ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ: ಕಾನೂನು ಹೋರಾಟದಲ್ಲಿ ಗೆಲ್ಲುವ ವಿಶ್ವಾಸ ನಮಗಿದೆ- ಸಿಎಂ ಬೊಮ್ಮಾಯಿ
ಗಡಿ ವಿವಾದವನ್ನು ಮಹಾರಾಷ್ಟ್ರ ರಾಜ್ಯ ಹುಟ್ಟುಹಾಕಿದ್ದು, ಈ ಸಂಬಂಧದ ಕಾನೂನು ಹೋರಾಟದಲ್ಲಿ ಗೆಲ್ಲುವ ವಿಶ್ವಾಸ ನಮಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಹೇಳಿದ್ದಾರೆ.

ಬೆಂಗಳೂರು: ಗಡಿ ವಿವಾದವನ್ನು ಮಹಾರಾಷ್ಟ್ರ ರಾಜ್ಯ ಹುಟ್ಟುಹಾಕಿದ್ದು, ಈ ಸಂಬಂಧದ ಕಾನೂನು ಹೋರಾಟದಲ್ಲಿ ಗೆಲ್ಲುವ ವಿಶ್ವಾಸ ನಮಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಹೇಳಿದ್ದಾರೆ.
ಡಾ.ಬಿ.ಆರ್. ಅಂಬೇಡ್ಕರ್ ಮಹಾಪರಿನಿರ್ವಾಣ ದಿನದ ಅಂಗವಾಗಿ ವಿಧಾನಸೌಧದ ಮುಂಭಾಗದಲ್ಲಿರುವ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಅಂಬೇಡ್ಕರ್ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತಾಡಿದ ಅವರು, ನಮ್ಮ ಗಡಿ ಮತ್ತು ಜನರನ್ನು ರಕ್ಷಿಸಲು ನಾವು ಬದ್ಧರಾಗಿದ್ದೇವೆ. ಅಷ್ಟೇ ಅಲ್ಲ ಮಹಾರಾಷ್ಟ್ರ, ಕೇರಳ, ತೆಲಂಗಾಣದಲ್ಲಿರುವ ಕನ್ನಡಿಗರ ರಕ್ಷಣೆಗೂ ಬದ್ಧರಾಗಿದ್ದೇವೆಂದು ಹೇಳಿದ್ದಾರೆ.
ಸರ್ಕಾರದ ಈ ನಿಲುವಿಗೂ ಚುನಾವಣೆಗೂ ಯಾವುದೇ ಸಂಬಂಧವಿಲ್ಲ, ಇದು ಮಹಾರಾಷ್ಟ್ರದ ದೀರ್ಘಾವಧಿಯ ವಿಷಯವಾಗಿದೆ. ಮಹಾರಾಷ್ಟ್ರದಿಂದಾಗಿ ಈ ವಿವಾದ ಸೃಷ್ಟಿಯಾಗಿದೆ. ಎರಡೂ ರಾಜ್ಯಗಳ ಜನರಲ್ಲಿ ಸಮನ್ವಯತೆ ಇದೆ, ಇದೀಗ ಗಡಿ ವಿವಾದ ಸುಪ್ರೀಂಕೋರ್ಟ್ ನಲ್ಲಿದ್ದು, ಈ ಕಾನೂನು ಹೋರಾಟದಲ್ಲಿ ಗೆಲ್ಲುವ ವಿಶ್ವಾನ ನನಗಿದೆ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


