ರಾಜ್ಯ

ಕೊಡಗು: ದಸರಾ ಆನೆ ಬಲರಾಮನಿಗೆ ಗುಂಡೇಟು, ಜಮೀನು ಮಾಲೀಕನ ಬಂಧನ

ದಸರಾ ಆನೆ ಬಲರಾಮನನ್ನು ಕಾಡಾನೆ ಎಂದು ತಪ್ಪು ತಿಳಿದು ಗುಂಡು ಹಾರಿಸಿದ್ದ ಖಾಸಗಿ ಜಮೀನಿನ ಮಾಲೀಕನನ್ನು ಕರ್ನಾಟರ ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.

ಕೊಡಗು: ದಸರಾ ಆನೆ ಬಲರಾಮನಿಗೆ ಗುಂಡೇಟು, ಜಮೀನು ಮಾಲೀಕನ ಬಂಧನ
ಬಲರಾಮ ಆನೆಗೆ ಗುಂಡು ಹಾರಿಸಿದ್ದ ಆರೋಪಿ ಬಂಧನ
Published On :

ಕೊಡಗು: ದಸರಾ ಆನೆ ಬಲರಾಮನನ್ನು ಕಾಡಾನೆ ಎಂದು ತಪ್ಪು ತಿಳಿದು ಗುಂಡು ಹಾರಿಸಿದ್ದ ಖಾಸಗಿ ಜಮೀನಿನ ಮಾಲೀಕನನ್ನು ಕರ್ನಾಟರ ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.

ಮೈಸೂರು ದಸರಾದಲ್ಲಿ 14 ಬಾರಿ ಚಿನ್ನದ ಅಂಬಾರಿ ಹೊತ್ತಿದ್ದ ಹೆಗ್ಗಳಿಕೆಯ ‘ಬಲರಾಮ’ ಆನೆಗೆ ಗುರುವಾರ ರಾತ್ರಿ ಜಮೀನಿನ ಮಾಲಕ ಸುರೇಶ್ ಎಂಬಾತ ಗುಂಡು ಹಾರಿಸಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ಶುಕ್ರವಾರ ಆತನನ್ನು ವಶಕ್ಕೆ ಪಡೆದಿದ್ದಾರೆ.

ಪಿರಿಯಾಪಟ್ಟಣ ತಾಲ್ಲೂಕಿನ ಭೀಮನಕಟ್ಟೆ ಸಾಕಾನೆ ಶಿಬಿರಕ್ಕೆ ಸಮೀಪವಿರುವ ಜಮೀನಿಗೆ ಬಲರಾಮ ಹೋಗಿದ್ದು, ಸಿಟ್ಟಿಗೆದ್ದ ಮಾಲೀಕ ಸುರೇಶ್ ಗುಂಡು ಹಾರಿಸಿದ್ದ. ಆನೆಯ ತೊಡೆ ಬಳಿ ಗುಂಡು ಹೊಕ್ಕಿತ್ತು. ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಪಶುವೈದ್ಯಾಧಿಕಾರಿ ಡಾ.ರಮೇಶ್ ಚಿಕಿತ್ಸೆ ನೀಡಿದ್ದು, ಚೇತರಿಸಿಕೊಳ್ಳುತ್ತಿದೆ ಎಂದು ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ.

ಕೃತ್ಯ ಎಸಗಿದ್ದ ಆರೋಪದ ಮೇರೆಗೆ ಆರೋಪಿಯನ್ನು ಬಂಧಿಸಿ ಕೃತ್ಯಕ್ಕೆ ಬಳಸಿದ್ದ ಒಂಟಿ ನಳಿಕೆಯ ಕೋವಿ ಹಾಗೂ ಕಾಡತೂಸುಗಳನ್ನು ವಶಕ್ಕೆ ಪಡೆಯಲಾಗಿದೆ. ಪ್ರಕರಣ ದಾಖಲಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದೆ.
 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.