ವಿವಿಧ ವಿಶ್ವವಿದ್ಯಾಲಯಗಳ 1,000 ನಕಲಿ ಸರ್ಟಿಫಿಕೇಟ್, ಸೀಲ್ ಗಳ ವಶ- ಪ್ರತಾಪ್ ರೆಡ್ಡಿ
ಪಿಹೆಚ್ ಡಿ, ಸ್ನಾತಕೋತ್ತರ ಸೇರಿದಂತೆ ವಿವಿಧ ಪದವಿಗಳ ನಕಲಿ ಸರ್ಟಿಫಿಕೇಟ್ ತಯಾರಿಸುತ್ತಿದ್ದ ಜಾಲವೊಂದನ್ನು ಬೇಧಿಸುವಲ್ಲಿ ಬೆಂಗಳೂರು ನಗರ ಪೊಲೀಸರು ಯಶಸ್ವಿಯಾಗಿದ್ದಾರೆ.

ಬೆಂಗಳೂರು: ಪಿಹೆಚ್ ಡಿ, ಸ್ನಾತಕೋತ್ತರ ಸೇರಿದಂತೆ ವಿವಿಧ ಪದವಿಗಳ ನಕಲಿ ಸರ್ಟಿಫಿಕೇಟ್ ತಯಾರಿಸುತ್ತಿದ್ದ ಜಾಲವೊಂದನ್ನು ಬೇಧಿಸುವಲ್ಲಿ ಬೆಂಗಳೂರು ನಗರ ಪೊಲೀಸರು ಯಶಸ್ವಿಯಾಗಿದ್ದಾರೆ.
ವಿವಿಧ ವಿಶ್ವವಿದ್ಯಾಲಯಗಳು ಮತ್ತು ಪ್ರತಿಷ್ಠಿತ ಸಂಸ್ಥೆಗಳ ಹೆಸರಿನಲ್ಲಿ ಪಿಹೆಚ್ ಡಿ, ಸ್ನಾತಕೋತ್ತರ ಸೇರಿದಂತೆ ವಿವಿಧ ಪದವಿಗಳ ನಕಲಿ ಸರ್ಟಿಫಿಕೇಟ್ ತಯಾರಿಕೆ ಕುರಿತ ಸುದ್ದಿ ತಿಳಿದ ನಂತರ ಕಾರ್ಯಾಚರಣೆ ನಡೆಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ತಿಳಿಸಿದ್ದಾರೆ.
ದಾಳಿ ವೇಳೆಯಲ್ಲಿ ವಿವಿಧ ವಿಶ್ವವಿದ್ಯಾಲಯಕ್ಕೆ ಸೇರಿದ ಸುಮಾರು 1,000 ನಕಲಿ ಸರ್ಟಿಫಿಕೇಟ್ ಮತ್ತು ಸೀಲ್ ಗಳು ಪತ್ತೆಯಾಗಿದೆ. ಈ ಪ್ರಕರಣ ಸಂಬಂಧ ನಾಲ್ವರನ್ನು ಬಂಧಿಸಲಾಗಿದ್ದು, ವಿಚಾರಣೆ ನಡೆಯುತ್ತಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ನಕಲಿ ಸರ್ಟಿಫಿಕೇಟ್ ಜಾಲದಲ್ಲಿ ಮತ್ತಷ್ಟು ಮಂದಿ ತಲೆಮರೆಸಿಕೊಂಡಿದ್ದು, ಅವರ ಬಂಧನಕ್ಕಾಗಿ ಬಲೆ ಬೀಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


