ರಾಜ್ಯ

ಆರೋಪಿಗಳ ಬಗ್ಗೆ ಮಾಹಿತಿ ನೀಡುವವರಿಗೆ 5 ಲಕ್ಷ ರೂಪಾಯಿ ಬಹುಮಾನ: ಗೃಹ ಇಲಾಖೆ

ಗಂಭೀರ ಸ್ವರೂಪದ ಅಪರಾಧ ಪ್ರಕರಣಗಳಲ್ಲಿ ತಲೆಮರೆಸಿಕೊಂಡ ಆರೋಪಿಗಳ ಮಾಹಿತಿ ನೀಡುವವರಿಗೆ ನೀಡಲಾಗುತ್ತಿದ್ದ ಬಹುಮಾನದ ಮೊತ್ತವನ್ನು 20 ಸಾವಿರದಿಂದ 5 ಲಕ್ಷ ರೂಪಾಯಿಗೆ ಹೆಚ್ಚಿಸಿ ಗೃಹ ಇಲಾಖೆ ಗುರುವಾರ ಆದೇಶ ಹೊರಡಿಸಿದೆ.

ಆರೋಪಿಗಳ ಬಗ್ಗೆ ಮಾಹಿತಿ ನೀಡುವವರಿಗೆ 5 ಲಕ್ಷ ರೂಪಾಯಿ ಬಹುಮಾನ: ಗೃಹ ಇಲಾಖೆ
ಸಾಂದರ್ಭಿಕ ಚಿತ್ರ
Published On :

ಬೆಂಗಳೂರು: ಗಂಭೀರ ಸ್ವರೂಪದ ಅಪರಾಧ ಪ್ರಕರಣಗಳಲ್ಲಿ ತಲೆಮರೆಸಿಕೊಂಡ ಆರೋಪಿಗಳ ಮಾಹಿತಿ ನೀಡುವವರಿಗೆ ನೀಡಲಾಗುತ್ತಿದ್ದ ಬಹುಮಾನದ ಮೊತ್ತವನ್ನು 20 ಸಾವಿರದಿಂದ 5 ಲಕ್ಷ ರೂಪಾಯಿಗೆ ಹೆಚ್ಚಿಸಿ ಗೃಹ ಇಲಾಖೆ ಗುರುವಾರ ಆದೇಶ ಹೊರಡಿಸಿದೆ.

ರಾಷ್ಟ್ರೀಯ ಸುರಕ್ಷತೆ, ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟುಮಾಡುವ, ಮಾದಕ ವಸ್ತು ಹಾಗೂ ಆಯುಧ ಕಳ್ಳಸಾಗಣೆ, ಮಕ್ಕಳು ಮತ್ತು ಮಹಿಳೆಯರ ಮೇಲಿನ ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ಘೋಷಿತ ಅಪರಾಧಿಗಳ ಬಗ್ಗೆ  ಮಾಹಿತಿ ನೀಡಿ ಪೊಲೀಸರಿಗೆ ನೆರವಾಗುವವರಿಗೆ 20,000 ನಗದು ಬಹುಮಾನ ನೀಡಲು ಅವಕಾಶವಿತ್ತು. ಇದೀಗ ಅದನ್ನು 5 ಲಕ್ಷ ರೂಪಾಯಿಗೆ ಹೆಚ್ಚಿಸಲಾಗಿದೆ.

ಈ ಸಂಬಂಧ ರಾಜ್ಯ ಪೊಲೀಸ್‌ ಮಹಾನಿರ್ದೇಶಕರು ಸಲ್ಲಿಸಿದ್ದ ಪ್ರಸ್ತಾವನೆಗೆ ಆರ್ಥಿಕ ಇಲಾಖೆ ಅನುಮೋದನೆ ನೀಡಿದೆ.

ಪೊಲೀಸ್ ಮಾಹಿತಿದಾರರಿಗೆ 20,000ದವರೆಗೆ ಮಾತ್ರ ಬಹುಮಾನ ನೀಡಲು ಅವಕಾಶ ಇರುವುದರಿಂದ ಹೆಚ್ಚಿನ ಜನ ಪೊಲೀಸ್‌ ಇಲಾಖೆಯ ಮನವಿಗೆ ಸ್ಪಂದಿಸುವುದಿಲ್ಲ. ಅದನ್ನು 5 ಲಕ್ಷದವರೆಗೂ ಬಹುಮಾನ ನೀಡಲು ಅವಕಾಶ ಕಲ್ಪಿಸಬೇಕು. ಆಗ ತ್ವರಿತವಾಗಿ ಆರೋಪಿಗಳನ್ನು ಬಂಧಿಸಲು ಸಹಕಾರಿಯಾಗುತ್ತದೆ’ ಎಂದು ರಾಜ್ಯ ಪೊಲೀಸ್‌ ಮಹಾನಿರ್ದೇಶಕರು 2021ರ ಡಿಸೆಂಬರ್‌ನಲ್ಲಿ ಗೃಹ ಇಲಾಖೆಗೆ ಪ್ರಸ್ತಾವ ಸಲ್ಲಿಸಿದ್ದರು. ಗೃಹ ಇಲಾಖೆಯು ಈ ಪ್ರಸ್ತಾವವನ್ನು ಆರ್ಥಿಕ ಇಲಾಖೆಗೆ ಕಳುಹಿಸಿತ್ತು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.