ರಾಜ್ಯ

ಬಿಜೆಪಿ, ಬಿಎಸ್ ವೈ ವಚನ ಭ್ರಷ್ಟತೆಯಲ್ಲಿ ನಿಸ್ಸೀಮರು: ಸಿದ್ದರಾಮಯ್ಯ

ರಾಜ್ಯ ಬಿಜೆಪಿ ನೀಡಿದ್ದ ಪ್ರಣಾಳಿಕೆಯ ಭರವಸೆಗಳಲ್ಲಿ ಶೇ. 10 ಕೂಡ ಈಡೇರಿಸಿಲ್ಲ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ಬಿಜೆಪಿ, ಬಿಎಸ್ ವೈ ವಚನ ಭ್ರಷ್ಟತೆಯಲ್ಲಿ ನಿಸ್ಸೀಮರು: ಸಿದ್ದರಾಮಯ್ಯ
ಸಿದ್ದರಾಮಯ್ಯ, ಡಿಕೆಶಿ ಮತ್ತಿತರರು
Published On :

ಬೆಂಗಳೂರು:  ರಾಜ್ಯ ಬಿಜೆಪಿ ನೀಡಿದ್ದ ಪ್ರಣಾಳಿಕೆಯ ಭರವಸೆಗಳಲ್ಲಿ ಶೇ. 10  ಕೂಡ ಈಡೇರಿಸಿಲ್ಲ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. 

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ,  ನಾವು 2013ರ ಚುನಾವಣೆ ವೇಳೆ ಜನರಿಗೆ 165 ಭರವಸೆಗಳನ್ನು ನೀಡಿ, ಅವುಗಳಲ್ಲಿ 158 ಭರವಸೆಗಳನ್ನು ಈಡೇರಿಸಿದ್ದೆವು, ಜೊತೆಗೆ ಹೆಚ್ಚುವರಿ 30 ಕಾರ್ಯಕ್ರಮಗಳನ್ನು ಜಾರಿ ಮಾಡಿದ್ದೆವು. ಆದರೆ, ರಾಜ್ಯ ಬಿಜೆಪಿ ನೀಡಿದ್ದ ಉಳಿದ ಭರವಸೆಗಳ ಈಡೇರಿಕೆ ಯಾವಾಗ? ಎಂದು ಪ್ರಶ್ನಿಸಿದ್ದಾರೆ.

ಅಧಿಕಾರಕ್ಕೆ ಬಂದ ಕೂಡಲೇ ಸಹಕಾರಿ ಮತ್ತು ರಾಷ್ಟ್ರೀಕೃತ ಬ್ಯಾಂಕುಗಳಲ್ಲಿರುವ 1 ಲಕ್ಷದ ವರೆಗಿನ ರೈತರ ಸಾಲ ಮನ್ನಾ ಮಾಡುವ ಭರವಸೆಯನ್ನು  ಬಿಜೆಪಿಯವರು ನೀಡಿದ್ದರು. ಹಿಂದೊಮ್ಮೆ ಸಾಲ ಮನ್ನಾ ಮಾಡಲು ನೋಟ್ ಪ್ರಿಂಟ್ ಮಾಡುವ ಮೆಷಿನ್ ಇಲ್ಲ ಎಂದಿದ್ದ ಬಿಎಸ್ ಯಡಿಯೂರಪ್ಪ ವಚನ ಭ್ರಷ್ಟತೆಯಲ್ಲಿ ನಿಸ್ಸೀಮರು ಎಂದು ಟೀಕಿಸಿದ್ದಾರೆ.

ರಾಜ್ಯದಲ್ಲಿ ಬಾಕಿ ಇರುವ ಎಲ್ಲಾ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಲು 1.5 ಲಕ್ಷ ಕೋಟಿ ಖರ್ಚು ಮಾಡುತ್ತೇವೆ ಎಂದು ಅವರು ವಚನ ನೀಡಿದ್ದರು. ಕಳೆದ ಮೂರು ವರ್ಷಗಳಲ್ಲಿ ಕೇವಲ 48 ಸಾವಿರ ಕೋಟಿ ಖರ್ಚು ಮಾಡಿದ್ದಾರೆ. ಉಳಿದ ಒಂದು ಲಕ್ಷ ಕೋಟಿ ರೂಪಾಯಿಯ ಯೋಜನೆಗಳು ಜಾರಿಯಾಗೋದು ಯಾವಾಗ ಎಂದು ಪ್ರಶ್ನಿಸಿದ್ದಾರೆ.

ಅಧಿಕಾರಕ್ಕೆ ಬಂದ ಮೇಲೆ ರಾಜ್ಯದ ಸಾಲ 5 ಲಕ್ಷದ 40 ಸಾವಿರ ಕೋಟಿಗೆ ಏರಿದೆ. ಕೇವಲ 4 ವರ್ಷಗಳಲ್ಲಿ 3 ಲಕ್ಷ ಕೋಟಿ ಸಾಲ ಮಾಡಿದ್ದು ಬಿಜೆಪಿ ಸಾಧನೆ ಅಲ್ಲವೇ ಎಂದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.