ರಾಜ್ಯ

ಮಲೆ ಮಹದೇಶ್ವರ ಬೆಟ್ಟ ಅಭಿವೃದ್ಧಿ ಗೆ ಮಾಸ್ಟರ್ ಪ್ಲಾನ್: ಸಿಎಂ ಬೊಮ್ಮಾಯಿ

ಮಲೆ ಮಹದೇಶ್ವರದ ಅಭಿವೃದ್ಧಿಗೆ ಅಗತ್ಯವಿರುವ ವ್ಯವಸ್ಥೆಗಳನ್ನು ಒದಗಿಸಲು ಮಾಸ್ಟರ್ ಪ್ಲಾನ್ ರಚಿಸಲು ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಮಲೆ ಮಹದೇಶ್ವರ ಬೆಟ್ಟ ಅಭಿವೃದ್ಧಿ ಗೆ ಮಾಸ್ಟರ್ ಪ್ಲಾನ್: ಸಿಎಂ ಬೊಮ್ಮಾಯಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
Published On :

ಚಾಮರಾಜನಗರ: ಮಲೆ ಮಹದೇಶ್ವರದ ಅಭಿವೃದ್ಧಿಗೆ ಅಗತ್ಯವಿರುವ ವ್ಯವಸ್ಥೆಗಳನ್ನು ಒದಗಿಸಲು  ಮಾಸ್ಟರ್ ಪ್ಲಾನ್ ರಚಿಸಲು ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. 

ಅವರು ಇಂದು ಅವರ ಅಧ್ಯಕ್ಷತೆಯಲ್ಲಿ ನಡೆದ  ಮಲೆ ಮಹದೇಶ್ವರದಲ್ಲಿ  ಮಹದೇಶ್ವರ ಪ್ರಾಧಿಕಾರದ ಸಭೆಯ ನಂತರ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು. 

ಬೆಟ್ಟಕ್ಕೆ ಭಕ್ತಾದಿಗಳು ಹೆಚ್ಚಾಗುತ್ತಿದ್ದು,  ಪ್ರತಿದಿನ ಹತ್ತರಿಂದ ಇಪ್ಪತ್ತು ಸಾವಿರ ಜನ ಭೇಟಿ ನೀಡುತ್ತಾರೆ. ಅಮಾವಾಸ್ಯೆ, ಹುಣ್ಣಿಮೆಗಳಂದು , ವಾರಾಂತ್ಯಗಳಲ್ಲಿ  ಇನ್ನೂ ಹೆಚ್ಚಾಗುತ್ತದೆ. ಆರು ಜಾತ್ರೆಗಳು ನಡೆಯುತ್ತವೆ, ಆಗ ಲಕ್ಷಾಂತರ ಜನ ಸೇರುತ್ತಾರೆ.  ಇಲ್ಲಿ 159 ಎಕರೆ ಇದ್ದು, ಇನ್ನೂ 70 ಎಕರೆ  ಬಳಕೆಯಾಗಿಲ್ಲ. 80 ಎಕರೆಯಲ್ಲಿ ತಾತ್ಕಾಲಿಕವಾಗಿ ನಿರ್ಮಿಸಲಾಗಿರುವ ಶೆಡ್ ಗಳನ್ನು  ತೆಗೆದು ಏನು ಮಾಡಲು ಸಾಧ್ಯವಿದೆ ಎಂದು ಪರಿಶೀಲಿಸಲಾಗುತ್ತದೆ.  ಮೂಲ ದೇವಸ್ಥಾನದ  70 ಎಕರೆಗೆ ಮಾಸ್ಟರ್ ಪ್ಲಾನ್ ರಚಿಸಿ ಯೋಜನಾಬದ್ದವಾಗಿ ಅನುಷ್ಠಾನ ಗೊಳಿಸಬೇಕು. ಬಡಜನರು ಇಲ್ಲಿಗೆ ಹೆಚ್ಚು ಬರುವುದರಿಂದ ಡಾರ್ಮಿಟರಿಗಳನ್ನು  ನಿರ್ಮಿಸಬೇಕು. ಸುಮಾರು 5 ಸಾವಿರ ಜನ ಒಂದೇ ಬಾರಿಗೆ ಉಳಿದುಕೊಳ್ಳುವ ವ್ಯವಸ್ಥೆಯಾಗಬೇಕು ಎಂದು ಸೂಚಿಸಲಾಗಿದೆ ಎಂದರು. 

ಸಂಪರ್ಕ ರಸ್ತೆ ನಿರ್ಮಾಣಕ್ಕೆ 100 ಕೋಟಿ ರೂ.

ಮಲೆಮಹದೇಶ್ವರ ಕ್ಷೇತ್ರದಲ್ಲಿ ಹತ್ತು ಹಲವಾರು ಅಭಿವೃದ್ಧಿ ಕಾರ್ಯಕ್ರಮಗಳನ್ನು ಪ್ರಾರಂಭಿಸಿ ನಿಗದಿತ ಸಮಯದಲ್ಲಿ ಪೂರ್ಣಗೊಳಿಸಲು ಸೂಚಿಸಲಾಗಿದೆ. ಈ ಪ್ರದೇಶದಲ್ಲಿ ಒಳಚರಂಡಿ ವ್ಯವಸ್ಥೆ ಬಹಳ ಪ್ರಮುಖವಾಗಿದ್ದು, ಕಾಮಗಾರಿಯನ್ನು ಶೀಘ್ರವಾಗಿ ಪೂರ್ಣಗೊಳಿಸಬೇಕು. ಈ ಪ್ರದೇಶಕ್ಕೆ ಸಂಪರ್ಕ ರಸ್ತೆ ನಿರ್ಮಿಸಲು 100 ಕೋಟಿ ರೂ.ಗಳನ್ನು  ಮಲೆಮಹದೇಶ್ವರ ಬೆಟ್ಟ ಹಾಗೂ ಕ್ಷೇತ್ರದ ಎರಡೂ ಬದಿಗಳಿಗೆ ರಸ್ತೆ ನಿರ್ಮಾಣಕ್ಕೆ ಸಂಬಂಧಪಟ್ಟ ಇಲಾಖೆಗೆ  ಹಣವನ್ನು ನೀಡಲಾಗುವುದು. ಒಟ್ಟಾರೆ ಮಲೆಮಹದೇಶ್ವರ ಬೆಟ್ಟದ ಯೋಜನಾಬದ್ಧವಾದ ಅಭಿವೃದ್ಧಿ ಸರ್ಕಾರದ ಮುಂದಿರುವ ಗುರಿ. ಕ್ಷೇತ್ರದಲ್ಲಿ ಭಕ್ತಾದಿಗಳ ಎಲ್ಲ ರೀತಿಯ ಸೌಕರ್ಯಗಳನ್ನು ಒದಗಿಸುವ ವ್ಯವಸ್ಥೆ ಮಾಡಲಾಗುವುದು.  ಶ್ರೀಕ್ಷೇತ್ರದಲ್ಲಿ ದೇವರ ಸನ್ನಿಧಾನಕ್ಕೆ ಸಾಲುಗಟ್ಟಿ ನಿಲ್ಲುವ ಭಕ್ತರಿಗೆ ನೆರಳು ಹಾಗೂ ನೀರಿನ ವ್ಯವಸ್ಥೆ ಸೇರಿದಂತೆ ವಿವಿಧ ಸೌಕರ್ಯಗಳನ್ನು ಕಲ್ಪಿಸಲು ಅನುಮೋದನೆಯನ್ನು ನೀಡಲಾಗಿದೆ ಎಂದರು.

ಹುಲಿ ಯೋಜನೆ:

ಹುಲಿ ಯೋಜನೆಯ ಪ್ರಸ್ತಾಪ ವನ್ಯಜೀವಿ ಮಂಡಳಿಯ ಮುಂದಿದ್ದು, ಈ ಬಗ್ಗೆ ಯಾವುದೇ ತೀರ್ಮಾನವಾಗಿಲ್ಲ. ಈ ಯೋಜನೆಯ ಅನುಷ್ಠಾನದ ಸಂದರ್ಭದಲ್ಲಿ ಇಲ್ಲಿನ ಜನವಸತಿಗೆ ಯಾವುದೇ ರೀತಿ ತೊಂದರೆಯಾಗುವ ಬಗ್ಗೆ ಕೆಲವು ಸಂದೇಹಗಳು ವ್ಯಕ್ತವಾಗಿದ್ದು, ಈ ಬಗ್ಗೆ ಯಾವುದೇ ತೀರ್ಮಾನವಾಗಿಲ್ಲ ಎಂದು ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.