ಮೂಡಬಿದರಿಯಲ್ಲಿ ಭಾರತದ ಮೊದಲ ಅಂತಾರಾಷ್ಟ್ರೀಯ ಸ್ಕೌಟ್ಸ್, ಗೈಡ್ಸ್ ಜಾಂಬೂರಿಗೆ ಸಕಲ ಸಿದ್ಧತೆ
ಭಾರತದ ಮೊದಲ ಅಂತಾರಾಷ್ಟ್ರೀಯ ಸ್ಕೌಟ್ಸ್ ಹಾಗೂ ಗೈಡ್ಸ್ ಜಾಂಬೂರಿಗೆ ಮೂಡಬಿದರಿಯಲ್ಲಿ ಸಿದ್ಧತೆಗಳು ಭರದಿಂದ ಸಾಗಿದೆ.

ಮಂಗಳೂರು: ಭಾರತದ ಮೊದಲ ಅಂತಾರಾಷ್ಟ್ರೀಯ ಸ್ಕೌಟ್ಸ್ ಹಾಗೂ ಗೈಡ್ಸ್ ಜಾಂಬೂರಿಗೆ ಮೂಡಬಿದರಿಯಲ್ಲಿ ಸಿದ್ಧತೆಗಳು ಭರದಿಂದ ಸಾಗಿದೆ.
ಡಿ.21 ರಿಂದ 27 ವರೆಗೂ ಆಳ್ವಾಸ್ ಶಿಕ್ಷಣ ಫೌಂಡೇಷನ್ (ಎಇಎಫ್) ಕ್ಯಾಂಪಸ್ ನಲ್ಲಿ ಜಾಂಬೂರಿ ನಡೆಯಲಿದ್ದು, 50,000 ಸ್ಕೌಟ್ಸ್ ಹಾಗೂ ಗೈಡ್ ಗಳು ಸೇರಿದಂತೆ ಒಟ್ಟು 63,000 ಮಂದಿ ಭಾಗವಹಿಸಲಿದ್ದಾರೆ. 10 ದೇಶಗಳಿಂದ 10,000 ಮಂದಿ ತರಬೇತಿ ನೀಡುವವರು ಹಾಗೂ 3,000 ಮಂದಿ ಸ್ವಯಂ ಸೇವಕರು ಕಾರ್ಯಕ್ರಮದಲ್ಲಿ ಭಾಗಿಯಾಗುವ ನಿರೀಕ್ಷೆ ಇದೆ. ಇದೇ ಮೊದಲ ಬಾರಿಗೆ ಭಾರತದಲ್ಲಿ ಇಂಥಹದ್ದೊಂದು ಕಾರ್ಯಕ್ರಮ ನಡೆಯುತ್ತಿದೆ.
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಈ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, 100 ಎಕರೆಯ ವ್ಯಾಪ್ತಿಯಲ್ಲಿರುವ ಆಳ್ವಾಸ್ ಕ್ಯಾಂಪಸ್ ನಲ್ಲಿ ಈ ಕಾರ್ಯಕ್ರಮ ನಡೆಯುತ್ತಿದ್ದು, ವಿದ್ಯಾರ್ಥಿಗಳಿಗೆ ಪಶ್ಚಿಮ ಘಟ್ಟ ಹಾಗೂ ಇತರ ಅಂಶಗಳನ್ನು ತಿಳಿಸುವುದಕ್ಕೆ ಜಂಗಲ್ ಟ್ರಯಲ್ ಗಾಗಿ ಅರಣ್ಯ ಪ್ರದೇಶವನ್ನು ಸಿದ್ಧಗೊಳಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


