ಬಿಡಿಎ ಬದಲಿ ನಿವೇಶನ ಪಡೆಯಲು ಯಾವುದೇ ಪ್ರಭಾವ ಬಳಸಿಲ್ಲ: ಸಚಿವ ಆರಗ ಜ್ಞಾನೇಂದ್ರ ಸ್ಪಷ್ಟೀಕರಣ
ಬಿಡಿಎ ಬದಲಿ ನಿವೇಶನ ಪಡೆಯಲು ಯಾವುದೇ ಪ್ರಭಾವ ಅಥವಾ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರು: ಬಿಡಿಎ ಬದಲಿ ನಿವೇಶನ ಪಡೆಯಲು ಯಾವುದೇ ಪ್ರಭಾವ ಅಥವಾ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಸ್ಪಷ್ಟಪಡಿಸಿದ್ದಾರೆ.
ಜಿ ಕೆಟಗರಿ ಅಡಿಯಲ್ಲಿ ಈ ಹಿಂದೆ ಇತರ ಶಾಸಕರು ಹಾಗೂ ಸಚಿವರು ಮಂಜೂರಾತಿ ಪಡೆದ ರೀತಿಯಲ್ಲಿಯೇ ನನಗೂ ಬಿಡಿಎ ನಿವೇಶನ ಮಂಜೂರಾಗಿರುತ್ತದೆ. ಪ್ರಸ್ತುತ ಬದಲಿ ನಿವೇಶನ ಮಂಜೂರು ಮಾಡಲು ಬಿಡಿಎ ನಿಗದಿಪಡಿಸಿದ ಅಧಿಕ ಶುಲ್ಕವನ್ನೂ ಸಹ ಪಾವತಿಸಿದ್ದೇನೆ ಎಂದು ಅವರು ತಿಳಿಸಿದ್ದಾರೆ.
ಈ ಹಿಂದೆ ನೂರಾರು ಮಂದಿ ಬಿಡಿಎನಿಂದ ನಿವೇಶನ ಮಂಜೂರಾತಿ ಪಡೆದು, ನೋಂದಣಿ ಶುಲ್ಕ ಕಟ್ಟಿದ್ದರೂ ನಿವೇಶನ ಪಡೆಯುವುದರಿಂದ ವಂಚಿತರಾಗಿದ್ದರು. ನಂತರ ನ್ಯಾಯಾಲಯದ ಆದೇಶದ ಮೇರೆಗೆ ಅವರಿಗೆ ಬಿಡಿಎ ಪರ್ಯಾಯ ನಿವೇಶನ ನೀಡಿ ಪರಿಹಾರ ಒದಗಿಸಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಮೂರು ಬಾರಿ ಮಂಜೂರಾದ ನಿವೇಶನಕ್ಕೆ ನಾನು ನೋಂದಣಿ ಮಾಡಿದ್ದರೂ, ನಿವೇಶನದ ಹಕ್ಕು ಪಡೆಯಲು ಇದುವರೆಗೂ ಸಾಧ್ಯವಾಗಿಲ್ಲ. ಬಿಡಿಎನಿಂದ ನ್ಯಾಯ ಪಡೆಯಲು, ನ್ಯಾಯಾಲಯದ ಮೊರೆ ಹೋಗಲು ಸಹ ನಿರ್ಧರಿಸಿದ್ದೇನೆ ಎಂದು ಸಚಿವರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


