ಮೇಲ್ಜಾತಿಯವರಿಂದ ಅವಮಾನ, ಹಲ್ಲೆ: ಮನನೊಂದು ಮುಳಬಾಗಿಲಿನ ಯುವಕ ಆತ್ಮಹತ್ಯೆ
ಮೇಲ್ಜಾತಿಯವರಿಂದ ಆದ ಅವಮಾನವನ್ನು ಸಹಿಸಲಾಗದೆ ದಲಿತ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲಿನಲ್ಲಿ ನಡೆದಿದೆ.

ಮುಳಬಾಗಿಲು: ಮೇಲ್ಜಾತಿಯವರಿಂದ ಆದ ಅವಮಾನವನ್ನು ಸಹಿಸಲಾಗದೆ ದಲಿತ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲಿನಲ್ಲಿ ನಡೆದಿದೆ.
ಉದಯ ಕಿರಣ ಎಂಬ ದಲಿತ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಉದಯ ಕಿರಣ ಬೈಕ್ ನಲ್ಲಿ ಹೋಗುವಾಗ ಮೇಲ್ಜಾತಿಯವರ ಬೈಕನ್ನು ಹಿಂದಿಕ್ಕಿ ಹೋಗಿದ್ದಾನೆ ಎಂದು ಆಕ್ರೋಶಗೊಂಡು ಜಗಳಕ್ಕಿಳಿದು ಮೇಲ್ಜಾತಿ ಯುವಕರು ಮನಸಾರೆ ಬೈದಿದ್ದು ಮಾತ್ರವಲ್ಲದೆ ಉದಯ್ ನನ್ನು ಮರಕ್ಕೆ ಕಟ್ಟಿ ಬಟ್ಟೆ ಬಿಚ್ಚಿ ಚೆನ್ನಾಗಿ ಹೊಡೆದಿದ್ದಾರೆ.
ಇದರಿಂದ ಮಾನಸಿಕವಾಗಿ ಉದಯ್ ಕಿರಣ್ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ನಾಲ್ವರ ವಿರುದ್ಧ ದೂರು ದಾಖಲಿಸಲಾಗಿದ್ದು ಅವರು ಪ್ರಸ್ತುತ ತಲೆಮರೆಸಿಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


