ಮುರುಡೇಶ್ವರ ದೇವಸ್ಥಾನದಲ್ಲಿ 'ವಸ್ತ್ರ ಸಂಹಿತೆ ನೀತಿ' ಜಾರಿ ಮಾಡಿ: ಹಿಂದೂ ಸಂಘಟನೆಗಳ ಆಗ್ರಹ
ಭಕ್ತರಿಗೆ ವಸ್ತ್ರ ಸಂಹಿತೆ ಜಾರಿ ಮಾಡುವಂತೆ ಹಿಂದೂ ಸಂಘಟನೆಗಳು ಮುರುಡೇಶ್ವರ ದೇವಸ್ಥಾನದ ಅಧಿಕಾರಿಗಳಿಗೆ ಮನವಿ ಮಾಡಿಕೊಂಡಿವೆ.

ಕಾರವಾರ: ಭಕ್ತರಿಗೆ ವಸ್ತ್ರ ಸಂಹಿತೆ ಜಾರಿ ಮಾಡುವಂತೆ ಹಿಂದೂ ಸಂಘಟನೆಗಳು ಮುರುಡೇಶ್ವರ ದೇವಸ್ಥಾನದ ಅಧಿಕಾರಿಗಳಿಗೆ ಮನವಿ ಮಾಡಿಕೊಂಡಿವೆ.
ಇತ್ತೀಚೆಗೆ ಗೋಕರ್ಣ ಮಹಾಬಲೇಶ್ವರ ದೇವಸ್ಥಾನ ನಂತರ ಶಿರಸಿ ಮಾರಿಕಾಂಬಾ ವಸ್ತ್ರ ಸಂಹಿತಿ ನೀತಿ ಜಾರಿಗೆ ಹಿಂದೂ ಸಂಘಟನೆಗಳು ಮನವಿ ಮಾಡಿದ್ದವು. ಇದೀಗ ಮುರುಡೇಶ್ವರ ದೇವಸ್ಥಾನದಲ್ಲಿ ಜಾರಿಗೆ ತರುವಂತೆ ಆಗ್ರಹಿಸುತ್ತಿವೆ.
ಹಿಂದೂ ಜನ ಜಾಗೃತಿ ಸಮಿತಿ (ಎಚ್‌ಜೆಜೆಎಸ್) ಆಶ್ರಯದಲ್ಲಿ ವಿವಿಧ ಹಿಂದೂ ಸಂಘಟನೆಗಳು ಗೋಕರ್ಣ ದೇವಸ್ಥಾನದಂತೆಯೇ ಇಲ್ಲಿಯೂ ವಸ್ತ್ರ ಸಂಹಿತೆ ನೀಡಿ ಜಾರಿ ಮಾಡುವಂತೆ ಮುರುಡೇಶ್ವರ ಅಧಿಕಾರಿಗಳನ್ನು ಸಂಪರ್ಕಿಸಿವೆ ಎಂದು ತಿಳಿದುಬಂದಿದೆ.
ಐತಿಹಾಸಿಕವಾಗಿ ಪ್ರಸಿದ್ಧಿ ಪಡೆದ ಮುರುಡೇಶ್ವರ ದೇವಸ್ಥಾನದ ಪಾವಿತ್ರತೆಯನ್ನು ಕಾಪಾಡುವ ದೃಷ್ಟಿಯಿಂದ ಸಂಪ್ರದಾಯಿಕ ಉಡುಪು ಕಡ್ಡಾಯ ಮಾಡಬೇಕು. ಪಾಶ್ಚಾತ್ಯ ಉಡುಪು ಧರಿಸಿ ದೇವಸ್ಥಾನಕ್ಕೆ ಬರುವವರಿಗೆ ಒಳ ಪ್ರವೇಶ ನೀಡಬಾರದು. ಭಾರತೀಯ ಸಂಪ್ರದಾಯಿಕ ಉಡುಪು ಧರಿಸಿ ಬರುವವರಿಗೆ ಮಾತ್ರ ದೇವಸ್ಥಾನ ಪ್ರವೇಶಕ್ಕೆ ಅವಕಾಶ ಕೊಡಬೇಕು ಎಂದು ಹಿಂದೂ ಜನಜಾಗೃತಿ ಸಮಿತಿಯಿಂದ ಮನವಿ ಸಲ್ಲಿಸಿದೆ ಎಂದು ತಿಳಿದುಬಂದಿದೆ.
ದೇವಸ್ಥಾನದ ಟ್ರಸ್ಟಿಗಳನ್ನು ಭೇಟಿ ಮಾಡಿ ವಸ್ತ್ರ ಸಂಹಿತೆ ನೀತಿಯನ್ನು ಜಾರಿಗೆ ತರಲು ಮನವಿ ಮಾಡಿದ್ದೇವೆ" ಎಂದು ಹಿಂದೂ ಜನ ಜಾಗೃತಿ ಸಮಿತಿಯ ಜಿಲ್ಲಾ ಸಂಚಾಲಕ ಶರತ್ ಕುಮಾರ್ ನಾಯಕ್ ಅವರು ಹೇಳಿದ್ದಾರೆ.
ಉತ್ತರ ಕನ್ನಡ ಪ್ರವಾಸಿ ತಾಣವಾಗಿರುವುದರಿಂದ ಇಲ್ಲಿಗೆ ಸಾವಿರಾರು ಜನರು ಆಗಮಿಸುತ್ತಾರೆ. ಆದರೆ, ಸಾಕಷ್ಟು ಜನರು ಸಂಪ್ರದಾಯದಂತೆ ಸೂಕ್ತವಾಗಿ ವಸ್ತ್ರಗಳನ್ನು ಧರಿಸದೆ ದೇವಸ್ಥಾನಗಳಿಗೆ ಭೇಟಿ ನೀಡುತ್ತಾರೆ. ಕೆಲವು ಪ್ರವಾಸಿಗರು ತಮ್ಮ ಪಾದರಕ್ಷೆಗಳನ್ನು ತಮ್ಮ ಚೀಲಗಳಲ್ಲಿ ಹಾಕಿಕೊಂಡು ದೇವಸ್ಥಾನಕ್ಕೆ ಭೇಟಿ ನೀಡುತ್ತಾರೆ. ಇದು ಸರಿಯಲ್ಲ ಎಂದು ಹಿಂದೂ ಜಾಗೃತಿ ಸಮಿತಿಯ ಮತ್ತೊಬ್ಬ ಸದಸ್ಯ ಶ್ರೀಕಾಂತ್ ನಾಯಕ್ ತಿಳಿಸಿದ್ದಾರೆ.
ಹಿಂದೂ ಜನಜಾಗೃತಿ ಸಮಿತಿ ಈಗಾಗಲೇ ಶಿರಸಿ ಮಾರಿಕಾಂಬಾ ದೇವಸ್ಥಾನ ಮತ್ತು ಬನವಾಸಿಯ ಮಧುಕೇಶ್ವರ ದೇವಸ್ಥಾನವನ್ನು ಸಂಪರ್ಕಿಸಿ ವಸ್ತ್ರ ಸಂಹಿತೆ ನತಿ ಜಾರಿಗೊಳಿಸುವಂತೆ ಒತ್ತಾಯಿಸಿದೆ. ಈ ಸಂಬಂಧ ಮಾರಿಕಾಂಬಾ ದೇವಸ್ಥಾನ ಮತ್ತು ಬನವಾಸಿ ದೇವಸ್ಥಾನ ಟ್ರಸ್ಟ್ ಸದಸ್ಯರು ಈಗಾಗಲೇ ಸಭೆ ನಡೆಸಿದ್ದಾರೆ ಎಂದು ನಾಯಕ್ ಮಾಹಿತಿ ನೀಡಿದ್ದಾರೆ.
ಗುಣವಂತೇಶ್ವರ, ಧಾರೇಶ್ವರ ಮತ್ತು ಶೆಜ್ಜೇಶ್ವರ ಮುಂತಾದ ದೇವಸ್ಥಾನಗಳ ಟ್ರಸ್ಟ್‌ಗಳಿಗೆ ಡ್ರೆಸ್ ಕೋಡ್ ಜಾರಿಗೊಳಿಸಲು ಹಿಂದೂ ಜನಜಾಗೃತಿ ಸಮಿತಿ ಮನವಿ ಮಾಡುತ್ತಿದೆ. "ದೇವಸ್ಥಾನವು ವಸ್ತ್ರಸಂಹಿತೆಯನ್ನು ಜಾರಿಗೆ ತರಲು ನಿರ್ಧರಿಸಿದ ಬಳಿಕ ಈ ಕುರಿತು ಬೋರ್ಡ್ ಗಳನ್ನು ಹಾಕಬೇಕೆಂದು ತಿಳಿಸಿದ್ದಾರೆ.
ಭಕ್ತಾದಿಗಳಿಗೆ ವಸ್ತ್ರ ಸಂಹಿತೆಯನ್ನು ನೀತಿಯನ್ನು ಜಾರಿಗೆ ತರಬಹುದು. ಆದರೆ, ಸಂಪೂರ್ಣವಾಗಿ ಶೇ.100 ವಸ್ತ್ರ ಸಂಹಿತೆ ನೀತಿಯನ್ನು ಜಾರಿಗೆ ತರಲು ಸಾಧ್ಯವಿಲ್ಲ ಎಂದು ಇಡುಗುಂಜಿ ಗಣಪತಿ ದೇವಸ್ಥಾನದ ಮುಖ್ಯ ಅರ್ಚಕ ವಿಷ್ಣು ಭಟ್ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


