ಗಡುವು ಪೂರ್ಣಗೊಂಡರೂ ಮುಗಿಯದ 6,000 ತರಗತಿ ಕೊಠಡಿಗಳ ನವೀಕರಣ ಕಾರ್ಯ!
ಈ ವರ್ಷದ ಡಿಸೆಂಬರ್ ಅಂತ್ಯದೊಳಗೆ ಪೂರ್ಣಗೊಳ್ಳುವ ನಿರೀಕ್ಷೆಯಿದ್ದ 6,000 ತರಗತಿ ಕೊಠಡಿಗಳ ನವೀಕರಣ ಕಾರ್ಯವು ನವೆಂಬರ್‌ನಲ್ಲಿ ಪ್ರಾರಂಭವಾಗಿದ್ದು, ಕಾಮಗಾರಿ ಪೂರ್ಣಗೊಳ್ಳಲು 18 ತಿಂಗಳು ಬೇಕಾಗಬಹುದು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಬೆಂಗಳೂರು: ಈ ವರ್ಷದ ಡಿಸೆಂಬರ್ ಅಂತ್ಯದೊಳಗೆ ಪೂರ್ಣಗೊಳ್ಳುವ ನಿರೀಕ್ಷೆಯಿದ್ದ 6,000 ತರಗತಿ ಕೊಠಡಿಗಳ ನವೀಕರಣ ಕಾರ್ಯವು ನವೆಂಬರ್‌ನಲ್ಲಿ ಪ್ರಾರಂಭವಾಗಿದ್ದು, ಕಾಮಗಾರಿ ಪೂರ್ಣಗೊಳ್ಳಲು 18 ತಿಂಗಳು ಬೇಕಾಗಬಹುದು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಸರ್ಕಾರಿ ಶಾಲೆಗಳಲ್ಲಿನ ಮೂಲಸೌಕರ್ಯಗಳು ಕುಸಿಯುತ್ತಿರುವ ಕುರಿತು ಹಲವು ದೂರುಗಳು ಕೇಳಿ ಬಂದಿದ್ದವು. ಇದಕ್ಕೆ ಸ್ಪಂದಿಸಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ರಾಜ್ಯದ 6,000 ತರಗತಿ ಕೊಠಡಿಗಳ ನವೀಕರಣಕ್ಕೆ 1,000 ಕೋಟಿ ರೂ.ಬಿಡುಗಡೆ ಮಾಡಲು ಒಪ್ಪಿಗೆ ನೀಡಿದ್ದರು.
ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತ ಡಾ ವಿಶಾಲ್ ಆರ್ ಮಾತನಾಡಿ, ವರ್ಷಾಂತ್ಯದ ವೇಳೆಗೆ 200 ಕೋಟಿ ರೂಪಾಯಿಗಳನ್ನು ಮಂಜೂರು ಮಾಡುವ ನಿರೀಕ್ಷೆಯಿದೆ ಎಂದು ಹೇಳಿದ್ದಾರೆ.
ಮಳೆಯಿಂದ ತರಗತಿ ಕೊಠಡಿಗಳಿಗೆ ಹೆಚ್ಚಿನ ಹಾನಿಯಾಗಿದ್ದು, ಕಾಮಗಾರಿ ಆರಂಭ ವಿಳಂಬಕ್ಕೂ ಇದು ಕಾರಣವಾಗಿದೆ, ಟೈಲಿಂಗ್, ಫ್ಲೋರಿಂಗ್‌ನಂತಹ ಮೂಲ ದುರಸ್ತಿ ಕಾರ್ಯ ಕೈಗೊಳ್ಳಲು ಪ್ರತಿ ಜಿಲ್ಲೆಗೆ 60 ರಿಂದ 70 ಕೋಟಿ ರೂಪಾಯಿಗಳ ಅಗತ್ಯವಿದೆ. ಎಂಜಿನಿಯರ್‌ಗಳ ಕೊರತೆಯೂ ಇದೆ ಎಂದು ತಿಳಿಸಿದ್ದಾರೆ.
ಶಿಕ್ಷಣ ತಜ್ಞ ಮತ್ತು ಕರ್ನಾಟಕ ಅಸೋಸಿಯೇಟೆಡ್ ಮ್ಯಾನೇಜ್‌ಮೆಂಟ್ ಆಫ್ ಆಂಗ್ಲ ಮಾಧ್ಯಮ ಶಾಲೆಗಳ (ಕೆಎಎಂಎಸ್) ಪ್ರಧಾನ ಕಾರ್ಯದರ್ಶಿ ಡಿ ಶಶಿಕುಮಾರ್ ಮಾತನಾಡಿ, ಇಲಾಖೆಯಿಂದ ದೊಡ್ಡ ಭರವಸೆಗಳನ್ನು ನೀಡಲಾಗುತ್ತಿದೆ. ಆದರೆ, ಮಾಡುತ್ತಿರುವ ಕಲಸ ಮಾತ್ರ ಅತ್ಯಂತ ಕಡಿಮೆ. ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಕೇವಲ ಘೋಷಣೆ ಮಾಡಿದರೆ ಸಾಲದು. ಕಾಮಗಾರಿಗಳ ನಡೆಸಲು ಸೂಕ್ತ ರೀತಿಯ ಯೋಜನೆ ರೂಪಿಸಬೇಕು ಎಂದು ಹೇಳಿದ್ದಾರೆ.
ಇಲ್ಲಿಯವರೆಗೆ ನಾವು ತರಗತಿಗಳ ಮೂಲಸೌಕರ್ಯ ಅಂಶವನ್ನು ಮಾತ್ರ ತಿಳಿಸುತ್ತಿದ್ದೇವೆಯೇ ಹೊರತು ಶಿಕ್ಷಣದ ಗುಣಮಟ್ಟವಲ್ಲ. ಇತರ ರಾಜ್ಯಗಳಿಗೆ ಹೋಲಿಸಿದರೆ ಕಲಿಕೆಯ ಗುಣಮಟ್ಟವನ್ನು ಸುಧಾರಿಸುವಲ್ಲಿ ಸರ್ಕಾರ ವಿಫಲವಾಗಿದೆ. ಹೀಗಾಗಿ ಸರ್ಕಾರ ಎರಡನ್ನೂ ಏಕಕಾಲದಲ್ಲಿ ಮಾಡಬೇಕಾಗಿದೆ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


