ಪುಟ್ಟೇನಹಳ್ಳಿ ಪೊಲೀಸರ ಭರ್ಜರಿ ಕಾರ್ಯಾಚರಣೆ: 51 ಸರಗಳ್ಳತನ ಪ್ರಕರಣಗಳಲ್ಲಿ ಬೇಕಾಗಿದ್ದ ಇಬ್ಬರು ಆರೋಪಿಗಳ ಬಂಧನ
ಭರ್ಜರಿ ಕಾರ್ಯಾಚರಣೆ ನಡೆಸಿದ ಪುಟ್ಟೇನಹಳ್ಳಿ ಪೊಲೀಸರು 51 ಸರಗಳ್ಳತನ ಪ್ರಕರಣಗಳಲ್ಲಿ ಬೇಕಾಗಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ಒಂದೂವರೆ ಕೋಟಿ ರು. ಮೌಲ್ಯದ ಚಿನ್ನಾಭರಣಗಳನ್ನು ವಶ ಪಡಿಸಿಕೊಂಡಿದ್ದಾರೆ.

ಬೆಂಗಳೂರು: ಭರ್ಜರಿ ಕಾರ್ಯಾಚರಣೆ ನಡೆಸಿದ ಪುಟ್ಟೇನಹಳ್ಳಿ ಪೊಲೀಸರು 51 ಸರಗಳ್ಳತನ ಪ್ರಕರಣಗಳಲ್ಲಿ ಬೇಕಾಗಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ಒಂದೂವರೆ ಕೋಟಿ ರು. ಮೌಲ್ಯದ ಚಿನ್ನಾಭರಣಗಳನ್ನು ವಶ ಪಡಿಸಿಕೊಂಡಿದ್ದಾರೆ.
ತಮಿಳುನಾಡು ಮೂಲದ ಸಂತೋಷ್ ಮತ್ತು ರವಿ ಎಂಬ ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳು ಇಡೀ ಬೆಂಗಳೂರು ನಗರ ಸುತ್ತಿ ಸರಗಳ್ಳತನ ಮಾಡುತ್ತಿದ್ದರು. ತಲೆಗೆ ಹೆಲ್ಮೆಟ್ ಹಾಕಿಕೊಳ್ಳುತ್ತಿದ್ದ ಕಾರಣ ಇಬ್ಬರನ್ನು ಪತ್ತೆ ಹಚ್ಚಲು ಸಾಧ್ಯವಾಗಿರಲಿಲ್ಲ.
ಆರೋಪಿ ಸರಗಳ್ಳ ಸಂತೋಷ್ ಮುಖ ಚಹರೆ ಗೊತ್ತಿರಲಿಲ್ಲ. ಸಿಸಿಟಿವಿಯಲ್ಲಿ ಆರೋಪಿ ದೇಹದ ಮಾದರಿ, ಹೆಲ್ಮೆಟ್ ಹಾಗೂ ಬ್ಲೂ ಕಲರ್ ಶರ್ಟ್ ಬಗ್ಗೆ ಗೊತ್ತಾಗಿತ್ತು. ಅದ್ರಲ್ಲೂ ಆರೋಪಿ ಧರಿಸಿದ್ದ ಹೆಲ್ಮೆ ಟ್ ಮೇಲೆ ಇದ್ದ ಬಿಳಿಬಣ್ಣದ ಗೆರೆ ಆರೋಪಿ ಪತ್ತೆಗೆ ಸಹಕಾರವಾಗಿತ್ತು. ಇದರ ಆಧಾರದ ಮೇಲೆ ಪೊಲೀಸರು ಬಂಧಿಸಿದ್ದಾರೆ.
ಸುಮಾರು ಎರಡೂವರೆ ಕೆಜಿ ಚಿನ್ನವನ್ನು ತಮಿಳುನಾಡಿನಲ್ಲಿ ಮಾರಾಟ ಮಾಡಿದ್ದಾರೆ. ಅರಕೆರೆಯಲ್ಲಿ ವಾಸವಾಗಿದ್ದ ಇಬ್ಬರು ಪಾರ್ಕ್ ಮತ್ತು ದೇವಾಸ್ಥಾನಗಳಿಗೆ ಹೋಗಿ ಬರುತ್ತಿದ್ದ ಮಹಿಳೆಯರನ್ನು ಟಾರ್ಗೆಟ್ ಮಾಡುತ್ತಿದ್ದರು. ಬಿಕಾಂ ಪದವೀಧರರಾಗಿದ್ದ ಇಬ್ಬರು ಖಾಸಗಿ ಕಂಪನಿಯೊಂದರಲ್ಲಿ ಇಂಟೀರಿಯರ್ ಡೆಕೋರೇಟರ್ ಆಗಿ ಕೆಲಸ ಮಾಡುತ್ತಿದ್ರು. ಕ್ಯಾಸಿನೋ ಚಟಕ್ಕೆ ಬಿದ್ದಿದ್ದರಿಂದ ಹಣ ಹೊಂದಿಸಲು ಅಪರಾಧ ಎಸಗುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


