ಕೊಪ್ಪಳ: ಕುಡಿಯುವ ನೀರು ಪೂರೈಕೆಗೆ ಆಗ್ರಹ, ಗ್ರಾಮ ಪಂಚಾಯಿತಿ ಸದಸ್ಯರ ಧರಣಿ
ಕೊಪ್ಪಳ ಜಿಲ್ಲೆಯ ಸಿದ್ದಾಪುರ ಗ್ರಾಮದಲ್ಲಿ ಕುಡಿಯುವ ನೀರು ಪೂರೈಕೆಗೆ ಆಗ್ರಹಿಸಿ ಗ್ರಾಮ ಪಂಚಾಯಿತಿ ಸದಸ್ಯರು ಧರಣಿ ನಡೆಸುತ್ತಿದ್ದಾರೆ.

ಕೊಪ್ಪಳ: ಕೊಪ್ಪಳ ಜಿಲ್ಲೆಯ ಸಿದ್ದಾಪುರ ಗ್ರಾಮದಲ್ಲಿ ಕುಡಿಯುವ ನೀರು ಪೂರೈಕೆಗೆ ಆಗ್ರಹಿಸಿ ಗ್ರಾಮ ಪಂಚಾಯಿತಿ ಸದಸ್ಯರು ಧರಣಿ ನಡೆಸುತ್ತಿದ್ದಾರೆ. ಕಳೆದ ಹಲವು ತಿಂಗಳಿಂದ ನಿರಂತರ ಕುಡಿಯುವ ನೀರು ಪೂರೈಕೆ ಕುರಿತು ಗ್ರಾಮಸ್ಥರು ಒತ್ತಡ ಹೇರುತ್ತಿರುವುದರಿಂದ ಗ್ರಾಮ ಪಂಚಾಯಿತಿ ಸಿಬ್ಬಂದಿ ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವಿರುದ್ಧ ಪ್ರತಿಭಟನೆ ನಡೆಸಬೇಕಾದ ಅನಿವಾರ್ಯತೆ ಎದುರಾಗಿದೆ ಎಂದು ಗ್ರಾಮ ಪಂಚಾಯಿತಿ ಸದಸ್ಯರೊಬ್ಬರು ತಿಳಿಸಿದರು.
ಈ ಸಂಬಂಧ ಗ್ರಾ.ಪಂ.ಅಧ್ಯಕ್ಷರಿಗೆ ಹಾಗೂ ಸಿಬ್ಬಂದಿಗೆ ಹಲವು ಬಾರಿ ಮನವಿ ಮಾಡಿದರೂ ಯಾವುದೇ ಕ್ರಮಕೈಗೊಂಡಿಲ್ಲ. ಕುಡಿಯುವ ನೀರು ಪೂರೈಸಲು ವಾರ್ಡ್ ಆಯ್ಕೆ ಮಾಡುವಾಗ ಸಂಬಂಧಪಟ್ಟ ಸಿಬ್ಬಂದಿ ತಾರತಮ್ಯ ಮಾಡುತ್ತಿದ್ದಾರೆ. ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದರೂ ಕುಡಿಯುವ ನೀರು ಪೂರೈಕೆ ಮಾಡುವಲ್ಲಿ ಅಧಿಕಾರಿಗಳು ವಿಫಲರಾಗಿದ್ದಾರೆ ಎಂದು ಮತ್ತೊಬ್ಬ ಸದಸ್ಯ ಚೆನ್ನಬಸವನಗೌಡ ಹೇಳಿದರು.
ಕುಡಿಯುವ ನೀರು ಪೂರೈಕೆಯನ್ನು ಖಾಸಗಿ ಗುತ್ತಿಗೆದಾರರಿಗೆ ವಹಿಸಿರುವುದು ಸಮಸ್ಯೆಗೆ ಮೂಲವಾಗಿದ್ದು, ಅವರ ಪಾವತಿಗಳನ್ನು ನಿಲ್ಲಿಸಬೇಕು ಎಂದು ಸದಸ್ಯರು ಹೇಳಿದರು. ಆದರ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶ್ವೇತಾ ದೇವರಾಜ್ ಧರಣಿ ನಿರತ ಸದಸ್ಯರಿಗೆ ಹಾಗೂ ನಿವಾಸಿಗಳಿಗೆ ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿದ್ದರಿಂದ ಸದಸ್ಯರು ಧರಣಿ ಹಿಂಪಡೆದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


