ಆರ್ಥಿಕ ಕೊರತೆ: ಮೊಬೈಲ್ ಕ್ಲಿನಿಕ್ ಸೇವೆಯಿಂದ ಹಿಂದೆ ಸರಿದ ಸರ್ಕಾರ!
ರಾಜ್ಯದಲ್ಲಿ ದ್ವಿತೀಯ ಆರೋಗ್ಯ ವ್ಯವಸ್ಥೆಯನ್ನು ಬಲಪಡಿಸಲು ನಮ್ಮ ಕ್ಲಿನಿಕ್ ಸೇವೆಯನ್ನು ಆರಂಭಿಸಿದ್ದು, ಸರ್ಕಾರದ ಈ ಉಪಕ್ರಮಕ್ಕೆ ಹಲವು ವಲಯಗಳಿಂದ ಶ್ಲಾಘನೆಗಳು ವ್ಯಕ್ತವಾಗುತ್ತಿವೆ. ಈ ನಡುವಲ್ಲೇ ಆರ್ಥಿಕ ಕೊರತೆಯಿಂದಾಗಿ ಸರ್ಕಾರ ಮೊಬೈಲ್ ಕ್ಲಿನಿಕ್ ಸೇವೆಯನ್ನು ಸ್ಥಗಿತಗೊಳಿಸಿದೆ ಎಂದು ತಿಳಿದುಬಂದಿದೆ.

ಬೆಂಗಳೂರು: ರಾಜ್ಯದಲ್ಲಿ ದ್ವಿತೀಯ ಆರೋಗ್ಯ ವ್ಯವಸ್ಥೆಯನ್ನು ಬಲಪಡಿಸಲು ನಮ್ಮ ಕ್ಲಿನಿಕ್ ಸೇವೆಯನ್ನು ಆರಂಭಿಸಿದ್ದು, ಸರ್ಕಾರದ ಈ ಉಪಕ್ರಮಕ್ಕೆ ಹಲವು ವಲಯಗಳಿಂದ ಶ್ಲಾಘನೆಗಳು ವ್ಯಕ್ತವಾಗುತ್ತಿವೆ. ಈ ನಡುವಲ್ಲೇ ಆರ್ಥಿಕ ಕೊರತೆಯಿಂದಾಗಿ ಸರ್ಕಾರ ಮೊಬೈಲ್ ಕ್ಲಿನಿಕ್ ಸೇವೆಯನ್ನು ಸ್ಥಗಿತಗೊಳಿಸಿದೆ ಎಂದು ತಿಳಿದುಬಂದಿದೆ.
ನಮ್ಮ ಕ್ಲಿನಿಕ್ ಗುರಿಯಂತೆಯೇ ರಾಜ್ಯ ಸರ್ಕಾರ ರಾಷ್ಟ್ರೀಯ ಆರೋಗ್ಯ ಮಿಷನ್ ಅಡಿಯಲ್ಲಿ ಮೊಬೈಲ್ ವೈದ್ಯಕೀಯ ಘಟಕಗಳ (ಎಂಎಂಯು) ಸೇವೆಯನ್ನು 2022ರ ಆರಂಭಿಕ ತಿಂಗಳಿನಲ್ಲಿ ಆರಂಭಿಸಿತ್ತು. ಈ ಸೇವೆಗೆ ಬಜೆಟ್ ಕೊರತೆ ಎದುರಾಗಿರುವ ಹಿನ್ನೆಲೆಯಲ್ಲಿ ಸೇವೆಗಳನ್ನು ಸ್ಥಗಿತಗೊಳಿಸಿದೆ ಎಂದು ವರದಿಗಳು ತಿಳಿಸಿವೆ.
12 ವಿವಿಧ ಕ್ಷೇತ್ರಗಳಲ್ಲಿ ಸರ್ಕಾರವು 70 ಎಂಎಂಯುಗಳನ್ನು ಒದಗಿಸಲು ಮುಂದಾಗಿತ್ತು. ದೂರದ ಪ್ರದೇಶಗಳಲ್ಲಿನ ತುರ್ತು ಸೇವೆಗಳನ್ನು ನೋಡಿಕೊಳ್ಳಲು ಸೇವೆ ಒದಗಿಸಲು ಸರ್ಕಾರ ನಿರ್ಧರಿಸಿತ್ತು. ತಾಯಿಯ ಆರೋಗ್ಯ, ಮಗುವಿನ ಆರೋಗ್ಯ, ವೃದ್ದಾಪ್ಯಾ ಆರೈಕೆ, ದಂತ ಮತ್ತು ಕಣ್ಣಿನ ಆರೈಕೆ ಗಳನ್ನು ನೋಡಿಕೊಳ್ಳಲಾಗುತ್ತದೆ ಎಂದು ಹೇಳಲಾಗಿತ್ತು.
ರಾಷ್ಟ್ರೀಯ ನಗರ ಆರೋಗ್ಯ ಮಿಷನ್ (NUHM) ಅಡಿಯಲ್ಲಿ ಈ ಸೇವೆಯನ್ನು ಆರಂಭಿಸಲಾಗುತ್ತದೆ ಎಂದು ಹೇಳಲಾಗಿತ್ತು. ಆದರೆ, 2022ರ ಜೂನ್.30ರಿಂದ ಸೇವೆಗಳು ಕಾರ್ಯನಿರ್ವಹಿಸುತ್ತಿಲ್ಲ ಎಂದು ತಿಳಿದುಬಂದಿದೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತರಾದ ಡಿ ರಂದೀಪ್ ಅವರು ಮಾತನಾಡಿ, ಬಜೆಟ್ ಕೊರತೆಗಳಿಂದಾಗಿ ಎಲ್ಲಾ ಎಂಎಂಯುಗಳನ್ನು ಏಪ್ರಿಲ್ 2022 ರಲ್ಲಿ ನಿಲ್ಲಿಸಲಾಗಿದೆ ಎಂದು ಖಚಿತಪಡಿಸಿದ್ದಾರೆ.
ಎನ್‌ಎಚ್‌ಎಂ ಆದೇಶದಂತೆ ಎಂಎಂಯು ಘಟಕಕ್ಕೆ ರೂ 1.55 ಲಕ್ಷ ಅಗತ್ಯವಿರುತ್ತದೆ. ಅದಾಗ್ಯೂ ಮುಂಬರುವ ವರ್ಷದಲ್ಲಿ 3.34 ಲಕ್ಷ ರೂ.ಗಳ ವೆಚ್ಚದಲ್ಲಿ 34 ಘಟಕಗಳ ಸ್ಥಾಪನೆಗೆ ಮುಂದಾಗಲಾಗಿತ್ತು. ಆದರೆ, ಘಟಕ ಸ್ಥಾಪನೆಗೆ ಹಣ ಸಾಕಾಗದೇ ಇರುವುದರಿಂದ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ: 114 ನಮ್ಮ ಕ್ಲಿನಿಕ್ಗಳಿಗೆ ಸಿಎಂ ಬೊಮ್ಮಾಯಿ ಚಾಲನೆ; ಜನವರಿ ಅಂತ್ಯಕ್ಕೆ ಎಲ್ಲಾ 438 ಕ್ಲಿನಿಕ್ಗಳು ಆರಂಭ
ಕರ್ನಾಟಕದ ಹೊರತಾಗಿ, ಬಿಹಾರ, ತೆಲಂಗಾಣ, ಮಧ್ಯಪ್ರದೇಶ ಮತ್ತು ಗೋವಾಗಳಲ್ಲಿಯೂ ಸೇವೆಗಳು ಸ್ಥಗಿತಗೊಂಡಿವೆ ಎಂದು ವರದಿಗಳು ತಿಳಿಸಿವೆ.
ಕನ್ಸರ್ನ್ಡ್ ಫಾರ್ ವರ್ಕಿಂಗ್ ಚಿಲ್ಡ್ರನ್ (ಸಿಡಬ್ಲ್ಯುಸಿ) ಎಂಬ ಎನ್‌ಜಿಒ ಸಂಸ್ಥೆಯ ಸಂಯೋಜಕಿ ಕೃಪಾ ಭಟ್ ಅವರು ಮಾತನಾಡಿ, ಸರ್ಕಾರವು ಹಲವಾರು ರೀತಿಯ ಯೋಜನೆಗಳನ್ನು ತರುತ್ತದೆ ಆದರೆ ಅವುಗಳಲ್ಲಿ ಹಲವು ಯೋಜನೆಗಳಿಗೆ ಅನುಷ್ಠಾನದ ಕೊರತೆಯಿರುತ್ತದೆ ಎಂದು ಹೇಳಿದ್ದಾರೆ.
ಹಲವಾರು ಪಂಚಾಯತ್ ಮತ್ತು ತಾಲೂಕು ಮಟ್ಟದ ಸಾರ್ವಜನಿಕ ಆರೋಗ್ಯ ಕೇಂದ್ರಗಳಲ್ಲಿ (PHC) ಲಭ್ಯವಿರುವ ಸೇವೆಗಳ ಗುಣಮಟ್ಟವು ಉತ್ತಮವಾಗಿರುವುದಿಲ್ಲ. ಮೂಲಭೂತ ಸೇವೆಗಳನ್ನು ಪಡೆಯಲು ನಾಗರಿಕರು ದೂರದ ಪ್ರಯಾಣವನ್ನು ಮಾಡಬೇಕಾಗುತ್ತದೆ. ದೂರದ ಪ್ರದೇಶಗಳಲ್ಲಿರುವ ಜನರಿಗೆ ವೈದ್ಯಕೀಯ ಸೇವೆ ಒದಗಿಸುವ ಎಂಎಂಯುಗಳು ಉತ್ತಮ ಪರಿಕಲ್ಪನೆಯಾಗಿದೆ ಎಂದು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


