ದಕ್ಷಿಣ ಕನ್ನಡ: ಹಿಂದೂ- ಮುಸ್ಲಿಂ ಪ್ರೇಮ ಪತ್ರ ವಿವಾದ; ವಿಟ್ಲ ಖಾಸಗಿ ಕಾಲೇಜಿನ 18 ವಿದ್ಯಾರ್ಥಿಗಳ ಅಮಾನತು!
ಕಾಲೇಜಿನಲ್ಲಿ ದ್ವಿತೀಯ ಪಿ.ಯು ವ್ಯಾಸಂಗ ಮಾಡುತ್ತಿರುವ ಮುಸ್ಲಿಂ ವಿದ್ಯಾರ್ಥಿ ಮತ್ತು ಹಿಂದೂ ವಿದ್ಯಾರ್ಥಿನಿ ನಡುವಿನ ಪ್ರೇಮ ಪತ್ರ ಪ್ರಕರಣವು ವಿವಾದದ ಸ್ವರೂಪ ಪಡೆದಿದೆ

ಮಂಗಳೂರು: ಖಾಸಗಿ ಪದವಿಪೂರ್ವ ಕಾಲೇಜಿನ ಹಿಂದೂ ಸಮುದಾಯದ ವಿದ್ಯಾರ್ಥಿನಿ ಹಾಗೂ ಮುಸ್ಲಿಂ ಸಮುದಾಯದ ವಿದ್ಯಾರ್ಥಿ ನಡುವಿನ ಪ್ರೇಮ ಪ್ರಕರಣದ ವಿಚಾರದಲ್ಲಿ ವಿವಾದ ಉಂಟಾಗಿ ಒಟ್ಟು 18 ವಿದ್ಯಾರ್ಥಿಗಳನ್ನು ವಾರ್ಷಿಕ ಪರೀಕ್ಷೆವರೆಗೆ ಕಾಲೇಜು ಪ್ರಾಂಶುಪಾಲರು ಅಮಾನತು ಮಾಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲದ ವಿಠಲ್ ಪದವಿಪೂರ್ವ ಕಾಲೇಜಿನಲ್ಲಿ ನಡೆದಿದೆ.
‘ಕಾಲೇಜಿನಲ್ಲಿ ದ್ವಿತೀಯ ಪಿ.ಯು ವ್ಯಾಸಂಗ ಮಾಡುತ್ತಿರುವ ಮುಸ್ಲಿಂ ವಿದ್ಯಾರ್ಥಿ ಮತ್ತು ಹಿಂದೂ ವಿದ್ಯಾರ್ಥಿನಿ ನಡುವಿನ ಪ್ರೇಮ ಪತ್ರ ಪ್ರಕರಣವು ವಿವಾದದ ಸ್ವರೂಪ ಪಡೆದಿದೆ. ಹೀಗಾಗಿ ಪೋಷಕರ ಸಮ್ಮುಖದಲ್ಲಿ ಆಡಳಿತ ಮಂಡಳಿ ಮತ್ತು ಉಪನ್ಯಾಸಕರು ಮಾತುಕತೆ ನಡೆಸಿ ಮುನ್ನೆಚ್ಚರಿಕೆ ಕ್ರಮವಾಗಿ ಈ ನಿರ್ಧಾರ ಕೈಗೊಂಡಿದ್ದಾರೆ’ ಎಂದು ಕಾಲೇಜಿನ ಮೂಲಗಳು ತಿಳಿಸಿವೆ.
ಅಮಾನತುಗೊಂಡ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಮಾತ್ರ ಕಾಲೇಜಿಗೆ ಬರಬಹುದು ಎಂದು ಸೂಚನೆ ನೀಡಲಾಗಿದೆ.
‘ಪ್ರೀತಿಸುತ್ತಿದ್ದ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯ ಪೋಷಕರನ್ನು ಕಾಲೇಜಿನ ಆಡಳಿತ ಮಂಡಳಿಯು ಈ ಮೊದಲೇ ಕಾಲೇಜಿಗೆ ಕರೆಯಿಸಿ, ಅವರಿಬ್ಬರ ಪ್ರೇಮದ ವಿಚಾರವನ್ನು ಗಮನಕ್ಕೆ ತಂದಿತ್ತು. ಆ ಬಳಿಕ ಯಾವುದೇ ಗೊಂದಲವಿಲ್ಲದೆ ತರಗತಿ ನಡೆಯುತ್ತಿತ್ತು.
ಇದನ್ನೂ ಓದಿ: ಮಂಗಳೂರಿನ ಇಂಜಿನಿಯರಿಂಗ್ ಕಾಲೇಜಿನಲ್ಲಿ ಬುರ್ಖಾ ಧರಿಸಿ ಬಾಲಿವುಡ್ ಹಾಡಿಗೆ ನೃತ್ಯ: ವಿದ್ಯಾರ್ಥಿಗಳು ಅಮಾನತು
ಆದರೆ, ಈಚೆಗೆ ವಾರ್ಷಿಕೋತ್ಸವದ ಸಂದರ್ಭದಲ್ಲಿ ಪ್ರೇಮ ಪ್ರಕರಣವು ಮತ್ತೆ ವಿವಾದ ಪಡೆದುಕೊಂಡಿದೆ. ತರಗತಿಯಲ್ಲಿ ವಿದ್ಯಾರ್ಥಿಗಳು ಮೊಬೈಲ್ ಬಳಸುತ್ತಿದ್ದುದ್ದನ್ನು ಉಪನ್ಯಾಸಕರು ಪರಿಶೀಲಿಸಲು ಮುಂದಾದಾಗ, ವಿದ್ಯಾರ್ಥಿನಿಯ ಕೈಯಲ್ಲಿ ಪ್ರೇಮಪತ್ರ ಪತ್ತೆಯಾಗಿದೆ.
ಆದರೆ, ಅದನ್ನು ನೀಡಿದ ವಿದ್ಯಾರ್ಥಿ ಅಂದು ಕಾಲೇಜಿಗೆ ಬಂದಿರಲಿಲ್ಲ. ಯುವತಿಯ ಪೋಷಕರಿಗೆ ಈ ವಿಷಯ ತಿಳಿಸಿದ ಕಾಲೇಜು ಆಡಳಿತ ಮಂಡಳಿ, ಪರೀಕ್ಷೆಗೆ ಬರೆಯಲು ಮಾತ್ರ ವಿದ್ಯಾರ್ಥಿನಿಯನ್ನು ಕಾಲೇಜಿಗೆ ಕಳುಹಿಸುವಂತೆ ಸೂಚನೆ ನೀಡಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


