ಬೆಂಗಳೂರು: ಪಾರಿವಾಳ ಹಿಡಿಯಲು ಹೋಗಿ ಹೈಟೆನ್ಷನ್ ವಯರ್ ಸ್ಪರ್ಶಿಸಿದ್ದ ಬಾಲಕ ಚಿಕಿತ್ಸೆ ಫಲಕಾರಿಯಾಗದೆ ಸಾವು
3 ದಿನಗಳ ಹಿಂದೆ ಹೈಟೆನ್ಷನ್ ವಯರ್ ಸ್ಪರ್ಶಿಸಿ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಬಾಲಕರ ಪೈಕಿ ಓರ್ವ ಬಾಲಕ ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಮೃತಪಟ್ಟಿದ್ದಾನೆಂದು ತಿಳಿದುಬಂದಿದೆ.

ಬೆಂಗಳೂರು: 3 ದಿನಗಳ ಹಿಂದೆ ಹೈಟೆನ್ಷನ್ ವಯರ್ ಸ್ಪರ್ಶಿಸಿ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಬಾಲಕರ ಪೈಕಿ ಓರ್ವ ಬಾಲಕ ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಮೃತಪಟ್ಟಿದ್ದಾನೆಂದು ತಿಳಿದುಬಂದಿದೆ.
ನಗರದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಡುತ್ತಿದ್ದ ಬಾಲಕ ಸುಪ್ರೀತ್ ಇಂದು ಬೆಳಗ್ಗೆ ಸಾವನ್ನಪ್ಪಿದ್ದಾನೆ.
ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್‌ನಲ್ಲಿ ದುರ್ಘಟನೆ ನಡೆದಿತ್ತು. ಡಿಸೆಂಬರ್ 1 ರಂದು ಶಾಲೆಯಿಂದ ಮನೆಗೆ ಬಂದಿದ್ದ ಬಾಲಕರಿಬ್ಬರು ಮನೆಯ ಮಹಡಿ ಮೇಲಿದ್ದ ಪಾರಿವಾಳವನ್ನು ಹಿಡಿಯಲು ಹೋಗಿದ್ದರು. ಈ ವೇಳೆ ಕಬ್ಬಿಣದ ರಾಡ್‌ನಿಂದ ಹೈಟೆನ್ಷನ್ ವಯರ್ ಅನ್ನು ಬಾಲಕರು ಮುಟ್ಟಿದ್ದರು. ಘಟನೆಯ ತೀವ್ರತೆ ಎಷ್ಟಿತ್ತು ಎಂದರೆ ಮನೆಯಲ್ಲಿದ್ದ ಎಲೆಕ್ಟ್ರಿಕ್ ಉಪಕರಣಗಳೆಲ್ಲವೂ ಸ್ಫೋಟಗೊಂಡಿತ್ತು.
ಘಟನೆಯಿಂದ ಬಾಲಕ ಸುಪ್ರೀತ್ ದೇಹದಲ್ಲಿ ಸುಮಾರು ಶೇ.90 ರಷ್ಟು ಸುಟ್ಟ ಗಾಯಗಳಾಗಿತ್ತು. ಇನ್ನೊಬ್ಬ ಬಾಲಕ ಚಂದ್ರು ಕೂಡಾ ಸುಮಾರು ಶೇ.70 ರಷ್ಟು ಸುಟ್ಟ ಗಾಯಗಳಿಂದ ಆಸ್ಪತ್ರೆ ಸೇರಿದ್ದ. ದುರ್ಘಟನೆ ನಡೆದ ತಕ್ಷಣವೇ ಬಾಲಕರನ್ನು ನಗರದ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಇಂದು ಇಬ್ಬರ ಪೈಕಿ ಓರ್ವ ಬಾಲಕ ಬೆಳಗ್ಗೆ 7:30ರ ವೇಳೆಗೆ ಕೊನೆಯುಸಿರೆಳೆದಿದ್ದಾನೆ.
ಬಾಲಕ ಸುಪ್ರೀತ್ ತಂದೆ ಮಂಜುನಾಥ್ ಹಾಗೂ ತಾಯಿ ಪ್ರೇಮ ಅವರ ಒಬ್ಬನೇ ಮಗನಾಗಿದ್ದ. ಬಾಲಕನ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಯ ಶವಾಗಾರಕ್ಕೆ ಕಳುಹಿಸಲಾಗಿದೆ. ಮರಣೋತ್ತರ ಪರೀಕ್ಷೆಯ ಬಳಿಕ ಬಾಲಕನ ಮೃತದೇಹವನ್ನು ಕುಟುಂಬದವರಿಗೆ ರವಾನೆ ಮಾಡಲಾಗುತ್ತದೆ.
ಘಟನೆಯಲ್ಲಿ ಗಾಯಗೊಂಡಿರುವ ಇನ್ನೊಬ್ಬ ಬಾಲಕ ಚಂದ್ರುವಿಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


