ಜಿಲ್ಲಾ ಹಾಗೂ ತಾಲೂಕು ಪಂಚಾಯ್ತಿ ಚುನಾವಣೆ: ಹೈಕೋರ್ಟ್ ನಿಂದ ರಾಜ್ಯ ಸರ್ಕಾರಕ್ಕೆ 5 ಲಕ್ಷ ದಂಡ
ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿ ಚುನಾವಣೆ ನಡೆಸಲು ವಿಳಂಬ ಧೋರಣೆ ಅನುಸರಿಸುತ್ತಿರುವ ರಾಜ್ಯ ಸರ್ಕಾರ ಹಾಗೂ ಕರ್ನಾಟಕದ ಪಂಚಾಯತ್ ರಾಜ್ ಡೀಲಿಮಿಟೇಷನ್ ಆಯೋಗದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿರುವ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ 5 ಲಕ್ಷ ರೂಪಾಯಿ ದಂಡ ವಿಧಿಸಿದೆ.

ಬೆಂಗಳೂರು: ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿ ಚುನಾವಣೆ ನಡೆಸಲು ವಿಳಂಬ ಧೋರಣೆ ಅನುಸರಿಸುತ್ತಿರುವ ರಾಜ್ಯ ಸರ್ಕಾರ ಹಾಗೂ ಕರ್ನಾಟಕದ ಪಂಚಾಯತ್ ರಾಜ್ ಡೀಲಿಮಿಟೇಷನ್ ಆಯೋಗದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿರುವ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ 5 ಲಕ್ಷ ರೂಪಾಯಿ ದಂಡ ವಿಧಿಸಿದೆ.
ಮೀಸಲಾತಿ ಹಾಗೂ ಡೀಲಿಮಿಟೇಷನ್ ನ ಸಂಪೂರ್ಣ ಪ್ರಕ್ರಿಯೆಯನ್ನು ಮುಕ್ತಾಯಗೊಳಿಸಲು ಫೆ.1, 2023 ರ ವೇಳೆಗೆ ಪೂರ್ಣಗೊಳಿಸುವಂತೆ ಹೈಕೋರ್ಟ್ ಸರ್ಕಾರಕ್ಕೆ ಗಡುವು ವಿಧಿಸಿದೆ.
ನ್ಯಾ. ಪ್ರಸನ್ನ ಬಿ ವರಾಳೆ, ನ್ಯಾ. ಅಶೋಕ್ ಎಸ್ ಕಿಣಗಿ ಅವರಿದ್ದ ವಿಭಾಗೀಯ ಪೀಠ, ಈ ಆದೇಶ ಪ್ರಕಟಿಸಿದ್ದು, ರಾಜ್ಯ ಚುನಾವಣಾ ಆಯೋಗ (ಎಸ್ಇಸಿ) ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಗೆ ಡೀಲಿಮಿಟೇಷನ್ ಆಯೋಗ ಸಲ್ಲಿಸಿದ್ದ ಇಂಪ್ಲೀಡಿಂಗ್ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ, ಚುನಾವಣೆ ಹಾಗೂ ಇತರ ಪ್ರಕ್ರಿಯೆಗಳನ್ನು ಪೂರ್ಣಗೊಳಿಸುವುದಕ್ಕೆ ಎರಡು ಬಾರಿ 12 ವಾರಗಳ ಸಮಯ ನೀಡಲಾಗಿತ್ತು. 12 ವಾರಗಳಲ್ಲಿ ಒಂದು ಇಂಚಿನ ಬೆಳವಣಿಗೆಯೂ ಆಗಿಲ್ಲ ಎಂದು ಕೋರ್ಟ್ ಗಮನಿಸಿದೆ.
ಡೀಲಿಮಿಟೇಷನ್ ಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ನಿಧಾನಗತಿಯಲ್ಲಿ ಕಾರ್ಯನಿರ್ವಹಿಸುತ್ತಿದೆ. ಆಯೋಗ 90 ದಿನಗಳ ವಿಸ್ತರಣೆಗೆ ಮನವಿ ಮಾಡಿತ್ತು, ಆದರೆ ಸರ್ಕಾರದ ಅಧಿಕಾರಿಗಳು ಆಮೆಗತಿಯಲ್ಲಿ ಸಾಗುತ್ತಿದ್ದಾರೆ ಎಂದು ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


