ಮತದಾರರ ಮಾಹಿತಿ ಕಳವು ಪ್ರಕರಣ: ವಿಶೇಷ ಅಧಿಕಾರಿಯಿಂದ ಸರ್ವಪಕ್ಷ ಸಭೆ, ಪರಿಷ್ಕೃತ ಮತದಾರರ ಪಟ್ಟಿಗೆ ಆಕ್ಷೇಪಣೆಗಳ ಆಹ್ವಾನ
ಮತದಾರರ ಮಾಹಿತಿ ಕಳವು ಪ್ರಕರಣವನ್ನು ಕೂಲಂಕುಷವಾಗಿ ಪರಿಶೀಲಿಸಲು ನಿಯೋಜನೆಗೊಂಡಿರುವ ವಿಶೇಷಾಧಿಕಾರಿ ಅಜಯ್ ನಾಗಭೂಷಣ್ ಅವರು, ಬುಧವಾರ ಸರ್ವಪಕ್ಷ ಸಭೆ ನಡೆಸಿದ್ದು, ಈ ವೇಳೆ ಪರಿಷ್ಕೃತ ಮತದಾರರ ಪಟ್ಟಿಗೆ ಆಕ್ಷೇಪಣೆ ಆಹ್ವಾನ ನೀಡಿದ್ದಾರೆ.

ಬೆಂಗಳೂರು: ಮತದಾರರ ಮಾಹಿತಿ ಕಳವು ಪ್ರಕರಣವನ್ನು ಕೂಲಂಕುಷವಾಗಿ ಪರಿಶೀಲಿಸಲು ನಿಯೋಜನೆಗೊಂಡಿರುವ ವಿಶೇಷಾಧಿಕಾರಿ ಅಜಯ್ ನಾಗಭೂಷಣ್ ಅವರು, ಬುಧವಾರ ಸರ್ವಪಕ್ಷ ಸಭೆ ನಡೆಸಿದ್ದು, ಈ ವೇಳೆ ಪರಿಷ್ಕೃತ ಮತದಾರರ ಪಟ್ಟಿಗೆ ಆಕ್ಷೇಪಣೆ ಆಹ್ವಾನ ನೀಡಿದ್ದಾರೆ.
ಸಭೆಯಲ್ಲಿ ಪಾಲ್ಗೊಂಡಿದ್ದ ಕಾಂಗ್ರೆಸ್ ಮುಖಂಡ ನಲ್ಲೂರಹಳ್ಳಿ ನಾಗೇಶ್ ಅವರು, ಬೂತ್ ನಂ. 283, 284, 285 ಮತ್ತು 286 ಮತ್ತು ಪ್ರತಿ ಬೂತ್‌ನಿಂದ ಅಳಿಸಲಾದ ಸುಮಾರು 30 ಹೆಸರುಗಳು ಇನ್ನೂ ಪ್ರಸ್ತುತವಾಗಿವೆ ಎಂದು ಹೇಳಿದರು.
ಮತದಾರರ ಜಾಗೃತಿ ಕಾರ್ಯಕ್ರಮಕ್ಕಾಗಿ ಬಿಜೆಪಿ ನಾಯಕರು ಹಾಗೂ ಬಿಬಿಎಂಪಿ ಅಧಿಕಾರಿಗಳು ಚಿಲುಮೆ ಸಂಸ್ಥೆಗೆ ಜವಾಬ್ದಾರಿ ನೀಡಿದ್ದು, ಬಿಜೆಪಿ ಹಾಗೂ ಬಿಬಿಎಂಪಿಯೇ ಈ ಅಕ್ರಮಗಳಿಗೆ ಕಾರಣವಾಗಿದೆ ಎಂದು ಆರೋಪಿಸಿದರು.
ಒಂದು ಬೂತ್‌ನಲ್ಲಿ ಇಷ್ಟು ಮಟ್ಟದಲ್ಲಿ ಹೆಸರುಗಳನ್ನು ಅಳಿಸಿರುವುದಾದರೆ, ಇಲ್ಲಿರುವ ಎಲ್ಲಾ ಬೂತ್‌ಗಳಿಂದ ಎಷ್ಟು ಹೆಸರುಗಳು ಕಾಣೆಯಾಗಿವೆ ಎಂಬುದನ್ನು ಊಹಿಸಿ. ಈ ಹಿಂದೆಯೂ ಈ ಬೆಳವಣಿಗೆಗಳಾಗಿದ್ದವು ಎಂದು ಹೇಳಿದ್ದಾರೆ.
ಅಲ್ಪಸಂಖ್ಯಾತ ಸಮುದಾಯದವರು, ಒಬಿಸಿಗಳು ಪ್ರಮುಖವಾಗಿ ಕಾಂಗ್ರೆಸ್ ಮತ್ತು ಬಿಜೆಪಿಯೇತರ ಪಕ್ಷಗಳ ಬೆಂಬಲಿಗರ ಹೆಸರುಗಳನ್ನು ಅಳಿಸಲಾಗಿದೆ ಎಂದು ಅವರು ಹೇಳಿದರು
ಅಮಾನತುಗೊಂಡಿರುವ ಕಂದಾಯ ಅಧಿಕಾರಿ ಚಂದ್ರಶೇಖರ್ ಒಬ್ಬರೇ ಅಲ್ಲ ಈ ಪ್ರಕರಣದಲ್ಲಿ ಭಾಗಿಯಾಗಿಲ್ಲ. ಇನ್ನೂ ಹಲವು ಹಿರಿಯ ಅಧಿಕಾರಿಗಳು ಮತ್ತು ಬಿಜೆಪಿ ಮುಖಂಡರು ಪ್ರಕರಣದಲ್ಲಿ ಭಾಗಿಯಾಗಿದ್ದಾರೆಂದು ಆರೋಪಿಸಿದರು.
ಸಭೆಯಲ್ಲಿ ಮಹದೇವಪುರ ಕ್ಷೇತ್ರದಲ್ಲಿ 479 ಮತಗಟ್ಟೆಗಳಿದ್ದು, ಬಹುತೇಕ ಎಲ್ಲ ಬೂತ್‌ಗಳಲ್ಲಿ ಹೆಸರು ಅಳಿಸಿ ಹಾಕಲಾಗಿದೆ ಎಂದು ಕಾಂಗ್ರೆಸ್, ಜೆಡಿಎಸ್ ಮತ್ತು ಇತರ ರಾಜಕೀಯ ಪಕ್ಷಗಳ ಮುಖಂಡರು ಒಕ್ಕೊರಲಿನಿಂದ ಹೇಳಿದರು.
ಈ ವೇಳೆ ಮಾತನಾಡಿದ ಅಧಿಕಾರಿಗಳು, ಎಲ್ಲಾ ಬೂತ್ ಗಳಲ್ಲಿಯೂ ಪಟ್ಟಿಯನ್ನು ಮರಪರಿಶೀಲಿಸಿ 8 ದಿನಗಳಲ್ಲಿ ವರದಿ ನೀಡುವುದಾಗಿ ಭರವಸೆ ನೀಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


