ನಾಳೆ ಮಂಡ್ಯದಲ್ಲಿ ಬೃಹತ್ ಉದ್ಯೋಗ ಮೇಳ; 5,000ಕ್ಕೂ ಅಧಿಕ ಉದ್ಯೋಗಾವಕಾಶ: ಸಚಿವ ಡಾ. ನಾರಾಯಣಗೌಡ
ಕೌಶಲ್ಯಾಭಿವೃದ್ಧಿ, ಉದ್ಯಮ ಶೀಲತೆ ಹಾಗೂ ಜೀವನೋಪಾಯ ಇಲಾಖೆ ಹಾಗೂ ಜಿಲ್ಲಾಡಳಿತ ಸಹಯೋಗದಲ್ಲಿ ಮಂಡ್ಯದಲ್ಲಿ ನಾಳೆ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.

ಮಂಡ್ಯ: ಕೌಶಲ್ಯಾಭಿವೃದ್ಧಿ, ಉದ್ಯಮ ಶೀಲತೆ ಹಾಗೂ ಜೀವನೋಪಾಯ ಇಲಾಖೆ ಹಾಗೂ ಜಿಲ್ಲಾಡಳಿತ ಸಹಯೋಗದಲ್ಲಿ ಮಂಡ್ಯದಲ್ಲಿ ನಾಳೆ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.
ಪಿ.ಇ.ಎಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಬೆಳಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆಯವರೆಗೂ ಉದ್ಯೋಗ ಮೇಳ ನಡೆಯಲಿದ್ದು, ಎಸ್ ಎಸ್ ಎಲ್ ಸಿ, ಪಿಯುಸಿ, ಐಟಿಐ, ಡಿಪ್ಲೋಮಾ, ಬಿಇ ಮತ್ತಿತರ ಯಾವುದೇ ಪದವಿ ಪೂರೈಸಿರುವ ಅಭ್ಯರ್ಥಿಗಳು ಇದರಲ್ಲಿ ಭಾಗವಹಿಸಬಹುದು.
ಆಸಕ್ತ ಅಭ್ಯರ್ಥಿಗಳು ಶೈಕ್ಷಣಿಕ ದಾಖಲೆಗಳ ಜೆರಾಕ್ಸ್ ಪ್ರತಿ, ಪಾಸ್ ಪೋರ್ಟ್ ಅಳತೆ ಫೋಟೋ, ಆಧಾರ್ ಕಾರ್ಡ್ ಹಾಗೂ ಸ್ವವಿವರದ ಅರ್ಜಿಗಳೊಂದಿಗೆ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.
ಉದ್ಯೋಗ ಮೇಳದಲ್ಲಿ ಒಟ್ಟು 5,000ಕ್ಕೂ ಅಧಿಕ ಉದ್ಯೋಗಾವಕಾಶ ಲಭ್ಯವಿದ್ದು, ಅರ್ಹರು ಇದರ ಸದ್ಬಳಕೆ ಮಾಡಿಕೊಳ್ಳುವಂತೆ ಸಚಿವರಾದ ಡಾ. ನಾರಾಯಣಗೌಡ ಹಾಗೂ ಅಶ್ವತ್ಥ ನಾರಾಯಣ ಮನವಿ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


