ರಾಜ್ಯ

ಬೈಕ್ ಗೆ ಬಿಜೆಪಿ ಎಂಎಲ್ ಸಿ ಕಾರು ಡಿಕ್ಕಿ; ಕನಿಷ್ಠ ಮಾನವೀಯತೆ ತೋರದ ಎನ್ ರವಿಕುಮಾರ್ ವಿರುದ್ಧ ಜನರ ಆಕ್ರೋಶ

ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಆಗಿರುವ ಎಂಎಲ್ ಸಿ ಎನ್. ರವಿಕುಮಾರ್ ಅವರ ಕಾರು ಬೈಕ್ ಸವಾರನೊಬ್ಬನಿಗೆ ಡಿಕ್ಕಿ ಹೊಡೆದ ಪರಿಣಾಮ ಆತ ಗಾಯಗೊಂಡಿರುವ ಘಟನೆ ಲಕ್ಷ್ಮಿ ಸಾಗರ ಗೇಟ್ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಭಾನುವಾರ ನಡೆದಿದೆ.

ಬೈಕ್ ಗೆ ಬಿಜೆಪಿ ಎಂಎಲ್ ಸಿ ಕಾರು ಡಿಕ್ಕಿ; ಕನಿಷ್ಠ ಮಾನವೀಯತೆ ತೋರದ ಎನ್ ರವಿಕುಮಾರ್ ವಿರುದ್ಧ ಜನರ ಆಕ್ರೋಶ
ವಿಧಾನಪರಿಷತ್ ಸದಸ್ಯ ಎನ್ ರವಿಕುಮಾರ್
Published On :

ಕೋಲಾರ: ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಆಗಿರುವ  ಎಂಎಲ್ ಸಿ ಎನ್.  ರವಿಕುಮಾರ್ ಅವರ ಕಾರು ಬೈಕ್ ಸವಾರನೊಬ್ಬನಿಗೆ ಡಿಕ್ಕಿ ಹೊಡೆದ ಪರಿಣಾಮ ಆತ ಗಾಯಗೊಂಡಿರುವ ಘಟನೆ ಲಕ್ಷ್ಮಿ ಸಾಗರ ಗೇಟ್ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಭಾನುವಾರ ನಡೆದಿದೆ.

ಆದರೆ, ಗಾಯಗೊಂಡ ಬೈಕ್ ಸವಾರನನ್ನು ಆಸ್ಪತ್ರೆಗೆ ಕರೆದೊಯ್ಯಲು ಕನಿಷ್ಠ ಮಾನವೀಯತೆ ತೋರದ ರವಿಕುಮಾರ್ ವಿರುದ್ಧ ಜನರು ನಾನಾ ರೀತಿಯ ಮಾತುಗಳ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಘಟನೆಯಲ್ಲಿ ಗಾಯಗೊಂಡ ಹೊಸಕೋಟೆಯ ಗೋಪಾಲ್ ಎಂಬುವರನ್ನು ಆಸ್ಪತ್ರೆಗೆ ದಾಖಲಿಸಲು ರವಿಕುಮಾರ್ ಹಿಂದೇಟು ಹಾಕಿದ್ದರಿಂದ ರೊಚ್ಚಿಗೆದ್ದ  ಜನರು, ನೀನು ಯಾವ ಸೀಮೆ ಎಂಎಲ್ ಸಿ? ಕನಿಷ್ಠ ಮಾನವೀಯತೆ ಇಲ್ಲವೇ ಎಂದು ಹರಿಹಾಯ್ದಿದ್ದಾರೆ.

ನಂತರ ಸ್ಥಳಕ್ಕೆ ಆಗಮಿಸಿದ ಪೊಲೀಸರು ಸ್ಥಳೀಯರನ್ನು ಸಮಾಧಾನಪಡಿಸಿದ್ದಾರೆ. ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.