ರಾಜ್ಯ

ಬೆಂಗಳೂರಿನಲ್ಲಿ ಮುನಾವರ್ ಫಾರೂಕಿ ಹಾಸ್ಯ ಕಾರ್ಯಕ್ರಮ ಮತ್ತೆ ರದ್ದು

ಶನಿವಾರ ನಗರದಲ್ಲಿ ನಡೆಯಬೇಕಿದ್ದ ಕಾಮಿಡಿಯನ್ ಮುನಾವರ್ ಫಾರೂಕಿ ಅವರ ಹಾಸ್ಯ ಕಾರ್ಯಕ್ರಮಕ್ಕೆ ಅನುಮತಿ ನೀಡಲು ಬೆಂಗಳೂರು ಪೊಲೀಸರು ಮತ್ತೆ ನಿರಾಕರಿಸಿದ್ದಾರೆ.

ಬೆಂಗಳೂರಿನಲ್ಲಿ ಮುನಾವರ್ ಫಾರೂಕಿ ಹಾಸ್ಯ ಕಾರ್ಯಕ್ರಮ ಮತ್ತೆ ರದ್ದು
ಮುನಾವರ್ ಫಾರೂಕಿ
Published On :

ಬೆಂಗಳೂರು: ಇಂದು ನಗರದಲ್ಲಿ ನಡೆಯಬೇಕಿದ್ದ ಕಾಮಿಡಿಯನ್ ಮುನಾವರ್ ಫಾರೂಕಿ ಅವರ  ಹಾಸ್ಯ ಕಾರ್ಯಕ್ರಮಕ್ಕೆ ಅನುಮತಿ ನೀಡಲು ಬೆಂಗಳೂರು ಪೊಲೀಸರು ಮತ್ತೆ ನಿರಾಕರಿಸಿದ್ದಾರೆ. 

ನಗರದ ಪುಟ್ಟೇನಹಳ್ಳಿ ಸಮೀಪವಿರುವ ಎಂಎಲ್ ಆರ್ ಕನ್ವೆಷನ್ ಸಭಾಂಗಣದಲ್ಲಿ ಮುನವ್ವರ್ ಫಾರೂಕಿ ಹಾಸ್ಯ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಆದರೆ,  ಆಯೋಜಕರು ಕಾರ್ಯಕ್ರಮಕ್ಕೆ ಅನುಮತಿ ಪಡೆಯದ ಕಾರಣ ಕೊನೆ ಕ್ಷಣದಲ್ಲಿ ಕಾರ್ಯಕ್ರಮ ರದ್ದಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. 

ಜೈ ಶ್ರೀರಾಮ ಸೇನೆಯು ಹಾಸ್ಯನಟ ಮತ್ತು ಸಂಘಟಕರ ವಿರುದ್ಧ ಬೆಂಗಳೂರು ಪೊಲೀಸ್ ಆಯುಕ್ತ ಸಿ ಹೆಚ್ ಪ್ರತಾಪ್ ರೆಡ್ಡಿ ಅವರಿಗೆ ದೂರು ನೀಡಿತ್ತು. ತನ್ನ ಶೋಗಳಲ್ಲಿ ಶ್ರೀ ರಾಮ ಮತ್ತು ಸೀತಾ ದೇವಿಯ ವಿರುದ್ಧ ಅವಮಾನಕಾರಿ ಹೇಳಿಕೆಗಳನ್ನು ನೀಡುವ ಮೂಲಕ ಫಾರುಕಿ ಹಿಂದೂ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ಸಂಘಟನೆಯು ತನ್ನ ದೂರಿನಲ್ಲಿ ಆರೋಪಿಸಿದೆ. ನವೆಂಬರ್ 2021 ರಲ್ಲಿ ಬೆಂಗಳೂರಿನಲ್ಲಿ  ಪ್ರದರ್ಶನ ನೀಡಲು ಹಾಸ್ಯನಟನಿಗೆ ಅನುಮತಿ ನಿರಾಕರಿಸಲಾಯಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.