ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆ ಮುನ್ನೆಚ್ಚರಿಕೆ; ಬೆಂಗಳೂರಿನಲ್ಲಿ ಮಳೆ ಮುಂದುವರಿಕೆ ಸಾಧ್ಯತೆ
ಮುಂದಿನ 24 ಗಂಟೆಗಳಲ್ಲಿ ರಾಜ್ಯದ ಉತ್ತರ ಒಳನಾಡಿನ ಬೆಳಗಾವಿ, ಬೀದರ್, ಕಲಬುರ್ಗಿ, ಯಾದಗಿರಿ ಹಾಗೂ ದಕ್ಷಿಣ ಒಳನಾಡಿನ ಕೊಡಗು, ಚಿಕ್ಕಮಗಳೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿಯಿಂದ ಅತಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಬೆಂಗಳೂರು: ಮುಂದಿನ 24 ಗಂಟೆಗಳಲ್ಲಿ ರಾಜ್ಯದ ಉತ್ತರ ಒಳನಾಡಿನ ಬೆಳಗಾವಿ, ಬೀದರ್, ಕಲಬುರ್ಗಿ, ಯಾದಗಿರಿ ಹಾಗೂ ದಕ್ಷಿಣ ಒಳನಾಡಿನ ಕೊಡಗು, ಚಿಕ್ಕಮಗಳೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿಯಿಂದ ಅತಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಕರಾವಳಿಯ ಎಲ್ಲಾ ಜಿಲ್ಲೆಗಳ ಮತ್ತು ಮತ್ತು ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಹಾಸನ, ಮಂಡ್ಯ, ಮೈಸೂರು, ರಾಮನಗರ ಮತ್ತು ಶಿವಮೊಗ್ಗ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.
ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಬೀದರ್, ಕಲಬುರ್ಗಿ, ಗದಗ, ಹಾವೇರಿ, ರಾಯಚೂರು ಮತ್ತು ದಕ್ಷಿಣ ಒಳನಾಡಿನ ಜಿಲ್ಲಾಗಳಾದ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಮಂಡ್ಯ, ಮೈಸೂರು, ರಾಮನಗರ ಮತ್ತು ಶಿವಮೊಗ್ಗ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.
ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿದ್ದು, ಕೆಲವು ಬಾರಿ ಹಗುರದಿಂದ ಸಾಧಾರಣ ಮಳೆ/ಗುಡುಗಿನಿಂದ ಕೂಡಿದ ಮಳೆಯಾಗುವ ಒಮ್ಮೊಮ್ಮೆ ಭಾರಿ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 28 ಮತ್ತು 20 ಡಿಗ್ರಿ ಸೆಲ್ಸಿಯಸ್ ಆಗಿರುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಉತ್ತರ ಒಳನಾಡಿನಲ್ಲಿ ಚುರುಕಾಗಿತ್ತು ಹಾಗೂ ಕರಾವಳಿಯಲ್ಲಿ ದುರ್ಬಲವಾಗಿತ್ತು. ಕರಾವಳಿ ಮತ್ತು ದಕ್ಷಿಣ ಒಳನಾಡಿನ ಬಹುತೇಕ ಕಡೆಗಳಲ್ಲಿ ಉತ್ತರ ಒಳನಾಡಿನ ಹಲವು ಕಡೆಗಳಲ್ಲಿ ಮಳೆಯಾಗಿದೆ. ಮದ್ದೂರು (ಮಂಡ್ಯ ಜಿಲ್ಲೆ) 14 ಸೆಂ.ಮೀ; ಭದ್ರಾವತಿ (ಶಿವಮೊಗ್ಗ ಜಿಲ್ಲೆ), ಬಿ. (ಚಿತ್ರದುರ್ಗ ಜಿಲ್ಲೆ) ತಲಾ 13 ಸೆಂ.ಮೀ; ಮಧುಗಿರಿ (ತುಮಕೂರು ಜಿಲ್ಲೆ), ದೇವನಹಳ್ಳಿ (ಬೆಂಗಳೂರು ಗ್ರಾಮಾಂತರ ಜಿಲ್ಲೆ) ತಲಾ 12 ಸೆಂ.ಮೀ. ಮಳೆಯಾಗಿದೆ.
ಅಂತೆಯೇ ಉಚ್ಚಂಗಿದುರ್ಗ (ದಾವಣಗೆರೆ ಜಿಲ್ಲೆ), ಹುಂಚದಕಟ್ಟೆ (ಶಿವಮೊಗ್ಗ ಜಿಲ್ಲೆ) ತಲಾ 11 ಸೆಂ.ಮೀ.; ಬೆಂಗಳೂರು ನಗರ, ಬೆಂಗಳೂರು ಕೆಐಎಎಲ್ ವಿಮಾನ ನಿಲ್ದಾಣ, ಕೆಎಸ್ಎನ್ಡಿಎಂಸಿ ಕ್ಯಾಂಪಸ್ (ಬೆಂಗಳೂರು ನಗರ ಜಿಲ್ಲೆ) ತಲಾ 9 ಸೆಂ.ಮೀ.. ತುರುವೇಕೆರೆ (ತುಮಕೂರು ಜಿಲ್ಲೆ), ದೊಡ್ಡಬಳ್ಳಾಪುರ (ಬೆಂಗಳೂರು ಗ್ರಾಮಾಂತರ ಜಿಲ್ಲೆ), ಚಾಮರಾಜನಗರ (ಚಾಮರಾಜನಗರ ಜಿಲ್ಲೆ) ತಲಾ 8 ಸೆಂ.ಮೀ.. ಮುನಿರಾಬಾದ್ (ಕೊಪ್ಪಳ ಜಿಲ್ಲೆ), ಎಂಪ್ರಿ, ಹೆಸರಘಟ್ಟ, ಐಟಿಸಿ ಜಾಲಾ (ಎಲ್ಲಾ ಬೆಂಗಳೂರು ನಗರ ಜಿಲ್ಲೆ), ಚಿತ್ರದುರ್ಗ ರಾಮನಗರ, ಚಳ್ಳಕೆರೆ (ಚಿತ್ರದುರ್ಗ ಜಿಲ್ಲೆ), ಚಿಕ್ಕಬಳ್ಳಾಪುರ (ಚಿಕ್ಕಬಳ್ಳಾಪುರ ಜಿಲ್ಲೆ) ತಲಾ 7 ಸೆಂ.ಮೀ. ಮಳೆಯಾಗಿದೆ.
ಸೆಪ್ಟೆಂಬರ್ 1ವರೆಗೂ ಮಳೆ ಮುನ್ಸೂಚನೆ
ರಾಜ್ಯದಾದ್ಯಂತ ಬಹುತೇಕ ಕಡೆಗಳಲ್ಲಿ ಮಳೆ/ಗುಡುಗಿನಿಂದ ಕೂಡಿದ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದ್ದು, ರಾಜ್ಯದ ಹವಾಮಾನದಲ್ಲಿ ಯಾವುದೇ ಗಮನಾರ್ಹ ಬದಲಾವಣೆ ಇಲ್ಲ ಎಂದು ಸ್ಪಷ್ಟಪಡಿಸಿದೆ. ರಾಜ್ಯದಾದ್ಯಂತ ಎಲ್ಲಾ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಮಿಂಚಿನ ಸಾದ್ಯತೆ ಇದ್ದು, ಸೆಪ್ಟೆಂಬರ್ 1ರ ಬೆಳಗ್ಗೆ ವರೆಗಿನ ರಾಜ್ಯಾಂದ್ಯತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


