ನೇಮಕಾತಿ 2022: ಐಟಿಬಿಪಿಯಲ್ಲಿ 287 ಹುದ್ದೆಗಳು ಖಾಲಿ ಇದೆ!
ಇಂಡೊ ಟಿಬೇಟಿಯನ್ ಬಾರ್ಡರ್ ಪೊಲೀಸ್ ಫೋರ್ಸ್‌ನಲ್ಲಿ ಅಗತ್ಯವಿರುವ ಕಾನ್ಸ್‌ಟೇಬಲ್ (ಟ್ರೇಡ್ಸ್‌ಮನ್) ಗ್ರೂಪ್-ಸಿ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಇಂಡೊ ಟಿಬೇಟಿಯನ್ ಬಾರ್ಡರ್ ಪೊಲೀಸ್ ಫೋರ್ಸ್‌ನಲ್ಲಿ ಅಗತ್ಯವಿರುವ ಕಾನ್ಸ್‌ಟೇಬಲ್ (ಟ್ರೇಡ್ಸ್‌ಮನ್) ಗ್ರೂಪ್-ಸಿ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಹುದ್ದೆ: ಕಾನ್ಸ್‌ಟೇಬಲ್ (ಟೈಲರ್, ಗಾರ್ಡನರ್, ಕೊಬ್ಲೇರ್, ಸಫಾಯ್ ಕರ್ಮಚಾರಿ, ವಾಶರ್ ಮ್ಯಾನ್, ಬಾರ್ಬರ್)
ಕರ್ತವ್ಯ ಸ್ಥಳ: ಭಾರತದೆಲ್ಲೆಡೆ
ಶೈಕ್ಷಣಿಕ ಅರ್ಹತೆ:
ಕಾನ್ಸ್‌ಟೇಬಲ್ (ಟೈಲರ್, ಗಾರ್ಡನರ್, ಕೊಬ್ಲೇರ್) – 10ನೇ ತರಗತಿ ಉತ್ತೀರ್ಣರಾಗಿರಬೇಕು ಜೊತೆಗೆ ಆಯಾ ಟ್ರೇಡ್ ನಲ್ಲಿ ಎರಡು ವರ್ಷ ಕೆಲಸದ ಅನುಭವ ಹೊಂದಿರಬೇಕು. ಅಥವಾ ಐಟಿಐ ಅರ್ಹತೆ ಜೊತೆಗೆ ಕೆಲಸದ ಅನುಭವ ಹೊಂದಿರಬೇಕು.
ಕಾನ್ಸ್‌ಟೇಬಲ್ (ಸಫಾಯ್ ಕರ್ಮಚಾರಿ, ವಾಶರ್ ಮ್ಯಾನ್, ಬಾರ್ಬರ್) – ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಮೆಟ್ರಿಕ್ಯುಲೇಷನ್ ಅರ್ಹತೆ ಹೊಂದಿರಬೇಕು.
ವಯೋಮಿತಿ
ಕಾನ್ಸ್‌ಟೇಬಲ್ (ಟೈಲರ್, ಗಾರ್ಡನರ್, ಕೊಬ್ಲೇರ್) – ಕನಿಷ್ಠ 18 ವರ್ಷ, ಗರಿಷ್ಠ 23 ವರ್ಷ
ಕಾನ್ಸ್‌ಟೇಬಲ್ (ಸಫಾಯ್ ಕರ್ಮಚಾರಿ, ವಾಶರ್ ಮ್ಯಾನ್, ಬಾರ್ಬರ್) – ಕನಿಷ್ಠ 18 ವರ್ಷ, ಗರಿಷ್ಠ 25 ವರ್ಷ
ವೇತನ: ಮಾಸಿಕ ರೂ. 21,700 ರಿಂದ ರೂ. 69,100 ಶ್ರೇಣಿ
ಇದನ್ನೂ ಓದಿ: ನೇಮಕಾತಿ 2022: ಜೆಸ್ಕಾಂ ನಲ್ಲಿ 13 ಹುದ್ದೆಗಳು ಖಾಲಿ, ಆಸಕ್ತರು ಕೂಡಲೇ ಅರ್ಜಿ ಸಲ್ಲಿಸಿ
ಆಯ್ಕೆ ವಿಧಾನ:
ಅಭ್ಯರ್ಥಿಗಳಿಗೆ ಸಹಿಷ್ಣುತೆ ಪರೀಕ್ಷೆ, ದೇಹದಾರ್ಢ್ಯತೆ ಪರೀಕ್ಷೆ (PST), ಲಿಖಿತ ಪರೀಕ್ಷೆ, ಟ್ರೇಡ್ ಟೆಸ್ಟ್ ಮತ್ತು ವೈದ್ಯಕೀಯ ಪರೀಕ್ಷೆ ನಡೆಸಿ ಹುದ್ದೆಗಳಿಗೆ ನೇಮಕ ಮಾಡಲಾಗುವುದು.
ಅರ್ಜಿ ಸಲ್ಲಿಕೆ ವಿಧಾನ:
ಅಭ್ಯರ್ಥಿಯು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ Notification ಅನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಅರ್ಜಿ ಶುಲ್ಕ:
ಅಭ್ಯರ್ಥಿಗಳು ರೂ. 100 ಶುಲ್ಕ ಪಾವತಿಸಬೇಕು. ಪ.ಜಾತಿ, ಪ.ಪಂಗಡ, ಮಹಿಳೆ ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.
ಶುಲ್ಕ ಪಾವತಿ ವಿಧಾನ: ಆನ್‌ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಡಿಸೆಂಬರ್ 22, 2022
ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆಗೆ ಇಲ್ಲಿ ಕ್ಲಿಕ್ ಮಾಡಿ
https://ggle.io/5PKS
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
https://bityl.co/Fz08
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


