ಮೈಸೂರಿನಲ್ಲಿ ಸಾರ್ವಜನಿಕವಾಗಿ ಕೆಎಸ್‌ಆರ್‌ಟಿಸಿ ಅಧಿಕಾರಿಗಳಿಗೆ ಮಚ್ಚು ತೋರಿಸಿ ಬೆದರಿಕೆ ಹಾಕಿದ್ದ ದಂಪತಿ ಬಂಧನ
ಮೈಸೂರು ನಗರದ ಬಸ್ ಡಿಪೋದಲ್ಲಿದ್ದ ಅಂಗಡಿಗಳನ್ನು ತೆರವು ಮಾಡುವ ಸಂದರ್ಭದಲ್ಲಿ ಪೊಲೀಸರ ಸಮ್ಮುಖದಲ್ಲಿಯೇ ಸರ್ಕಾರಿ ಅಧಿಕಾರಿಗಳಿಗೆ ಮಚ್ಚು ತೋರಿಸಿ ಬೆದರಿಸಿದ ಆರೋಪದ ಮೇಲೆ ಕಾಂಗ್ರೆಸ್ ಮುಖಂಡ ಎನ್ನಲಾದ ಆರೋಪಿ ಪತಿ ಮತ್ತು ಆತನ ಹೆಂಡತಿಯನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಮೈಸೂರು: ನಗರದ ಬಸ್ ಡಿಪೋದಲ್ಲಿದ್ದ ಅಂಗಡಿಗಳನ್ನು ತೆರವು ಮಾಡುವ ಸಂದರ್ಭದಲ್ಲಿ ಪೊಲೀಸರ ಸಮ್ಮುಖದಲ್ಲಿಯೇ ಸರ್ಕಾರಿ ಅಧಿಕಾರಿಗಳಿಗೆ ಮಚ್ಚು ತೋರಿಸಿ ಬೆದರಿಸಿದ ಆರೋಪದ ಮೇಲೆ ಕಾಂಗ್ರೆಸ್ ಮುಖಂಡ ಎನ್ನಲಾದ ಆರೋಪಿ ಪತಿ ಮತ್ತು ಆತನ ಹೆಂಡತಿಯನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.
ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗುತ್ತಿದ್ದಂತೆ ದಂಪತಿ ತಲೆಮರೆಸಿಕೊಂಡಿದ್ದರು. ಆದರೆ, ಈಗ ಅವರನ್ನು ಬಂಧಿಸಲಾಗಿದೆ ಎಂದು ಮೈಸೂರು ಪೊಲೀಸ್ ಆಯುಕ್ತ ರಮೇಶ್ ಬಾನೋತ್ ತಿಳಿಸಿದ್ದಾರೆ.
ಬಂಧಿತರನ್ನು ಕಾಂಗ್ರೆಸ್ ಮುಖಂಡ ಶಫೀಕ್ ಅಹ್ಮದ್ ಮತ್ತು ಅವರ ಪತ್ನಿ ಸೈಯದ್ ಮುನಿಬುನ್ನಿಸಾ ಎಂದು ಗುರುತಿಸಲಾಗಿದೆ. ಇಬ್ಬರನ್ನೂ ಪೊಲೀಸರು ರೌಡಿ ಶೀಟರ್‌ಗಳ ಪಟ್ಟಿಗೆ ಸೇರಿಸಿದ್ದಾರೆ ಎಂದು ತಿಳಿಸಿದರು.
ಆರೋಪಿ ದಂಪತಿ ಇತರ ಕೆಲವರ ಜೊತೆ ಸೇರಿ ಸಾತಗಳ್ಳಿ ಬಸ್ ಡಿಪೋದ ಆವರಣದಲ್ಲಿನ ತಮ್ಮ ಅಂಗಡಿಗಳನ್ನು ತೆರವುಗೊಳಿಸುವಂತೆ ನೋಟಿಸ್ ನೀಡಿದ್ದ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್‌ಆರ್‌ಟಿಸಿ) ಅಧಿಕಾರಿಗಳಿಗೆ ಮಚ್ಚು ತೋರಿಸಿ ಬೆದರಿಕೆ ಹಾಕಿದ್ದರು.
ಇದನ್ನೂ ಓದಿ: ಬಾಡಿಗೆ ಕೇಳಿದ್ದಕ್ಕೆ ಮಚ್ಚು ಹಿಡಿದು KSRTC ಅಧಿಕಾರಿಗಳಿಗೇ ಅವಾಜ್ ಹಾಕಿದ ಕಾಂಗ್ರೆಸ್ ಮುಖಂಡ ಶಫಿ, ಪತ್ನಿ..!
ದಂಪತಿ ಎರಡು ವರ್ಷಗಳಿಂದ ಬಾಡಿಗೆ ಪಾವತಿಸದ ಕಾರಣ ನ್ಯಾಯಾಲಯದ ಆದೇಶದಂತೆ ಈ ಕ್ರಮ ಕೈಗೊಳ್ಳಲಾಗಿದೆ. ಡಿಸೆಂಬರ್ 10 ರಂದು ಈ ಘಟನೆ ನಡೆದಿದ್ದು, ಇತರ ಮಹಿಳೆಯರೊಂದಿಗೆ ದಂಪತಿ ಅಧಿಕಾರಿಗಳನ್ನು ನಿಂದಿಸಿದ್ದರು ಮತ್ತು ಮಚ್ಚು ತೋರಿಸಿ ಬೆದರಿಸಿದ್ದರು.
ಅದು ವಿವಾದಕ್ಕೆ ತಿರುಗಿದಾಗ ಅವರು ತಲೆಮರೆಸಿಕೊಂಡಿದ್ದರು. ಈ ಕುರಿತು ಕೆಎಸ್‌ಆರ್‌ಟಿಸಿ ವಿಭಾಗೀಯ ಸಾರಿಗೆ ಅಧಿಕಾರಿ ಮರಿಗೌಡ ಅವರು ಮೈಸೂರಿನ ಉದಯಗಿರಿ ಪೊಲೀಸರಿಗೆ ದೂರು ನೀಡಿದ್ದರು.
ಘಟನೆಯ ಫೋಟೋಗಳು ಮತ್ತು ವಿಡಿಯೋಗಳು ವೈರಲ್ ಆಗಿವೆ. ಪಕ್ಕದ ಕೊಡಗು ಜಿಲ್ಲೆಯ ಹಳ್ಳಿಯಲ್ಲಿ ದಂಪತಿ ಪತ್ತೆಯಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇತರ ಮೂವರು ಆರೋಪಿಗಳಿಗಾಗಿ ಶೋಧ ಕಾರ್ಯ ಆರಂಭಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


