ತುಮಕೂರು: ಚಿರತೆ ದಾಳಿ, ಇಬ್ಬರು ಅಪ್ರಾಪ್ತ ಬಾಲಕರಿಗೆ ಗಾಯ
ತುಮಕೂರು ಜಿಲ್ಲೆಯಲ್ಲೂ ಚಿರತೆ ಉಪಟಳ ಹೆಚ್ಚಾಗಿದ್ದು, ಜನರು ಭೀತಿಗೊಂಡಿದ್ದಾರೆ. ಇಂದು ಮುಂಜಾನೆ ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ಇರಕಸಂದ್ರ ಕಾಲೋನಿಯಲ್ಲಿ ಇಬ್ಬರು ಬಾಲಕರ ಮೇಲೆ ಚಿರತೆ ದಾಳಿ ಮಾಡಿದೆ.

ತುಮಕೂರು: ತುಮಕೂರು ಜಿಲ್ಲೆಯಲ್ಲೂ ಚಿರತೆ ಉಪಟಳ ಹೆಚ್ಚಾಗಿದ್ದು, ಜನರು ಭೀತಿಗೊಂಡಿದ್ದಾರೆ. ಇಂದು ಮುಂಜಾನೆ ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ಇರಕಸಂದ್ರ ಕಾಲೋನಿಯಲ್ಲಿ ಇಬ್ಬರು ಬಾಲಕರ ಮೇಲೆ ಚಿರತೆ ದಾಳಿ ಮಾಡಿದೆ.
ಬೆಳಗ್ಗೆ ಹಸುವಿನ ಹಾಲು ಕರೆಯಲೆಂದು ಕೊಟ್ಟಿಗೆಗೆ ಹೋದ ಸಂದರ್ಭದಲ್ಲಿ ಚಿರತೆ ದಾಳಿ ಮಾಡಿದೆ. ಕೂಡಲೇ ಬಾಲಕರನ್ನು ತುಮಕೂರಿನ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಒದಗಿಸಲಾಗಿದೆ.
ಕೆಲ ತಿಂಗಳ ಹಿಂದೆ ಇದೇ ತಾಲೂಕಿನ ವಜ್ಜನಕುರಿಕೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೋರಗಾನಹಳ್ಳಿ ಗ್ರಾಮದಲ್ಲಿ ಚಿರತೆ ದಾಳಿಯಿಂದ ಕರುವೊಂದು ಸಾವನ್ನಪ್ಪಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


