ಎಸಿಬಿ ರದ್ದು: ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ
ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ)ವನ್ನು ರದ್ದುಗೊಳಿಸಿ, ಅಲ್ಲಿರುವ ಎಲ್ಲಾ ಪ್ರಕರಣಗಳನ್ನು ಲೋಕಾಯುಕ್ತಕ್ಕೆ ವರ್ಗಾವಣೆ ಮಾಡಿದ್ದ ಕರ್ನಾಟಕ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲಾಗಿದೆ.

ಬೆಂಗಳೂರು: ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ)ವನ್ನು ರದ್ದುಗೊಳಿಸಿ, ಅಲ್ಲಿರುವ ಎಲ್ಲಾ ಪ್ರಕರಣಗಳನ್ನು ಲೋಕಾಯುಕ್ತಕ್ಕೆ ವರ್ಗಾವಣೆ ಮಾಡಿದ್ದ ಕರ್ನಾಟಕ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲಾಗಿದೆ.
ಕನಕರಾಜು ಎನ್ನುವ ವ್ಯಕ್ತಿಯೊಬ್ಬರು ವಕೀಲ ಅಶೋಕ್ ಪಾಣಿಗ್ರಾಹಿ ಅವರ ಮೂಲಕ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ, ನ್ಯಾಯಮೂರ್ತಿಗಳಾದ ಹಿಮಾ ಕೊಹ್ಲಿ, ಸಿ.ಟಿ.ರವಿಕುಮಾರ್ ಪೀಠದ ಮುಂಗೆ ಖಾಸಗಿ ಅರ್ಜಿ ಸಲ್ಲಿಸಿದ್ದಾರೆ. ಶೀಘ್ರವೇ ಅರ್ಜಿಯ ವಿಚಾರಣೆ ಕೈಗೆತ್ತಿಕೊಳ್ಳುವುದಾಗಿ ಪೀಠ ಹೇಳಿದೆ.
ಇದಕ್ಕು ಮುನ್ನ ರಾಜ್ಯ ಸರ್ಕಾರವೇ ಎಸಿಬಿ ರದ್ದು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದೆ ಎಂದು ವರದಿಯಾಗಿತ್ತು. ಆದರೆ ಈ ವರದಿಯನ್ನು ತಳ್ಳಿಹಾಕಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, "ಖಾಸಗಿ ಮೇಲ್ಮನವಿ ಅರ್ಜಿ ದಾಖಲಾಗಿದೆ. ಈ ವಿಚಾರದಲ್ಲಿ ಸರ್ಕಾರದ ನಿರ್ಧಾರದಲ್ಲಿ ಯಾವುದೇ ಬದಲಾವಣೆಯಿಲ್ಲ. ಎಸಿಬಿ ರದ್ದು ಮಾಡುವ ನಮ್ಮ ನಿರ್ಧಾರಕ್ಕೆ ಬದ್ಧರಾಗಿದ್ದೇವೆ' ಎಂದು ಹೇಳಿದ್ದಾರೆ.
ಮಹತ್ವದ ಬೆಳವಣಿಗೆಯಲ್ಲಿ ಈ ಹಿಂದಿನ ಸರ್ಕಾರ 2016ರಲ್ಲಿ ರಚನೆ ಮಾಡಿದ್ದ ಭ್ರಷ್ಟಾಚಾರ ನಿಗ್ರಹ ದಳವನ್ನು ಕರ್ನಾಟಕ ಹೈಕೋರ್ಟ್ ಇತ್ತೀಚಿಗೆ ರದ್ದುಗೊಳಿಸಿದ್ದು, ಎಸಿಬಿಗೆ ನೀಡಲಾಗಿದ್ದ ಪೊಲೀಸ್ ಠಾಣೆ ಸ್ಥಾನಮಾನವನ್ನು ಮರಳಿ ಲೋಕಾಯುಕ್ತ ಸಂಸ್ಥೆಗೆ ನೀಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


