ಮಂಡ್ಯ: ಇನೋವಾ- ಸ್ವಿಫ್ಟ್ ಮುಖಾಮುಖಿ ಡಿಕ್ಕಿ; ಐದು ಮಂದಿ ದಾರುಣ ಸಾವು, ಹಲವರಿಗೆ ಗಾಯ
ಸ್ವಿಫ್ಟ್ ಹಾಗೂ ಇನೋವಾ ಕಾರು ನಡುವೆ ಭೀಕರ ಅಪಘಾತ ಸಂಭವಿಸಿ ಸ್ಥಳದಲ್ಲಿ ಐದು ಮಂದಿ ಸಾವನ್ನಪ್ಪಿರುವ ಘಟನೆ ನಾಗಮಂಗಲ ತಾಲ್ಲೂಕಿನ ಬೆಂಗಳೂರು-ಮಂಗಳೂರು ಹೆದ್ದಾರಿಯ ಎ.ನಾಗತಿಹಳ್ಳಿ ಗ್ರಾಮದ ಬಳಿ ಸಂಭವಿಸಿದೆ.

ಮಂಡ್ಯ: ಸ್ವಿಫ್ಟ್ ಹಾಗೂ ಇನೋವಾ ಕಾರು ನಡುವೆ ಭೀಕರ ಅಪಘಾತ ಸಂಭವಿಸಿ ಸ್ಥಳದಲ್ಲಿ ಐದು ಮಂದಿ ಸಾವನ್ನಪ್ಪಿರುವ ಘಟನೆ ನಾಗಮಂಗಲ ತಾಲ್ಲೂಕಿನ ಬೆಂಗಳೂರು-ಮಂಗಳೂರು ಹೆದ್ದಾರಿಯ ಎ.ನಾಗತಿಹಳ್ಳಿ ಗ್ರಾಮದ ಬಳಿ ಸಂಭವಿಸಿದೆ.
ಇನ್ನೊವಾ ಹಾಗೂ ಸ್ವಿಫ್ಟ್ ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಬೆಂಗಳೂರಿನಿಂದ ಮಂಗಳೂರು ಕಡೆಗೆ ಚಲಿಸುತ್ತಿದ್ದ ತಮಿಳುನಾಡು ಮೂಲದ ಇನ್ನೊವಾ ಕಾರು ರಸ್ತೆ ವಿಭಜಕ್ಕೆ ಡಿಕ್ಕಿಯಾಗಿ ಎದುರಿನಿಂದ ಬರುತ್ತಿದ್ದ ಸ್ವಿಫ್ಟ್ ಕಾರ್ ಮೇಲೆ ಬಿದ್ದಿದೆ. ಸ್ವಿಫ್ಟ್ ಕಾರ್‌ನಲ್ಲಿದ್ದ ಹಾಸನ ಮೂಲದ ಮೂವರು ಹಾಗೂ ಇನ್ನೊವಾ ಕಾರ್‌ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಎರಡು ಕಾರಿನಲ್ಲಿದ್ದ ಪೈಕಿ ನಾಲ್ಕು ಪುರುಷರು ಹಾಗು ಓರ್ವ ಮಹಿಳೆ ಸಾವನ್ನಪ್ಪಿದ್ದು, ಎರಡು ಕಾರಿನಲ್ಲಿದ್ದ ಹಲವರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಬೆಳ್ಳೂರಿನ ಬಿಜಿಎಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಮೃತರ ಹಾಗೂ ಗಾಯಾಳುಗಳ ವಿವರ ತಿಳಿದು ಬಂದಿಲ್ಲ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಮೃತರ ಮಾಹಿತಿ ಕಲೆ ಹಾಕುತ್ತಿದ್ದು, ಬಿಂಡಗನವಿಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


