ಹೊರ್ತಿ- ರೇವಣ್ಣ ಸಿದ್ದೇಶ್ವರ ಏತ ನೀರಾವರಿ ಯೋಜನೆಗೆ ಸಚಿವ ಸಂಪುಟ ಅನುಮೋದನೆ: ಗೋವಿಂದ ಕಾರಜೋಳ
ವಿಜಯಪುರ ಹಾಗೂ ಇಂಡಿ ತಾಲ್ಲೂಕಿನ ರೈತರಿಗೆ ವರದಾನವಾಗಲಿರುವ ಹೊರ್ತಿ- ರೇವಣ್ಣ ಸಿದ್ದೇಶ್ವರ ಏತ ನೀರಾವರಿ ಯೋಜನೆಗೆ ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ತಿಳಿಸಿದ್ದಾರೆ.

ಬೆಂಗಳೂರು: ವಿಜಯಪುರ ಹಾಗೂ ಇಂಡಿ ತಾಲ್ಲೂಕಿನ ರೈತರಿಗೆ ವರದಾನವಾಗಲಿರುವ ಹೊರ್ತಿ- ರೇವಣ್ಣ ಸಿದ್ದೇಶ್ವರ ಏತ ನೀರಾವರಿ ಯೋಜನೆಗೆ ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ತಿಳಿಸಿದ್ದಾರೆ.
ಈ ಯೋಜನೆಯಡಿ ಆಲಮಟ್ಟಿ ಜಲಾಶಯದ ಹಿನ್ನೀರಿನಲ್ಲಿ ಪ್ರತ್ಯೇಕವಾಗಿ 3, 245 ಟಿಎಂಸಿ ನೀರನ್ನು ಲಿಫ್ಟ್ ಮಾಡಿ ಪೈವ್ ಲೈನ್ ಅಳವಡಿಕೆಯೊಂದಿಗೆ ಇಂಡಿ ಮತ್ತು ವಿಜಯಪುರ ತಾಲ್ಲೂಕಿನ 28 ಸಾವಿರ ಹೆಕ್ಟೇರ್ ಪ್ರದೇಶಕ್ಕೆ ನೀರಾವರಿ ಸೌಲಭ್ಯ ಕಲ್ಪಿಸಲು ಯೋಜಿಸಲಾಗಿದೆ.
2,638 ಕೋಟಿ ರೂಪಾಯಿ ಅಂದಾಜು ವೆಚ್ಚದ ಈ ಯೋಜನೆಗೆ ರಾಜ್ಯ ಸಚಿವ ಸಂಪುಟ ಇಂದು ತನ್ನ ಅನುಮೋದನೆ ನೀಡಿದ್ದು, ಮೂರು ಹಂತಗಳಲ್ಲಿ ಯೋಜನೆ ಕೈಗೆತ್ತಿಕೊಳ್ಳಲು ತೀರ್ಮಾನಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಮೊದಲ ಹಂತದಲ್ಲಿ 760 ಕೋಟಿ, ಎರಡನೇ ಹಂತದಲ್ಲಿ 939 ಕೋಟಿ ಹಾಗೂ ಮೂರನೇ ಹಂತದಲ್ಲಿ 939 ಕೋಟಿ ರೂ. ವೆಚ್ಚದಲ್ಲಿ ಯೋಜನೆ ಅನುಷ್ಠಾನಗೊಳಿಸಲು ಉದ್ದೇಶಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


