ಪತ್ನಿಯನ್ನ ಗೆಳೆಯರೊಂದಿಗೆ ಮಲಗಿಸಿ ವಿಡಿಯೋ ಚಿತ್ರಿಕರಿಸಿ ವಿಕೃತಿ: ಬೆಂಗಳೂರಿನಲ್ಲೊಬ್ಬ ಸೈಕೋಪಾಥ್ ಪತಿ!
ಸಿಲಿಕಾನ್ ಸಿಟಿಯಲ್ಲಿ ಸೈಕೋಪಾತ್ ಮಾದಕವ್ಯಸನಿ ಪತಿಮಹಾಶಯನೊಬ್ಬ ತನ್ನ ಪತ್ನಿಯನ್ನ ಗೆಳೆಯರೊಂದಿಗೆ ಮಲಗಿಸಿ ವೀಡಿಯೋ ಚಿತ್ರೀಕರಿಸಿ ವಿಕೃತಿ ಮೆರೆದ ಪ್ರಕರಣ ಬೆಳಕಿಗೆ ಬಂದಿದೆ.

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಸೈಕೋಪಾತ್ ಮಾದಕವ್ಯಸನಿ ಪತಿಮಹಾಶಯನೊಬ್ಬ ತನ್ನ ಪತ್ನಿಯನ್ನ ಗೆಳೆಯರೊಂದಿಗೆ ಮಲಗಿಸಿ ವೀಡಿಯೋ ಚಿತ್ರೀಕರಿಸಿ ವಿಕೃತಿ ಮೆರೆದ ಪ್ರಕರಣ ಬೆಳಕಿಗೆ ಬಂದಿದೆ.
ಸೈಕೋ ಪತಿಯನ್ನು ಸಂಪಿಗೆಹಳ್ಳಿ ನಿವಾಸಿ ಜಾನ್ ಪಾಲ್ ಎಂದು ಗುರುತಿಸಲಾಗಿದೆ. ಈತನನ್ನು ಮಹಿಳಾ ಟೆಕ್ಕಿಯೊಬ್ಬರು 2011ರ ಏಪ್ರಿಲ್‍ನಲ್ಲಿ ವಿವಾಹವಾಗಿದ್ದಾರೆ. 2015 ರಿಂದ ತನ್ನ ವಿಕೃತಿ ಶುರು ಮಾಡಿದ್ದ ಆರೋಪಿ ಪತಿ ಜಾನ್‍ಪಾಲ್, ಮನೆಗೆ ತನ್ನ ಗೆಳೆಯರನ್ನ ಕರೆದು ಪಾರ್ಟಿ ಮಾಡಿ ನಂತರ ಗೆಳೆಯರೊಂದಿಗೆ ಬೆಡ್ ಶೇರ್ ಮಾಡು ಎಂದು ಒತ್ತಾಯಿಸುತ್ತಿದ್ದ. ಪತಿಯ ಹಲ್ಲೆಯಿಂದ ತಾಳಲಾರದೇ ಆತನ ಗೆಳೆಯರೊಂದಿಗೆ ಮಹಿಳಾ ಟೆಕ್ಕಿ ದೈಹಿಕ ಸಂಪರ್ಕಕ್ಕೆ ಒಪ್ಪಿಗೆ ಸೂಚಿಸುತ್ತಿದ್ದರು.
ಪತಿಯ ಹೇಯ ನಡೆಗೆ ಪತ್ನಿ ವಿರೋಧ ವ್ಯಕ್ತಪಡಿಸಿದ್ದಾಳೆ. ಈ ವೇಳೆ ಪತಿ ಜಾನ್ ಪಾಲ್ ಪತ್ನಿ ಮೇಲೆ ಹಲ್ಲೆ ನಡೆಸಿ ಬಲವಂತ ಮಾಡಿದ್ದಾನೆ. ಪತಿಯ ಏಟನ್ನು ತಾಳಲಾಗದೆ ಮನೆಗೆ ಬರುತ್ತಿದ್ದ ಗೆಳೆಯರೊಂದಿಗೆ ದೈಹಿಕ ಸಂಪರ್ಕ ನಡೆಸಲು ಪತ್ನಿ ಒಪ್ಪಿದ್ದಾಳೆ. ಅದರಂತೆ ಪಾರ್ಟಿಗಾಗಿ ಮನೆಗೆ ಬಂದಿದ್ದ ಸ್ನೇಹಿತರಾದ ಸಜೀಶ್ ಹಾಗೂ ನಾಜಿ ಎಂಬುವವರ ಜೊತೆ ಜಾನ್ ಪಾಲ್ ತನ್ನ ಪತ್ನಿಯನ್ನು ಮಲಗಿಸಿದ್ದಾನೆ.
ತನ್ನ ಸ್ವಂತ ಪತ್ನಿಯನ್ನ ಗೆಳೆಯರೊಂದಿಗೆ ಮಲಗಿಸಿದ ಜಾನ್ ಪಾಲ್ ದೈಹಿಕ ಸಂಪರ್ಕದ ಪೊಟೋ ಹಾಗೂ ವಿಡಿಯೋ ಚಿತ್ರೀಕರಣ ಮಾಡಿದ್ದಾನೆ. ಇಷ್ಟಕ್ಕೂ ಸುಮ್ಮನಾಗದ ಪಾಪಿಷ್ಟ ಮತ್ತೊಂದು ಕೆಟ್ಟ ಹೆಜ್ಜೆ ಮುಂದಿಟ್ಟು ಪತ್ನಿಯ ತಂಗಿಯನ್ನು ತನ್ನೊಡನೆ ಮಲಗುವಂತೆ ಕಿರುಕುಳ ನೀಡಲು ಆರಂಭಿಸಿದ್ದಾನೆ. ಗಂಡನ ಲೈಂಗಿಕ ಕಿರುಕುಳಕ್ಕೆ ಬೇಸತ್ತು ಪತ್ನಿ ಪತಿಗೆ ವಿಚ್ಚೇಧನ ನೀಡಲು ಮುಂದಾಗಿದ್ದಾರೆ. ಈ ವೇಳೆ ಪತ್ನಿ ತನ್ನ ಗೆಳೆಯರೊಂದಿಗಿನ ಅಶ್ಲೀಲ ಪೊಟೋ ಮತ್ತು ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡುವುದಾಗಿ ಬೆದರಿಕೆ ಹಾಕಲು ಆರಂಭಿಸಿದ್ದಾನೆ.
ಗಂಡನ ಕಾಟ, ಕಿರುಕುಳ ತಾಳಲಾಗದೆ ಗಟ್ಟಿ ಮನಸ್ಸು ಮಾಡಿ ಪತಿಯ ವಿರುದ್ಧ ಪತ್ನಿ ಠಾಣೆ ಮೆಟ್ಟಿಲೇರಿ ಪತಿಯ ಹೇಯ ಕೃತ್ಯದ ಬಗ್ಗೆ ದೂರು ನೀಡಿದ್ದಾರೆ. ಅಲ್ಲದೆ ಆತನೊಬ್ಬ ಗಾಂಜಾ ವ್ಯಸನಿಯಾಗಿದ್ದು, ಮನೆಯಲ್ಲಿಯೇ ಗಾಂಜಾ ಸಸಿಗಳನ್ನ ಪಾಟ್ಗಳಲ್ಲಿ ಬೆಳೆದಿದ್ದಾನೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ. ದೂರಿನ ಅನ್ವಯ ಸಂಪಿಗೆಹಳ್ಳಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ದೂರಿನನ್ವಯ ಲೈಂಗಿಕ ಕಿರುಕುಳ, ಎನ್.ಡಿ.ಪಿ.ಎಸ್ ಹಾಗೂ ಐಟಿ ಆಕ್ಟ್ ಅಡಿ ಕೇಸ್ ದಾಖಲು ಮಾಡಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


