ಕೋವಿಡ್-19: ಬೆಂಗಳೂರಿನಲ್ಲಿ 635 ಸೇರಿ ರಾಜ್ಯದಲ್ಲಿಂದು 1,186 ಹೊಸ ಪ್ರಕರಣ ಪತ್ತೆ, 2 ಸಾವು
ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 1,186 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 40,48,482ಕ್ಕೆ ಏರಿಕೆಯಾಗಿದೆ.

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 1,186 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 40,48,482ಕ್ಕೆ ಏರಿಕೆಯಾಗಿದೆ.
ಇನ್ನೂ ರಾಜ್ಯದಲ್ಲಿ ಮಹಾಮಾರಿ ಕೊರೋನಾದಿಂದ ಇಂದು ಇಬ್ಬರು ಮೃತಪಟ್ಟಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 40,187ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಬೆಂಗಳೂರಿನಲ್ಲಿ ಇಂದು 635 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 18,62,781ಕ್ಕೆ ಏರಿಕೆಯಾಗಿದೆ. ಇಂದು ರಾಜಧಾನಿಯಲ್ಲಿ ಕೊರೋನಾದಿಂದ ಯಾರೂ ಮೃತಪಟ್ಟಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೇಳಿದೆ.
ರಾಜ್ಯದಲ್ಲಿ ಇಂದು 1, 118 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 40,000331ಕ್ಕೆ ಏರಿಕೆಯಾಗಿದೆ. ಇನ್ನು 7,922 ಸಕ್ರಿಯ ಪ್ರಕರಣಗಳಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


