ಶಾಲಾ ವಿದ್ಯಾರ್ಥಿ ಸಾವು ಪ್ರಕರಣ: ಕೇವಲ 250 ರೂ. ಶಾಲೆ ಶುಲ್ಕ ಕಟ್ಟಿಲ್ಲದ್ದಕ್ಕೆ ಕ್ರೂರವಾಗಿ ಹಲ್ಲೆ, ಶಿಕ್ಷಕನ ಬಂಧನ!
ಉತ್ತರ ಪ್ರದೇಶದ ಶ್ರಾವಸ್ತಿ ಜಿಲ್ಲೆಯಲ್ಲಿ ನಡೆದ್ದಿದ್ದ ಶಾಲಾ ವಿದ್ಯಾರ್ಥಿ ಸಾವು ಪ್ರಕರಣ ಸಂಬಂಧ ಪೊಲೀಸರು ಹತ್ಯೆ ಆರೋಪಿ ಶಿಕ್ಷಕನನ್ನು ಬಂಧಿಸಿದ್ದಾರೆ.

ಲಖನೌ(ಉತ್ತರಪ್ರದೇಶ): ಉತ್ತರ ಪ್ರದೇಶದ ಶ್ರಾವಸ್ತಿ ಜಿಲ್ಲೆಯಲ್ಲಿ ನಡೆದ್ದಿದ್ದ ಶಾಲಾ ವಿದ್ಯಾರ್ಥಿ ಸಾವು ಪ್ರಕರಣ ಸಂಬಂಧ ಪೊಲೀಸರು ಹತ್ಯೆ ಆರೋಪಿ ಶಿಕ್ಷಕನನ್ನು ಬಂಧಿಸಿದ್ದಾರೆ.
ಶಾಲಾ ಶುಲ್ಕ ಪಾವತಿಸಿಲ್ಲ ಎಂಬ ಕಾರಣಕ್ಕೆ ಶಿಕ್ಷಕನೊಬ್ಬ 3ನೇ ತರಗತಿಯ ವಿದ್ಯಾರ್ಥಿಯ ಮೇಲೆ ಕ್ರೌರ್ಯ ಮೆರೆದಿದ್ದು, 8 ದಿನಗಳ ನಂತರ ಬಾಲಕ ಮೃತಪಟ್ಟಿದ್ದು ಕೇವಲ 250 ರೂಪಾಯಿ ಶುಲ್ಕ ಕಟ್ಟಿಲ್ಲ ಎಂಬ ಕಾರಣಕ್ಕೆ ಈ ಹಲ್ಲೆ ನಡೆದಿತ್ತು ಎಂದು ತಿಳಿದುಬಂದಿದೆ.
ಶ್ರಾವಸ್ತಿ ಜಿಲ್ಲೆಯಲ್ಲಿ ಮೃತ ಬಾಲಕನ ಕುಟುಂಬದವರು ಆರಂಭಿಸಿದ ಪ್ರತಿಭಟನೆಯಲ್ಲಿ ಹಲವಾರು ಸಾಮಾಜಿಕ ಸಂಘಟನೆಗಳು ಸೇರಿಕೊಂಡ ನಂತರ ಪೊಲೀಸರು ತನಿಖೆ ಚುರುಕುಗೊಳಿಸಿದ್ದರು. ಅಲ್ಲದೆ ಆರೋಪಿಯನ್ನು ಕೂಡಲೇ ಬಂಧಿಸಬೇಕು ಎಂದು ಸಂಘಟನೆಗಳು ಒತ್ತಾಯಿಸಿದ್ದವು. ಈ ಹಿನ್ನಲೆಯಲ್ಲಿ ಕಳೆದ ರಾತ್ರಿ ಪೊಲೀಸರು ಆರೋಪಿ ಅನುಪಮ್ ಪಾಠಕ್ ನನ್ನು ಬಂಧಿಸಿದ್ದಾರೆ.
ಪೊಲೀಸ್ ಮೂಲಗಳ ಪ್ರಕಾರ, ಆಗಸ್ಟ್ 8ರಂದು ಶ್ರಾವಸ್ತಿಯ ಸಿರ್ಸಿಯಾ ಪೊಲೀಸ್ ಠಾಣಾ ವ್ಯಾಪ್ತಿಯ ಪಂಡಿತ್ ಬ್ರಾಹ್ಮಣ ಉಚ್ಚತ್ತಮ್ ಮಾಧ್ಯಮಿಕ್ ಸ್ಕೂಲ್ ಚೌಲಾಹಿಯಲ್ಲಿ ಈ ಘಟನೆ ನಡೆದಿತ್ತು. ಮೃತ ಬಾಲಕ ಬ್ರಿಜೇಶ್ ವಿಶ್ವಕರ್ಮ ಅವರ ಚಿಕ್ಕಪ್ಪ ಸಲ್ಲಿಸಿದ ದೂರಿನ ಆಧಾರದ ಮೇಲೆ ಐಪಿಸಿ ವಿವಿಧಸೆಕ್ಷನ್‌ಗಳ ಅಡಿಯಲ್ಲಿ ಶಿಕ್ಷಕನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಶ್ರಾವಸ್ತಿ ಪೊಲೀಸ್ ಅಧಿಕಾರಿಗಳು ಘಟನೆಯನ್ನು ದೃಢಪಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


