ಎಸಿಬಿಯಲ್ಲಿನ ಸಿಬ್ಬಂದಿ, ಪ್ರಕರಣಗಳನ್ನು ಶೀಘ್ರ ವರ್ಗಾಯಿಸಿ: ಕರ್ನಾಟಕ ಲೋಕಾಯುಕ್ತ
ಭ್ರಷ್ಟಾಚಾರ ನಿಗ್ರಹ ದಳದಿಂದ ಶೀಘ್ರವಾಗಿ ಸಿಬ್ಬಂದಿಗಳನ್ನು ಮತ್ತು ಪ್ರಕರಣಗಳನ್ನು ವರ್ಗಾಯಿಸಿ ಎಂದು ರಾಜ್ಯ ಸರ್ಕಾರಕ್ಕೆ ಕರ್ನಾಟಕ ಲೋಕಾಯುಕ್ತ ಸೂಚನೆ ನೀಡಿದೆ.

ಬೆಂಗಳೂರು: ಭ್ರಷ್ಟಾಚಾರ ನಿಗ್ರಹ ದಳದಿಂದ ಶೀಘ್ರವಾಗಿ ಸಿಬ್ಬಂದಿಗಳನ್ನು ಮತ್ತು ಪ್ರಕರಣಗಳನ್ನು ವರ್ಗಾಯಿಸಿ ಎಂದು ರಾಜ್ಯ ಸರ್ಕಾರಕ್ಕೆ ಕರ್ನಾಟಕ ಲೋಕಾಯುಕ್ತ ಸೂಚನೆ ನೀಡಿದೆ.
ಕರ್ನಾಟಕ ಹೈಕೋರ್ಟ್ ನಿರ್ದೇಶನದಂತೆ ಭ್ರಷ್ಟಾಚಾರ ನಿಗ್ರಹ ದಳದಿಂದ (ಎಸಿಬಿ) ಕರ್ನಾಟಕ ಲೋಕಾಯುಕ್ತಕ್ಕೆ ಪ್ರಕರಣಗಳು ಮತ್ತು ಸಿಬ್ಬಂದಿಯನ್ನು ವರ್ಗಾವಣೆ ಮಾಡಲು ರಾಜ್ಯ ಸರ್ಕಾರ ವಿಳಂಬ ಮಾಡುತ್ತಿದ್ದು, ಅನುಷ್ಠಾನಕ್ಕೆ ಕ್ರಮಕೈಗೊಳ್ಳುವಂತೆ ಲೋಕಾಯುಕ್ತ ರಿಜಿಸ್ಟ್ರಾರ್ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರಿಗೆ ಪತ್ರ ಬರೆದಿದ್ದಾರೆ. ಆಗಸ್ಟ್ 11, 2022 ರಂದು ಹೈಕೋರ್ಟ್ ಎಸಿಬಿಯನ್ನು ರದ್ದುಪಡಿಸಿತು ಮತ್ತು ಅದರ ಪ್ರಕರಣಗಳು ಮತ್ತು ಸಿಬ್ಬಂದಿಯನ್ನು ಲೋಕಾಯುಕ್ತಕ್ಕೆ ವರ್ಗಾಯಿಸಲು ಆದೇಶಿಸಿತು.
ಭ್ರಷ್ಟಾಚಾರ ತಡೆ ಕಾಯ್ದೆಯಡಿ ಎಸಿಬಿ ಸ್ಥಾಪನೆ ಮತ್ತು ಲೋಕಾಯುಕ್ತರ ಅಧಿಕಾರವನ್ನು ಹಿಂಪಡೆಯುವ ಸರ್ಕಾರದ ಅಧಿಸೂಚನೆಯನ್ನು ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್, ವಿಚಾರಣೆ ಮತ್ತು ಇತರ ಪ್ರಕ್ರಿಯೆಗಳನ್ನು ವರ್ಗಾಯಿಸಲು ಕ್ರಮಕೈಗೊಳ್ಳಲು ಆದೇಶದ ಪ್ರತಿಯನ್ನು ಮುಖ್ಯ ಕಾರ್ಯದರ್ಶಿಗೆ ಕಳುಹಿಸಲು ತನ್ನ ನೋಂದಾವಣೆಗೆ ಸೂಚಿಸಿತ್ತು. .
ಲೋಕಾಯುಕ್ತ ಪೊಲೀಸ್ ವಿಭಾಗವನ್ನು ಬಲಪಡಿಸಬೇಕು
ತೀರ್ಪಿನ ದಿನಾಂಕದವರೆಗಿನ ಎಸಿಬಿ ಪ್ರಕರಣಗಳನ್ನು ಲೋಕಾಯುಕ್ತಕ್ಕೆ ವರ್ಗಾಯಿಸಬೇಕು. ಬಾಕಿ ಇರುವ ಹಂತದಿಂದ ಕಾನೂನಿಗೆ ಅನುಸಾರವಾಗಿ ಮುಂದುವರಿಯಬೇಕು. ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸದಿರಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದರೂ, ಹೈಕೋರ್ಟ್ ಆದೇಶ ನೀಡಿ ಎರಡು ವಾರಗಳು ಕಳೆದರೂ ಸರ್ಕಾರ ಯಾವುದೇ ಕ್ರಮಗಳನ್ನು ಕೈಗೊಂಡಿಲ್ಲ ಎನ್ನಲಾಗಿದೆ.
ಕರ್ನಾಟಕ ಲೋಕಾಯುಕ್ತ ಕಾಯ್ದೆಯ ಸೆಕ್ಷನ್ 12(4)ಕ್ಕೆ ತಿದ್ದುಪಡಿಯನ್ನು ಶಿಫಾರಸು ಮಾಡುವುದರ ಜೊತೆಗೆ, ದುರಾಡಳಿತ ಪ್ರಕರಣಗಳಲ್ಲಿ ಲೋಕಾಯುಕ್ತರ ಶಿಫಾರಸಿನ ಆಧಾರದ ಮೇಲೆ ಸರ್ಕಾರವು ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮವನ್ನು ಪ್ರಾರಂಭಿಸಬೇಕು, ಇದು ಅಸ್ತಿತ್ವದಲ್ಲಿರುವ ನಿಬಂಧನೆಗಳ ಅಡಿಯಲ್ಲಿ ಕಡ್ಡಾಯವಲ್ಲ. ಪ್ರಾಮಾಣಿಕತೆ ಮತ್ತು ನ್ಯಾಯಸಮ್ಮತತೆಯ ದಾಖಲೆ ಹೊಂದಿರುವ ಪ್ರಾಮಾಣಿಕ ವ್ಯಕ್ತಿಗಳನ್ನು ನೇಮಿಸಿ/ನಿಯೋಜನೆ ಮಾಡುವ ಮೂಲಕ ಲೋಕಾಯುಕ್ತದ ಪೊಲೀಸ್ ವಿಭಾಗವನ್ನು ಬಲಪಡಿಸಲು ಹೈಕೋರ್ಟ್ ಸರ್ಕಾರಕ್ಕೆ ನಿರ್ದೇಶನ ನೀಡಿತ್ತು.
ಅಸ್ತಿತ್ವದಲ್ಲಿರುವ ಲೋಕಾಯುಕ್ತ ಪೊಲೀಸ್ ವಿಭಾಗವನ್ನು ಬಲಪಡಿಸಲು ಮತ್ತು ಪ್ರಕರಣಗಳನ್ನು ಪರಿಣಾಮಕಾರಿಯಾಗಿ ವಿಚಾರಣೆ ಮಾಡಲು ಮತ್ತು ತನಿಖೆ ಮಾಡಲು ಅನುವು ಮಾಡಿಕೊಡಲು ಎಸಿಬಿಯೊಂದಿಗೆ ಕೆಲಸ ಮಾಡುತ್ತಿದ್ದ ಪೊಲೀಸ್ ಸಿಬ್ಬಂದಿಯನ್ನು ಲೋಕಾಯುಕ್ತ ಪೊಲೀಸ್ ವಿಭಾಗಕ್ಕೆ ವರ್ಗಾಯಿಸಲು / ನಿಯೋಜಿಸಲು ಸರ್ಕಾರಕ್ಕೆ ಶಿಫಾರಸು ಮಾಡಲಾಗಿದೆ. ಎಸಿಬಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳು ತಕ್ಷಣದಿಂದ ಜಾರಿಗೆ ಬರುವಂತೆ ಲೋಕಾಯುಕ್ತದ ಆಡಳಿತಾತ್ಮಕ ಮತ್ತು ವಿಶೇಷ ಶಿಸ್ತಿನ ನಿಯಂತ್ರಣಕ್ಕೆ ಬರಬೇಕು ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.
ಪ್ರತಿಬಂಧಕ ಕಾಯ್ದೆಯಡಿ ದೂರು ದಾಖಲಿಸುವ ಲೋಕಾಯುಕ್ತರ ಅಧಿಕಾರ ಮರುಸ್ಥಾಪಿಸುತ್ತಿದ್ದಂತೆ ಸಂಸ್ಥೆಗೆ ದೂರುಗಳ ಮಹಾಪೂರವೇ ಹರಿದುಬರುತ್ತಿದೆ. ಆದರೆ ಈ ಕುರಿತು ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಪ್ರತಿಕ್ರಿಯೆಗೆ ಲಭ್ಯವಾಗಿಲ್ಲ ಎನ್ನಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


