ರಾಜ್ಯ

ರಾಮನಗರ: ಟರ್ನಿಂಗ್ ಮಾಡುವಾಗ ಲಗೇಜ್ ಆಟೋ ಪಲ್ಟಿ, ಮಂಡ್ಯ ಮೂಲದ ಮೂವರು ಸಾವು

ಮಾಗಡಿ ತಾಲೂಕಿನ ನಾರಾಯಣಿಪಾಳ್ಯ ಗೇಟ್ ಬಳಿ ರಸ್ತೆ ತಿರುವಿನಲ್ಲಿ ಲಗೇಜ್ ಆಟೋ ಪಲ್ಟಿಯಾಗಿ ಮೂವರು ಸ್ಥಳದಲ್ಲೇ ದುರ್ಮರಣಕ್ಕಿಡಾಗಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ.

ರಾಮನಗರ: ಟರ್ನಿಂಗ್ ಮಾಡುವಾಗ ಲಗೇಜ್ ಆಟೋ ಪಲ್ಟಿ, ಮಂಡ್ಯ ಮೂಲದ ಮೂವರು ಸಾವು
ಸಾಂದರ್ಭಿಕ ಚಿತ್ರ
Published On :

ರಾಮನಗರ: ಮಾಗಡಿ ತಾಲೂಕಿನ ನಾರಾಯಣಿಪಾಳ್ಯ ಗೇಟ್ ಬಳಿ ರಸ್ತೆ ತಿರುವಿನಲ್ಲಿ ಲಗೇಜ್ ಆಟೋ ಪಲ್ಟಿಯಾಗಿ ಮೂವರು ಸ್ಥಳದಲ್ಲೇ ದುರ್ಮರಣಕ್ಕಿಡಾಗಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ.

ಮಂಡ್ಯ ಜಿಲ್ಲೆ ನಾಗಮಂಗಲ ತಾಲ್ಲೂಕಿನ ಬೆಳ್ಳೂರು ಗ್ರಾಮದವರಾದ ರತ್ನಮ್ಮ (53), ಲಕ್ಕಮ್ಮ (40) ಹಾಗೂ ಮಂಜುನಾಥ (32) ಮೃತರು. ನೆಲಮಂಗಲದಲ್ಲಿ ತರಕಾರಿ ತೆಗೆದುಕೊಂಡು ಬೆಳ್ಳೂರಿಗೆ ವಾಪಸ್ ಹೋಗುವಾಗ ಈ ಅಪಘಾತ ಸಂಭವಿಸಿದೆ.

ಇನ್ನೂ ಮೂವರು ಗಾಯಗೊಂಡಿದ್ದು, ಅವರನ್ನು ನೆಲಮಂಗಲ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂವರ ಮೃತದೇಹಗಳು ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು. ಅಪಘಾತದ ಭೀಕರತೆ ಕಂಡು ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಶವಗಳನ್ನು ನೆಲಮಂಗಲ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಕುದೂರು ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.