ರಾಜ್ಯ

ಲಕ್ಷ್ಮಣ್ ಸವದಿ ಕಾರು ಅಪಘಾತ, ಅದೃಷ್ಟವಶಾತ್ ಮಾಜಿ ಡಿಸಿಎಂ ಪ್ರಾಣಾಪಾಯದಿಂದ ಪಾರು

ಬೆಳಗಾವಿ ಜಿಲ್ಲೆಯ ಹಾರೂಗೇರಿ ಬಳಿ ಮಾಜಿ ಉಪಮುಂಖ್ಯಮಂತ್ರಿ ಲಕ್ಷ್ಮಣ್ ಸವದಿ ಅವರ ಕಾರು ಬುಧವಾರ ಅಪಘಾತಕ್ಕೀಡಾಗಿದ್ದು, ಅದೃಷ್ಟವಶಾತ್ ಲಕ್ಷ್ಮಣ್ ಸವದಿ ಪ್ರಣಾಪಾಯದಿಂದ ಪಾರಾಗಿದ್ದಾರೆ.

ಲಕ್ಷ್ಮಣ್ ಸವದಿ ಕಾರು ಅಪಘಾತ, ಅದೃಷ್ಟವಶಾತ್ ಮಾಜಿ ಡಿಸಿಎಂ ಪ್ರಾಣಾಪಾಯದಿಂದ ಪಾರು
ಲಕ್ಷ್ಮಣ್ ಸವದಿ
Published On :

ಬೆಳಗಾವಿ: ಬೆಳಗಾವಿ ಜಿಲ್ಲೆಯ ಹಾರೂಗೇರಿ ಬಳಿ ಮಾಜಿ ಉಪಮುಂಖ್ಯಮಂತ್ರಿ ಲಕ್ಷ್ಮಣ್ ಸವದಿ ಅವರ ಕಾರು ಬುಧವಾರ ಅಪಘಾತಕ್ಕೀಡಾಗಿದ್ದು, ಅದೃಷ್ಟವಶಾತ್ ಲಕ್ಷ್ಮಣ್ ಸವದಿ ಪ್ರಣಾಪಾಯದಿಂದ ಪಾರಾಗಿದ್ದಾರೆ. 

ಅಥಣಿಯಿಂದ ಬೆಳಗಾವಿ ಹೋಗುವಾಗ ಕಾರು ಅಪಘಾತ ಸಂಭಂವಿಸಿದ್ದು, ಲಕ್ಷ್ಮಣ್ ಸವದಿ ಸೇರಿದಂತೆ ಕಾರಿನಲ್ಲಿದ್ದ ನಾಲ್ವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಕಾರು ಬೈಕ್‌ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ. ಕಾರಿನಿಂದ ಲಕ್ಷ್ಮಣ ಸವದಿ, ಕಾರು ಚಾಲಕ ಹಾಗೂ ಗನ್ ಮ್ಯಾನ್ ಅವರನ್ನು ಹೊರಕ್ಕೆ ಕರೆತರಲಾಗಿದೆ. 

ಹಾರೂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.