ತುಮಕೂರು: ಬೇಟೆ ಅರಸಿ ಬಂದ ಚಿರತೆ ವಿದ್ಯುತ್ ಟ್ರಾನ್ಸ್ ಫಾರ್ಮರ್ ಗೆ ಸಿಲುಕಿ ಸಾವು!
ಆಹಾರ ಹುಡುಕಿಕೊಂಡು ಬಂದ ಚಿರತೆಯೊಂದು ವಿದ್ಯುತ್ ಟ್ರಾನ್ಸ್ ಫಾರ್ಮರ್ ಗೆ ಸಿಲುಕಿ ಸಾವನ್ನಪ್ಪಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.

ತುಮಕೂರು: ಆಹಾರ ಹುಡುಕಿಕೊಂಡು ಬಂದ ಚಿರತೆಯೊಂದು ವಿದ್ಯುತ್ ಟ್ರಾನ್ಸ್ ಫಾರ್ಮರ್ ಗೆ ಸಿಲುಕಿ ಸಾವನ್ನಪ್ಪಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.
ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕು ಕರೆಗೌಡನ ಪಾಳ್ಯದಲ್ಲಿ ಈ ಘಟನೆ ನಡೆದಿದ್ದು, ರೈತರೊಬ್ಬರು ತಮ್ಮ ಜಮೀನಿನಲ್ಲಿ ಅಳವಡಿಸಿದ್ದ ನೀರಾವರಿ ಪಂಪ್ ಸೇಟ್ ನ ವಿದ್ಯುತ್ ಪರಿವರ್ತಕಕ್ಕೆ (ಟ್ರಾನ್ಸ್‌ಫಾರ್ಮರ್) ಆಕಸ್ಮಿಕವಾಗಿ ಸಿಲುಕಿ ಶಾರ್ಟ್ ಸರ್ಕೀಟ್‌ನಿಂದ ಚಿರತೆ ಸಾವನ್ನಪ್ಪಿದೆ.
ಗ್ರಾಮದ ಶಾಲೆಯ ಹಿಂಭಾಗ ಆಹಾರ ಹುಡುಕಿ ಬಂದ ಚಿರತೆ ಮರದಿಂದ ಜಿಗಿದು ಕಂಬದ ಮೇಲೆ ಇದ್ದ ವಿದ್ಯುತ್ ಪರಿವರ್ತಕದ ಮೇಲೆ ಎಗರಿದೆ. ತಕ್ಷಣ ವಿದ್ಯುತ್ ಪ್ರವಹಿಸಿ ಕಂಬದಲ್ಲೇ ಸಾವನ್ನಪ್ಪಿದೆ ಎನ್ನಲಾಗಿದೆ.
ಇತ್ತೀಚಿನ ದಿನಗಳಲ್ಲಿ ಕಾಡು ಪ್ರಾಣಿಗಳಾದ ಚಿರತೆ, ಹುಲಿಗಳು ಆಹಾರ ಹುಡುಕಿ ನಾಡಿಗೆ ಬರುತ್ತಿದೆ. ಈ ಭಾಗದಲ್ಲಿ ಚಿರತೆಯ ಹಾವಳಿ ಹೆಚ್ಚಾಗಿದ್ದು, ಚಿರತೆ ಸೆರೆ ಹಿಡಿಯಲು ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಸ್ಥಳಕ್ಕೆ ಧಾವಿಸಿದ ವಲಯ ಅರಣ್ಯಾಧಿಕಾರಿ ಹಾಗೂ ಇಲಾಖೆ ಸಿಬ್ಬಂದಿ ಚಿರತೆಯ ಮೃತದೇಹವನ್ನು ಇಳಿಸಿ, ಮರಣೋತ್ತರ ಪರೀಕ್ಷೆಗೆ ಕಳುಹಿಸಿಕೊಟ್ಟಿದ್ದಾರೆನ್ನಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


