ಬೆಂಗಳೂರು: 30 ವರ್ಷದ ಅಪರಿಚಿತ ವ್ಯಕ್ತಿಯ ಬರ್ಬರ ಹತ್ಯೆ; ಕೆ.ಪಿ.ಅಗ್ರಹಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು
ನಗರದ ಕೆಪಿ ಅಗ್ರಹಾರದ ಐದನೇಯ ಕ್ರಾಸ್ನ ಹೇಮಂತ್ ಮೆಡಿಕಲ್ ಮುಂಭಾಗದಲ್ಲಿ ತಡರಾತ್ರಿ 12.30 ರ ಸುಮಾರಿಗೆ 30 ವರ್ಷದ ಅಪರಿಚಿತ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.

ಬೆಂಗಳೂರು: ನಗರದ ಕೆಪಿ ಅಗ್ರಹಾರದ ಐದನೇಯ ಕ್ರಾಸ್ನ ಹೇಮಂತ್ ಮೆಡಿಕಲ್ ಮುಂಭಾಗದಲ್ಲಿ ತಡರಾತ್ರಿ 12.30 ರ ಸುಮಾರಿಗೆ 30 ವರ್ಷದ ಅಪರಿಚಿತ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.
ಈ ಕೃತ್ಯದಲ್ಲಿ ಮೂವರು ಪುರುಷರು ಹಾಗೂ ಮೂವರು ಮಹಿಳೆಯರು ಸೇರಿದ್ದಾರೆ ಎಂಬ ಮಾಹಿತಿ ಇದ್ದು, ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದೆ.
ಸ್ಥಳಕ್ಕೆ ಮಾಗಡಿ ರಸ್ತೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಮುಖ ಸಂಪೂರ್ಣವಾಗಿ ಗುರುತು ಸಿಗದಂತೆ ಮುಖವನ್ನು ಜಜ್ಜಿ ಕೊಲೆ ಮಾಡಲಾಗಿದೆ. ಸದ್ಯ ಮೃತನ ಗುರುತು ಪತ್ತೆ ಮಾಡುತ್ತಿದ್ದಾರೆ. ಕೆ ಪಿ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


