ದತ್ತಪೀಠದಿಂದ ಹಿಂದೂ ಅರ್ಚಕರನ್ನು ವಾಪಸ್ ಕಳುಹಿಸಿ: ಗೌಸ್ ಮೊಹಿಯುದ್ದೀನ್ ಆಗ್ರಹ
ಮೂರು ದಿನಗಳ ದತ್ತ ಜಯಂತಿ ಆಚರಣೆಯಲ್ಲಿ ತಾತ್ಕಾಲಿಕವಾಗಿ ನೇಮಕಗೊಂಡಿರುವ ಇಬ್ಬರು ಹಿಂದೂ ಅರ್ಚಕರನ್ನು ವಾಪಸ್ ಕಳುಹಿಸಬೇಕು ಎಂದು ರಾಜ್ಯ ಕೋಮು ಸೌಹಾರ್ದ ವೇದಿಕೆ ಕಾರ್ಯದರ್ಶಿ ಗೌಸ್ ಮೊಹಿಯುದ್ದೀನ್ ಅವರು ಭಾನುವಾರ ಒತ್ತಾಯಿಸಿದ್ದಾರೆ.

ಚಿಕ್ಕಮಗಳೂರು: ಮೂರು ದಿನಗಳ ದತ್ತ ಜಯಂತಿ ಆಚರಣೆಯಲ್ಲಿ ತಾತ್ಕಾಲಿಕವಾಗಿ ನೇಮಕಗೊಂಡಿರುವ ಇಬ್ಬರು ಹಿಂದೂ ಅರ್ಚಕರನ್ನು ವಾಪಸ್ ಕಳುಹಿಸಬೇಕು ಎಂದು ರಾಜ್ಯ ಕೋಮು ಸೌಹಾರ್ದ ವೇದಿಕೆ ಕಾರ್ಯದರ್ಶಿ ಗೌಸ್ ಮೊಹಿಯುದ್ದೀನ್ ಅವರು ಭಾನುವಾರ ಒತ್ತಾಯಿಸಿದ್ದಾರೆ.
ಪಬ್ಲಿಕ್ ಪ್ರಾಸಿಕ್ಯೂಟರ್‌ಗಳು ಲಿಖಿತವಾಗಿ ಮನವಿ ಮಾಡಿದ ನಂತರವೇ ಅವರ ನಿಯೋಜನೆಯನ್ನು ಸ್ವೀಕರಿಸಲಾಗಿತ್ತು. ಆದರೆ, ದತ್ತ ಜಯಂತಿ ಬಳಿಕವೂ ಹಿಂದು ಅರ್ಚಕರು ಪೂಜೆಗಳನ್ನು ಮುಂದುವರೆಸುತ್ತಿದ್ದಾರೆ. ಅವರನ್ನು ಚಿಕ್ಕಮಗಳೂರು ಜಿಲ್ಲಾಡಳಿತ ವಾಪಸ್ ಕಳುಹಿಸಬೇಕೆಂದು ಆಗ್ರಹಿಸಿದ್ದಾರೆ.
ಇದನ್ನೂ ಓದಿ: ದತ್ತ ಜಯಂತಿ: ಇಬ್ಬರು ಹಿಂದೂ ಅರ್ಚಕರ ನೇಮಿಸಿದ ಸರ್ಕಾರ
ಮುಸ್ಲಿಂ ಮೌಲ್ವಿಗಳನ್ನು ಪಕ್ಕಕ್ಕೆ ಸರಿಸಲಾಗಿತ್ತು, ಇದು ಮುಜಾವವರಿಗೆ ಮಾಡಿದ ಅವಮಾನವಾಗಿದೆ. ಇಂತಹ ಬೆಳವಣಿಗೆಗಳು ದರ್ಗಾ ಆಸ್ತಿಯನ್ನು ಕಬಳಿಸುವ ಯತ್ನವಾಗಲಿದೆ ಎಂದು ಹೇಳಿದ್ದಾರೆ.
ದತ್ತಪೀಠದಲ್ಲ ಪೂಜೆಗಳು ನಡೆಯುತ್ತಿದ್ದ ವೇಳೆ ಜಿಲ್ಲೆಯಿಂದ ಗಡಿಪಾರು ಮಾಡಿದ ಕುಖ್ಯಾತ ರೌಡಿಗಳೂ ಕಾಣಿಸಿಕೊಂಡಿದ್ದಾರೆ. ಈ ವಿಡಿಯೋ ವೈರಲ್ ಆಗಿದೆ. ಆದರೆ, ಇದನ್ನು ಪ್ರಶ್ನಿಸಿದರೂ ಜಿಲ್ಲಾಡಳಿತದ ಅಧಿಕಾರಿಗಳು ನಿರ್ಲಕ್ಷ್ಯ ತೋರುತ್ತಿದ್ದಾರೆಂದು ತಿಳಿಸಿದರು.
ದತ್ತ ಪೀಠದ ವ್ಯವಸ್ಥಾಪನಾ ಸಮಿತಿಯಲ್ಲಿ 'ಎಂಟು ಸದಸ್ಯರ ಪೈಕಿ ಏಳು ಮಂದಿ ಒಂದೇ ಸಮುದಾಯಕ್ಕೆ ಸೇರಿದವರಾಗಿದ್ದರೆ, ಒಬ್ಬ ಮುಸ್ಲಿಂ ವ್ಯಕ್ತಿಯಿದ್ದಾರೆ, ಆತನೂ ಬಿಜೆಪಿಯ ಖ್ಯಾತ ಕಾರ್ಯಕರ್ತ ಎಂದಿದ್ದಾರೆ. ಆದರೆ ಸಮಿತಿ ಪಾರದರ್ಶಕವಾಗಿದೆ ಎಂದು ಜಿಲ್ಲಾಡಳಿತ ಸಮರ್ಥನೆ ನೀಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


