ರಾಜ್ಯ

ಬೆಂಗಳೂರಿನಲ್ಲಿ ನಾವಿನ್ಯತಾ ಅನುಭವ ವಸ್ತು ಸಂಗ್ರಹಾಲಯ ಸ್ಥಾಪನೆ: ಸಿಎಂ ಬೊಮ್ಮಾಯಿ

ಕರ್ನಾಟಕದಲ್ಲಿ ಅಭಿವೃದ್ಧಿ ಹಾಗೂ ನಾವಿನ್ಯತೆಯ ಪಯಣ, ಇದಕ್ಕೆ ಕಾರಣವಾಗಿರುವ ಸಾಧಕರು, ಇವರ ಸಾಧನೆಗಳನ್ನು ಬಿಂಬಿಸುವ (ಇನ್ನೋವೇಷನ್ ಎಕ್ಸ್ಪೀರಿಯನ್ಸ್ ಮ್ಯೂಸಿಯಂ) ನಾವಿನ್ಯತಾ ಅನುಭವ ವಸ್ತು ಸಂಗ್ರಹಾಲಯವನ್ನು ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ನಾವಿನ್ಯತಾ ಅನುಭವ ವಸ್ತು ಸಂಗ್ರಹಾಲಯ ಸ್ಥಾಪನೆ: ಸಿಎಂ ಬೊಮ್ಮಾಯಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
Published On :

ಬೆಂಗಳೂರು: ಕರ್ನಾಟಕದಲ್ಲಿ ಅಭಿವೃದ್ಧಿ ಹಾಗೂ ನಾವಿನ್ಯತೆಯ ಪಯಣ, ಇದಕ್ಕೆ ಕಾರಣವಾಗಿರುವ ಸಾಧಕರು, ಇವರ ಸಾಧನೆಗಳನ್ನು ಬಿಂಬಿಸುವ (ಇನ್ನೋವೇಷನ್ ಎಕ್ಸ್ಪೀರಿಯನ್ಸ್ ಮ್ಯೂಸಿಯಂ) ನಾವಿನ್ಯತಾ ಅನುಭವ ವಸ್ತು ಸಂಗ್ರಹಾಲಯವನ್ನು ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. 

ಬೆಂಗಳೂರು ವಿನ್ಯಾಸಕಾರರ ಸಮುದಾಯದ ವತಿಯಿಂದ ಆಯೋಜಿಸಿದ್ದ ಬಿ.ಎಲ್.ಆರ್ ಡಿಸೈನ್ ವೀಕ್ ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಅವರು,  ಎಲ್ಲ ನಾವಿನ್ಯತೆ, ಅವಿಷ್ಕಾರಗಳ ಬಗ್ಗೆ ಮಾಹಿತಿ ನೀಡುವ ಅಂತರರಾಷ್ಟ್ರೀಯ ಮಟ್ಟದ ಮ್ಯೂಸಿಯಂ ಇದಾಗಲಿದ್ದು, ಹಸಿರಿನ ಪರಿಸರವನ್ನೂ ಒಳಗೊಂಡಿರಲಿದೆ. ಇದರಿಂದ ವಿದೇಶಿ ಪ್ರವಾಸೋದ್ಯಮವನ್ನು ಪ್ರೋತ್ಸಾಹ ದೊರೆಯುತ್ತದೆ. ಈ ಮ್ಯೂಸಿಯಂ ನಿಂದ ಯುವ ಆವಿಷ್ಕಾರಿಗಳು, ವಿನ್ಯಾಸಕಾರರಿಗೆ ಸ್ಪೂರ್ತಿ ದೊರೆಯಲಿದೆ ಎಂದರು. 

ಬೆಂಗಳೂರಿನ 8 ದಿಕ್ಕುಗಳಲ್ಲಿ 8 ನಗರ ಕೇಂದ್ರಗಳ ನಿರ್ಮಾಣಕ್ಕೆ ರೂಪುರೇಷೆ ಸಿದ್ಧಪಡಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗಿದೆ .ಇದಕ್ಕೆ ಪೂರಕವಾಗಿ ರಸ್ತೆ, ರೈಲುಗಳನ್ನು ಅಭಿವೃದ್ಧಿಗೊಳಿಸಬಹುದು. ಈ ಯೋಜನೆಗೆ ಬೇಕಾದ ಸಲಹೆಗಳನ್ನು ವಿನ್ಯಾಸಕಾರರಿಂದ ಬಯಸುವುದಾಗಿ ಮುಖ್ಯಮಂತ್ರಿ ತಿಳಿಸಿದರು.

ಬೆಂಗಳೂರು ಜನರ ನೆಚ್ಚಿನ ನಗರವಾಗಿದ್ದು, ಈ ನಗರದಲ್ಲಿ ಅವಿಷ್ಕಾರ ಸೇರಿದಂತೆ ವಿವಿಧ ರಂಗಗಳಲ್ಲಿ ಪ್ರತಿಭಾವಂತರಿದ್ದಾರೆ. ಜೆನೋಟಿಕ್ಸ್ ನಿಂದ ಏರೋಸ್ಪೇಸ್ ವರೆಗೆ 400 ಸಂಶೋಧನಾ ಕೇಂದ್ರಗಳಿವೆ. ರಾಜ್ಯದಲ್ಲಿ 400 ಫಾರ್ಚೂನ್ ಕಂಪನಿಗಳಿವೆ. ವಿದೇಶಿ ಬಂಡವಾಳ ಹೂಡಿಕೆಯಲ್ಲಿ ಕರ್ನಾಟಕ ಮುಂಚೂಣಿಯಲ್ಲಿದೆ. ಬೆಂಗಳೂರಿನಲ್ಲಿ ಅಭಿವೃದ್ಧಿಗೆ ಬಹಳ ಅವಕಾಶಗಳಿವೆ. ಬೆಂಗಳೂರಿನ ಅಭಿವೃದ್ಧಿಗೆ ಕೊಡುಗೆ ನೀಡುವಂತಹ ಸಕಾರಾತ್ಮಕತೆ ಎಲ್ಲರಲ್ಲೂ ಇರಬೇಕು. ಇದಕ್ಕೆ ಸರ್ಕಾರ ಎಲ್ಲ ರೀತಿಯ ಸಹಕಾರವನ್ನು ನೀಡುತ್ತದೆ ಎಂದರು.

ವಿನ್ಯಾಸಕಾರರು ತಾವು ರಚಿಸಿದ ವಿನ್ಯಾಸಗಳ ಬಗ್ಗೆ ಪ್ರಪಂಚಕ್ಕೆ ತಿಳಿಸಬೇಕು. ಬೆಂಗಳೂರು ನಗರವನ್ನು ಉತ್ತಮ ವಿನ್ಯಾಸಹೊಂದಿರುವ, ಜನಸ್ನೇಹಿಯಾಗಿರುವ ನಗರವನ್ನಾಗಿಸೋಣ. ಇಲ್ಲಿನ ಆವಿಷ್ಕಾರಗಳನ್ನು ಹಾಗೂ ವಿನ್ಯಾಸಗಳನ್ನು ಹೊರದೇಶದವರು ಸ್ಪೂರ್ತಿಯಾಗಿಸಿಕೊಳ್ಳುವಂತೆ  ಕೆಲಸ ಮಾಡಬೇಕು. ಇದನ್ನು ಸರ್ಕಾರ ಎಲ್ಲ ರೀತಿಯಲ್ಲಿ ಪ್ರೋತ್ಸಾಹವನ್ನು ನೀಡುತ್ತದೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.