರು: ಬಿಬಿಎಂಪಿ ಗುತ್ತಿಗೆ ನೌಕರ, ಪತ್ನಿ, ಪುತ್ರ ಮನೆಯಲ್ಲಿ ಶವವಾಗಿ ಪತ್ತೆ!
ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಕೋಣನಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ.

ಬೆಂಗಳೂರು: ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಕೋಣನಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ.
ಗೌಡನ ಪಾಳ್ಯದ ಮನೆಯಲ್ಲಿ ವಾಸವಾಗಿದ್ದ ಮಹೇಶ್ (44), ಜ್ಯೋತಿ (29) ಹಾಗೂ ಮಗ ನಂದೀಶ್ ಗೌಡ (9) ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಕ್ಯಾನ್ಸರ್ ರೋಗ ಪತ್ತೆಯಾದ ಹಿನ್ನೆಲೆ ಯಲ್ಲಿ ಮುಂದಿನ ಖರ್ಚು ವೆಚ್ಚಗಳನ್ನು ಭರಿಸಲು ಸಾಧ್ಯವಾಗದೇ, ಹೆಂಡತಿ ಮಗನನ್ನು ಕೊಂದು ಮಹೇಶ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಬಿಬಿಎಂಪಿಯಲ್ಲಿ ಬಿಲ್ ಕಲೆಕ್ಟರ್ ಆಗಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ಮಹೇಶ್ ಹಲವು ವರ್ಷಗಳಿಂದ ನಗರದಲ್ಲಿ ವಾಸವಾಗಿದ್ದರು ಎನ್ನಲಾಗಿದೆ. ಘಟನೆ ಸಂಬಂಧ ಮೂವರ ಮೃತದೇಹಗಳನ್ನ ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.
ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಘಟನೆಗೆ ಬೇರೆ ಕಾರಣ ವಿರಬಹುದೇ ಎಂಬ ನಿಟ್ಟಿನಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


