ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ 274 ಸಹ ಪ್ರಾಧ್ಯಾಪಕರಿಗೆ ಬಡ್ತಿ: ಸಚಿವ ಅಶ್ವತ್ಥ್ ನಾರಾಯಣ್
ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ 274 ಸಹ ಪ್ರಾಧ್ಯಾಪಕರಿಗೆ (ಅಸೋಸಿಯೇಟ್ ಪ್ರೊಫೆಸರ್ಸ್) ಪ್ರಾಧ್ಯಾಪಕರಾಗಿ ಬಡ್ತಿ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಉನ್ನತ ಶಿಕ್ಷಣ ಸಚಿವ ಅಶ್ವತ್ಥ್ ನಾರಾಯಣ್ ಅವರು ಹೇಳಿದ್ದಾರೆ.

ಬೆಂಗಳೂರು: ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ 274 ಸಹ ಪ್ರಾಧ್ಯಾಪಕರಿಗೆ (ಅಸೋಸಿಯೇಟ್ ಪ್ರೊಫೆಸರ್ಸ್) ಪ್ರಾಧ್ಯಾಪಕರಾಗಿ ಬಡ್ತಿ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಉನ್ನತ ಶಿಕ್ಷಣ ಸಚಿವ ಅಶ್ವತ್ಥ್ ನಾರಾಯಣ್ ಅವರು ಹೇಳಿದ್ದಾರೆ.
ಇದನ್ನೂ ಓದಿ: ವಿ.ವಿ ಗಳ ಅಕಾಡೆಮಿಕ್ ಕೌನ್ಸಿಲ್, ಸಿಂಡಿಕೇಟ್ ಸಭೆ ನೇರ ಪ್ರಸಾರ ವ್ಯವಸ್ಥೆಗೆ ಡಿಸೆಂಬರ್ ನಲ್ಲಿ ಚಾಲನೆ: ಸಚಿವ ಅಶ್ವತ್ಥ್ ನಾರಾಯಣ್
ಈ ಬಗ್ಗೆ ಗುರುವಾರ ಪತ್ರಿಕಾ ಪ್ರಕಟನೆ ನೀಡಿರುವ ಅವರು, ಸರಕಾರದ ಈ ನಿರ್ಧಾರದಿಂದ 274 ಸಹ ಪ್ರಾಧ್ಯಾಪಕರಿಗೆ ಮುಂಬಡ್ತಿ ಸಿಗಲಿದೆ. ಉನ್ನತ ಶಿಕ್ಷಣ ಇಲಾಖೆಯ ಭಾಗವಾಗಿರುವ ವೃತ್ತಿ ಸುಧಾರಣೆ ಆಯ್ಕೆ ಸಮಿತಿಯ ತೀರ್ಮಾನದ ಮೇಲೆ ಈ ಹೆಜ್ಜೆ ಇಡಲಾಗುತ್ತಿದೆ ಎಂದು ಹೇಳಿದರು.
ಯುಜಿಸಿ ಸಹ ಪ್ರಾಧ್ಯಾಪಕರಿಗೆ ಪ್ರೊಫೆಸರ್ ಗಳಾಗಿ ಬಡ್ತಿ ನೀಡಬಹುದೆಂದು 2010ರಲ್ಲೇ ಹೇಳಿದೆ. ಆದರೆ ಕಳೆದ 12 ವರ್ಷಗಳಿಂದ ಈ ವಿಚಾರದಲ್ಲಿ ಯಾವ ಪ್ರಗತಿಯೂ ಆಗಿರಲಿಲ್ಲ. ಈಗ ಸರಕಾರವು 274 ಅಸೋಸಿಯೇಟ್ ಪ್ರೊಫೆಸರುಗಳಿಗೆ ಬಡ್ತಿ ನೀಡಲು ಅಧಿಸೂಚನೆ ಹೊರಡಿಸಿದೆ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


