ಬೆಂಗಳೂರಿನಲ್ಲಿ ಹಿಟ್ ಅಂಡ್ ರನ್; ಅಪಘಾತದಲ್ಲಿ ಮೂವರು ವಲಸೆ ಕಾರ್ಮಿಕರು ಸಾವು
ಬೆಂಗಳೂರಿನ ಹೊರವಲಯದ ಮಾಯಸಂದ್ರದಲ್ಲಿ ವೇಗವಾಗಿ ಬಂದ ವಾಹನ ಡಿಕ್ಕಿಯಾಗಿ ಮೂವರು ವಲಸೆ ಕಾರ್ಮಿಕರು ಮೃತಪಟ್ಟಿರುವ ಘಟನೆ ಮಂಗಳವಾರ ವರದಿಯಾಗಿದೆ.

ಬೆಂಗಳೂರು: ಬೆಂಗಳೂರಿನ ಹೊರವಲಯದ ಮಾಯಸಂದ್ರದಲ್ಲಿ ವೇಗವಾಗಿ ಬಂದ ವಾಹನ ಡಿಕ್ಕಿಯಾಗಿ ಮೂವರು ವಲಸೆ ಕಾರ್ಮಿಕರು ಮೃತಪಟ್ಟಿರುವ ಘಟನೆ ಮಂಗಳವಾರ ವರದಿಯಾಗಿದೆ.
ಪೊಲೀಸರ ಪ್ರಕಾರ, ಅಸ್ಸಾಂನ ವಲಸೆ ಕಾರ್ಮಿಕರು ಸೋಮವಾರ ತಡರಾತ್ರಿ ಕೆಲಸ ಮುಗಿಸಿ ತಮ್ಮ ಮನೆಗೆ ವಾಪಸಾಗುತ್ತಿದ್ದಾಗ ಈ ಘಟನೆ ನಡೆದಿದೆ. ವಾಹನ ಡಿಕ್ಕಿಯಾದ ರಭಸಕ್ಕೆ ಎಲ್ಲ ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತರ ಗುರುತುಗಳು ಇನ್ನೂ ಪತ್ತೆಯಾಗಿಲ್ಲ. ಘಟನೆಯ ಬಗ್ಗೆ ಸ್ಥಳೀಯ ದಾರಿಹೋಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಅಪಘಾತದ ರಭಸಕ್ಕೆ ಮೃತದೇಹಗಳು ನಜ್ಜು ಗುಜ್ಜಾಗಿದ್ದು ರಸ್ತೆಯುದ್ದಕ್ಕೂ ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ.
ಅತ್ತಿಬೆಲೆ ಪೊಲೀಸರು ಸ್ಥಳಕ್ಕೆ ಧಾವಿಸಿ ಮೃತದೇಹಗಳನ್ನು ಅತ್ತಿಬೆಲೆ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ವಾಹನವು ಹಿಟ್ ಅಂಡ್ ರನ್ ಪ್ರಕರಣದಲ್ಲಿ ಭಾಗಿಯಾಗಿದೆ ಎಂದು ಸೂಚಿಸಲಾಗಿದೆ.
ಅಪರಾಧ ಮಾಡಿದ ನಂತರ ಚಾಲಕ ಹಾನಿಗೊಳಗಾದ ವಾಹನವನ್ನು ಬಿಟ್ಟು ಸ್ಥಳದಿಂದ ಪರಾರಿಯಾಗಿದ್ದಾನೆ. ಪೊಲೀಸರು ಚಾಲಕನಿಗಾಗಿ ಹುಡುಕಾಟ ನಡೆಸಿದ್ದಾರೆ. ಮೃತರ ಬಗ್ಗೆ ಸ್ಥಳೀಯರಿಂದ ಮಾಹಿತಿ ಸಂಗ್ರಹಿಸಲು ಆರಂಭಿಸಿದ್ದಾರೆ. ಮುಂದಿನ ತನಿಖೆ ನಡೆಯುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


