ಗಣೇಶ ಚತುರ್ಥಿ ಪ್ರಯುಕ್ತ ಬೆಂಗಳೂರಿನಲ್ಲಿ ಪ್ರಾಣಿವಧೆ, ಮಾಂಸ ಮಾರಾಟ ನಿಷೇಧಿಸಿದ ಬಿಬಿಎಂಪಿ
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಆಗಸ್ಟ್ 31 ರಂದು ಗಣೇಶ ಚತುರ್ಥಿಯ ಸಂದರ್ಭದಲ್ಲಿ ಬೆಂಗಳೂರಿನಲ್ಲಿ ಪ್ರಾಣಿವಧೆ ಮತ್ತು ಮಾಂಸ ಮಾರಾಟವನ್ನು ನಿಷೇಧಿಸಿದೆ. ಬಿಬಿಎಂಪಿ ವ್ಯಾಪ್ತಿಯ ಎಲ್ಲ ಪ್ರದೇಶಗಳಿಗೂ ಈ ನಿಷೇಧ ಅನ್ವಯವಾಗಲಿದೆ.

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಆಗಸ್ಟ್ 31 ರಂದು ಗಣೇಶ ಚತುರ್ಥಿಯ ಸಂದರ್ಭದಲ್ಲಿ ಬೆಂಗಳೂರಿನಲ್ಲಿ ಪ್ರಾಣಿವಧೆ ಮತ್ತು ಮಾಂಸ ಮಾರಾಟವನ್ನು ನಿಷೇಧಿಸಿದೆ. ಬಿಬಿಎಂಪಿ ವ್ಯಾಪ್ತಿಯ ಎಲ್ಲ ಪ್ರದೇಶಗಳಿಗೂ ಈ ನಿಷೇಧ ಅನ್ವಯವಾಗಲಿದೆ.
ಗಣೇಶ ಚತುರ್ಥಿಯ ಹಿನ್ನೆಲೆಯಲ್ಲಿ ಮಾಂಸ ನಿಷೇಧಿಸಿ ಸುತ್ತೋಲೆ ಹೊರಡಿಸಿರುವ ಬಿಬಿಎಂಪಿ, 'ಮಾರ್ಚ್ 31 ರ ಬುಧವಾರದಂದು ಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ' ಎಂದು ಹೇಳಿದೆ.
ಈ ತಿಂಗಳ ಆರಂಭದಲ್ಲಿ ಶುಕ್ರವಾರ ಕೃಷ್ಣ ಜನ್ಮಾಷ್ಟಮಿಯಂದು ಕೂಡ ಮಾಂಸ ಮಾರಾಟ ಮತ್ತು ಪ್ರಾಣಿಗಳ ಹತ್ಯೆಯನ್ನು ನಿಷೇಧಿಸಿ ಬಿಬಿಎಂಪಿ ಸುತ್ತೋಲೆ ಹೊರಡಿಸಿತ್ತು.
ಬೆಂಗಳೂರಿನಲ್ಲಿ ಗಣೇಶೋತ್ಸವ ಆಚರಣೆಗೆ ಪೊಲೀಸ್ ಇಲಾಖೆ ಮಾರ್ಗಸೂಚಿಗಳನ್ನು ಹೊರಡಿಸಿದೆ. ಆಯೋಜಕರು ಗಣೇಶ ಪ್ರತಿಷ್ಟಾಪನೆಗೆ ಬಿಬಿಎಂಪಿಯ ಏಕಗವಾಕ್ಷಿ ಅನುಮತಿಯನ್ನು ಕಡ್ಡಾಯವಾಗಿ ಪಡೆದಿರಬೇಕು ಎಂದು ತಿಳಿಸಿದೆ.
ಗಣೇಶ ಮೂರ್ತಿ ಕೂರಿಸಲು ಸೂಕ್ಷ್ಮ, ಅತಿ ಸೂಕ್ಷ್ಮ, ಸಾಮಾನ್ಯ ಏರಿಯಾ ಎಂದು 3 ರೀತಿ ಪ್ರದೇಶಗಳನ್ನು ಗುರುತಿಸಲಾಗಿದೆ. ಚಾಮರಾಜಪೇಟೆ, ಚಂದ್ರಾಲೇಔಟ್, ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿ, ಗೋವಿಂದಪುರ ಸೂಕ್ಷ್ಮ ಪ್ರದೇಶ ಎಂದು ಗುರುತಿಸಲಾಗಿದೆ. ಇಂತಹ ಏರಿಯಾಗಳಲ್ಲಿ ದಿನದ 24 ಗಂಟೆಯೂ ಭದ್ರತೆ ಇರಲಿದ್ದು, 3 ಪಾಳಿಯಲ್ಲಿ ಹೆಚ್ಚಿನ ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


