ರಾಜ್ಯ

ಹೃದಯಾಘಾತದಿಂದ ರಾಜ್ಯಪಾಲ ಗೆಹ್ಲೋಟ್ ಕಾರು ಚಾಲಕ ಸಾವು: ಸ್ವಲ್ಪದರಲ್ಲೇ ತಪ್ಪಿದ ಅನಾಹುತ

ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ಕಾರು ಚಾಲಕ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶನಿವಾರ ತಡರಾತ್ರಿ ನಡೆದಿದೆ.

ಹೃದಯಾಘಾತದಿಂದ ರಾಜ್ಯಪಾಲ ಗೆಹ್ಲೋಟ್ ಕಾರು ಚಾಲಕ ಸಾವು: ಸ್ವಲ್ಪದರಲ್ಲೇ ತಪ್ಪಿದ ಅನಾಹುತ
ಸಂಗ್ರಹ ಚಿತ್ರ
Published On :

ಬೆಂಗಳೂರು: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ಕಾರು ಚಾಲಕ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶನಿವಾರ ತಡರಾತ್ರಿ ನಡೆದಿದೆ.

ನಡೆದಿದೆ. ರವಿಕುಮಾರ್ ಎಸ್. ಕಾಳೆ ಮೃತಪಟ್ಟ ದುರ್ದೈವಿ. ಮಧ್ಯ ರಾತ್ರಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ರಾಜ್ಯಪಾಲರನ್ನು ಕರೆದೊಯ್ಯಲು ಚಾಲಕ ರವಿಕುಮಾರ್ ಬಂದಿದ್ದರು.

ರಾಜ್ಯಪಾಲರನ್ನು ಕಾರಿನಲ್ಲಿ ಕರೆದೊಯ್ಯಲು ಸಿದ್ದತೆ ಮಾಡಿಕೊಳ್ಳುವ ವೇಳೆ ರವಿಕುಮಾರ್ ಅವರಿಗೆ ಎದೆ ನೋವು ಕಾಣಿಸಿಕೊಂಡಿದೆ. ಈ ವೇಳೆ ಹೃದಯಾಘಾತವೂ ಆಗಿದೆ. ಕೂಡಲೇ ಅವರನ್ನು ಆ್ಯಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ಕರೆದೊಯ್ಯುವ ಪ್ರಯತ್ನಗಳು ನಡೆಸಲಾಗಿತ್ತು. ಆದರೆ, ಅಷ್ಟರಲ್ಲಾಗಲೇ ಕೊನೆಯುಸಿರೆಳೆದಿದ್ದಾರೆ.

ಘಟನೆಯ ಬಳಿಕ ರಾಜ್ಯಪಾಲರು ಹೆಚ್ಚುವರಿ ವಾಹನ ಬಳಸಿಕೊಂಡು ರಾಜ್ಯಭವನಕ್ಕೆ ತೆರಳಿದರು. ರಾಜ್ಯಪಾಲರು ನಿಗದಿತ ಸಮಯಕ್ಕಿಂತ ಬೇಗ ಆಗಮಿಸಿದ್ದರೆ, ರವಿಕುಮಾರ್ ಅವರೇ ಕಾರು ಏರಿದ್ದರೆ ದೊಡ್ಡ ಅನಾಹುತವಾಗುತ್ತಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.